ಅಕಾಲಿಕ ಮಳೆಯಿಂದ ಬೆಳೆ ನಾಶ-ಪರಿಶೀಲನೆ
Team Udayavani, Apr 7, 2021, 8:58 PM IST
ಯಾದಗಿರಿ: ನಗರದಲ್ಲಿ ಸೋಮವಾರ ಸಾಯಂಕಾಲ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿದ್ದ ಶೇಂಗಾ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಎಪಿಎಂಸಿ ಆವರಣದಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿದ್ದ 50-60 ಕ್ವಿಂಟಲ್ ಶೇಂಗಾ ಮಳೆಯಿಂದ ನಷ್ಟವಾಗಿದ್ದು, ಕೂಡಲೇ ನಷ್ಟಕ್ಕೆ ಒಳಗಾದ 13 ರಿಂದ 15 ಜನ ರೈತರಿಗೆ ಸರ್ಕಾರದಿಂದ ಪರಿಹಾರಕ್ಕಾಗಿ ಪತ್ರ ಬರೆದು ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಭೀಮರಾಯ ಕಲ್ಲೂರು, ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಮಂಗಲಾ ದೇವಿ, ವರ್ತಕರ ಸಂಘದ ಅಧ್ಯಕ್ಷರು ಹಾಗೂ ಬೆಳೆ ನಷ್ಟಕ್ಕೆ ಒಳಗಾದ ರೈತರು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.