2ಎ ಮೀಸಲು ಆದೇಶ ಸಿಗುವವರೆಗೆ ವಿಶ್ರಮಿಸಲಾರೆ : ಮೃತ್ಯುಂಜಯ ಶ್ರೀ

ಪಂಚಮಸಾಲಿ ಸಮಾಜದ ಶರಣು ಶರಣಾರ್ಥಿ ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಬಸವಜಯ ಮೃತ್ಯುಂಜಯ ಶ್ರೀ ಘೋಷಣೆ

Team Udayavani, Apr 7, 2021, 8:43 PM IST

dbsdre

ವಿಜಯಪುರ: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಮೀಸಲಾತಿಗೆ ಸೇರಿಸುವವರೆಗೆ ನಾನು ಹೋರಾಟದಿಂದ ವಿಶ್ರಮಿಸಲಾರೆ. ನಮ್ಮ ಸಮುದಾಯಕ್ಕೆ ಮೀಸಲು ಕಲ್ಪಿಸುವ ಕುರಿತು ಹಲವು ಬಾರಿ ಮಾಡಿದ ಮನವಿ, ನಡೆಸಿದ ಹೋರಾಟಗಳು ಹಾಗೂ ಆಗೆಲ್ಲ ಸರ್ಕಾರ ನೀಡಿದ ಭರವಸೆಗಳು ಹುಸಿಯಾಗಿವೆ. ಹೀಗಾಗಿ ಈ ಬಾರಿಯ ಹೋರಾಟ ಮೀಸಲಾತಿ ಸಿಗುವವರೆಗೆ ನಿರಂತರವಾಗಿ ನಡೆಯಲಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಪುನರುಚ್ಚರಿಸಿದ್ದಾರೆ.

ಮಂಗಳವಾರ ನಗರದ ಸಿದ್ದೇಶ್ವರ ಕಲಾ ಭವನದಲ್ಲಿ ತಮ್ಮ ಸಾನ್ನಿಧ್ಯದಲ್ಲಿ ಅಖೀಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಏರ್ಪಡಿಸಿದ್ದ ಶರಣು ಶರಣಾರ್ಥಿ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದರು. ಕೃಷಿಯನ್ನೇ ನಂಬಿರುವ ಪಂಚಮಸಾಲಿ ಸಮಾಜದ ಜನರು ಅತ್ಯಂತ ಮುಗªರು. ಶ್ರಮಿಕರು, ಕಾರ್ಮಿಕರ ಸಂಖ್ಯೆಯೇ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಬೆರಳಣಿಕೆಯಷ್ಟು ಜನ ಮಾತ್ರ ಶೈಕ್ಷಣಿಕ, ಔದ್ಯೋಗಿಕ ಹಾಗೂ ಆರ್ಥಿಕವಾಗಿ ಮುಂದುವರಿದಿದ್ದಾರೆ. ಹೀಗಾಗಿ ಹಿಂದುಳಿದ ನಮ್ಮ ಸಮುದಾಯವನ್ನು ಪ್ರವರ್ಗ 2ಎ ಪಟ್ಟಿಗೆ ಸೇರಿಸಲು ಆಗ್ರಹಿಸಿ ಕಳೆದ 27 ವರ್ಷಗಳಿಂದ ಹೋರಾಟಗಳನ್ನು ನಡೆಸುತ್ತಲೇ ಇದ್ದೇವೆ. ಆಯಾ ಕಾಲದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಮಾತ್ರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ದೂರಿದರು.

ಇದೀಗ ಮಾಡು ಇಲ್ಲವೇ ಮಡಿ ಘೋಷಣೆಯೊಂದಿಗೆ ಪಂಚಲಕ್ಷ ಪಾದಯಾತ್ರೆ ಮೂಲಕ ಬೆಂಗಳೂರಿಗೆ ತೆರಳಿ, ಅರಮನೆ ಮೈದಾನದಲ್ಲಿ 10 ಲಕ್ಷ ಜನರೊಂದಿಗೆ ನಡೆಸಿದ ಐತಿಹಾಸಿಕ ಸಮಾವೇಶ ನಡೆಸಲಾಗಿದೆ. ಉಪವಾಸ ಸತ್ಯಾಗ್ರಹ ಹೀಗೆ ಹಲವು ಸ್ವರೂಪದ ಚಳುವಳಿಗಳು ಸರಕಾರ ಕಣ್ತೆರೆಯುವಂತೆ ಮಾಡಿದೆ. ಸಮಾಜದ ಜನರ ಒಗ್ಗಟ್ಟಿನ ಫಲವಾಗಿ ಹೋರಾಟ ಯಶಸ್ವಿಯಾಗಿದೆ. ಇದಕ್ಕಾಗಿ ನಿಮ್ಮ ಸಹಕಾರಕ್ಕೆ ಧನ್ಯವಾದಗಳನ್ನು ಸಮರ್ಪಿಸಲು ಶರಣು ಶರಣಾರ್ಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರ 6 ತಿಂಗಳ ಸಮಯ ಕೇಳಿದೆ. ನೀಡಿದ ಗಡುವಿನಲ್ಲಿ 2ಎ ಮೀಸಲು ಸೌಲಭ್ಯ ಕಲ್ಪಿಸದಿದ್ದಲ್ಲಿ 20 ಲಕ್ಷ ಜನ ಬೆಂಗಳೂರು ಛಲೋ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.

