ಕತಾರ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ
Team Udayavani, Apr 7, 2021, 6:08 PM IST
ಕತಾರ್ : ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 75 ವಾರಗಳ ಸುದೀರ್ಘ ಅವಧಿಯ ವಿವಿಧ ಕಾರ್ಯಕ್ರಮಗಳನ್ನು ಕತಾರ್‌ನಲ್ಲಿ ಆಯೋಜಿಸಲಾಗಿದೆ. ಈ ಆಚರಣೆಗೆ ಭಾರತ ಸರಕಾರ ಅಧಿಕೃತವಾಗಿ ಆಜಾದಿ ಕಾ ಅಮೃತ ಮಹೋತ್ಸವ ಎಂದು ಹೆಸರಿಸಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಕತಾರ್‌ನ ಭಾರತದ ರಾಯಭಾರ ಕಚೇರಿಯಲ್ಲಿ ಮಾ. 26ರಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.
ಕೋವಿಡ್ ನಿಯಮಾವಳಿಯನ್ನು ಪಾಲಿಸುವ ಹಿನ್ನೆಲೆಯಲ್ಲಿ ಈ ಸಮಾರಂಭವು ರಾಯಭಾರ ಕಚೇರಿಯ ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ಐಸಿಸಿ ನಿರ್ವಹಣಾ ಸಮಿತಿಯ ಸದಸ್ಯರಿಗೆ ಮಾತ್ರ ಸೀಮಿತವಾಗಿತ್ತು.
ಮುಖ್ಯ ಅತಿಥಿ, ಭಾರತದ ರಾಯಭಾರಿ ಡಾ| ದೀಪಕ್ ಮಿತ್ತಲ್ ಅವರು ದೀಪ ಬೆಳಗಿ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಭ್ರಮಾಚರಣೆಯ ಅಂಗವಾಗಿ 75 ಜನರಿಗೆ ಉಚಿತ ಐಸಿಬಿಎಫ್ ಜೀವ ವಿಮೆ ಮತ್ತು ಐಸಿಸಿಎಫ್ ಅಧಿಕಾರಿಗಳಿಗೆ ಐಸಿಸಿಯಿಂದ ನೀಡಿದ ನಿಧಿಯನ್ನು ಹಸ್ತಾಂತರಿಸಲಾಯಿತು.
ಸಮಾರಂಭದ ಅನಂತರ ವರ್ಚುವಲ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಎಚ್.ಇ. ಖಾಲಿದ್ ಬಿನ್ ಇಬ್ರಾಹಿಂ ಅಲ್- ಹಮರ್, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರ್ದೇಶಕ, ಕತಾರ್ ಮತ್ತು ಭಾರತದ ರಾಯಭಾರಿಗಳು ಸಭೆಯಲ್ಲಿ ಮಾತನಾಡಿದರು.
ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಐಸಿಸಿ ಅಂಗಸಂಸ್ಥೆಗಳೊಂದಿಗೆ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಉತ್ಸವಗಳನ್ನು ಚಿತ್ರಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಯಿತು.
ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75)ದ ಉದ್ಘಾಟನೆ ಕಾರ್ಯಕ್ರಮದಲ್ಲಿ ತುಳುಕೂಟ ಕತಾರ್‌ನ ಪ್ರತಿಭಾನ್ವಿತ ಸದಸ್ಯರಿಂದ ತುಳು ನೃತ್ಯ ರೂಪಕವನ್ನು ಪ್ರಸ್ತುತ
ಪಡಿಸಿದರು. ಈ ರೂಪಕದಲ್ಲಿ ಚೇತನಾ ಅಡಪ, ಅಪರ್ಣಾ ಶರತ್, ಲಾವಣ್ಯಾ ಆಚಾರ್, ದಿವ್ಯಶ್ರೀ, ಸೌಮ್ಯಾ ಕೆ.ಟಿ., ಸೀಮಾ ಉಮೇಶ್ ಪೂಜಾರಿ, ಅನುಷ್ಕಾ ಉಮೇಶ್ ಪೂಜಾರಿ, ಸುಬೋಧ್ ಶೆಟ್ಟಿ, ಸುಹಾಸ್ ಶೆಟ್ಟಿ, ಗಿರೀಶ್ ಪುರಾಣಿಕ್, ಸುರೇಶ್ ಭಟ್, ಪುನೀತ್ ಸಾಗರ್, ಅಮಿತ್ ಪೂಜಾರಿ, ಮಂಜು ಕಗೇìರ್, ಅನುಷ್ಕಾ ಉಮೇಶ್ ಪೂಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.