ಅಖೀಲ ಭಾರತ ಪಂಚಮಸಾಲಿ ಸಮಾಜದ ಅಧ್ಯಕ್ಷ ಡಾ| ವಿಜಯಾನಂದ ಕಾಶಪ್ಪನವರ ಮಾತನಾಡಿ, ಪಂಚಮಸಾಲಿ ಸಮುದಾಯದ ಮೀಸಲು ಸೌಲಭ್ಯದ ಹೋರಾಟಕ್ಕೆ ಪಂಚಮಸಾಲಿ ಸಮಾಜದ ತವರು, ರಾಜಧಾನಿ ಎನಿಸಿರುವ ವಿಜಯಪುರ ಜಿಲ್ಲೆ ಪ್ರೇರಣೆ ನೀಡಿದೆ. ವಿಜಯಪುರ ಜಿಲ್ಲೆಯ ಜನರು ಅಗತ್ಯದ ಸಂದರ್ಭದಲ್ಲಿ ತಮ್ಮ ಹಕ್ಕುಗಳನ್ನು ಪಡೆಯಲು ನಿಣಾಯಕ ಹೋರಾಟಕ್ಕೂ ಸಿದ್ಧ ಎಂಬುದನ್ನು ಅಖಂಡ ವಿಜಯಪುರ ಜಿಲ್ಲೆಯ ಜನ ಮನವರಿಕೆ ಮಾಡಿಕೊಟ್ಟಿದ್ದೀರಿ. ಇದಕ್ಕಾಗಿ ನೇರ ಹಾಗೂ ಪರೋಕ್ಷ ಸಹಕಾರ ನೀಡಿದ ಸಮಾಜದ ಎಲ್ಲರಿಗೂ ನಾವುಗಳು ಋಣಿಯಾಗಿದ್ದೇವೆ ಎಂದರು.

ಡಾ| ಬಸನಗೌಡ ಪಾಟೀಲ (ನಾಗರಾಳ ಹುಲಿ), ಡಾ| ಸಿ.ಎಸ್‌. ಸೋಲಾಪುರ, ರಾಜುಗೌಡ ಪಾಟೀಲ (ಜಾಲಗೇರಿ), ಮಲ್ಲನಗೌಡ ಪಾಟೀಲ, ಅಂಬರೀಶ ನಾಗೂರ, ಶಂಕರಗೌಡ ಬಿರಾದಾರ, ಎಂ.ಎಸ್‌. ರುದ್ರಗೌಡರ, ಶ್ರೀಶೈಲ ಬುಕ್ಕಾಣಿ, ನಿಂಗನಗೌಡ ಸೋಲಾಪುರ, ವಿದ್ಯಾರಾಣಿ ತುಂಗಳ, ಇ.ಎಸ್‌. ನಿರಂಜನಕುಮಾರ, ಶಿವಕುಮಾರ ಮೇಟಿ ಮಾತನಾಡಿದರು. ಅಪ್ಪಾಸಾಬ ಯರನಾಳ, ಶರಣಪ್ಪ ಜಂಬಗಿ, ಸಿದ್ದು ಅವಟಿ, ಮಂಜು ನಿಡೋಣಿ, ಸಂತೋಷ ಇಂಡಿ, ಅಶೋಕ ಚಳ್ಳಗಿ, ಸದಾಶಿವ ಅಳ್ಳಿಗಿಡದ, ಬಸಮ್ಮ ಗುಜರಿ, ಜ್ಯೋತಿ ಪಾಗಾದ, ಮುತ್ತಕ್ಕ ಪಾಗಾದ, ಪಾರ್ವತಿ ಮಸೂತಿ, ಶೋಭಾ ಬಿರಾದಾರ, ಕಾವೇರಿ ಪಾಟೀಲ, ಕಮಲಾ ಗೆಜ್ಜಿ, ಜಯಶ್ರೀ ಬಿರಾದಾರ, ಮಹಾದೇವಿ ಕೊಪ್ಪದ ಸೇರಿದಂತೆ ಇತರರು ಇದ್ದರು. ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ. ಪಾಟೀಲ (ದೇವರಹಿಪ್ಪರಗಿ) ಸ್ವಾಗತಿಸಿದರು. ರಶ್ಮಿ ಚಳ್ಳಗಿ ನಿರೂಪಿಸಿದರು. ದಾನೇಶ ಅವಟಿ ವಂದಿಸಿದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.