ಸೋಂಕಿನ ನಡುವೆ ಲಸಿಕೆ ಜಗಳ : ಮಹಾ ಸಚಿವರಿಗೆ ಕೇಂದ್ರ ತರಾಟೆ

Team Udayavani, Apr 8, 2021, 2:15 AM IST

ಸೋಂಕಿನ ನಡುವೆ ಲಸಿಕೆ ಜಗಳ : ಮಹಾ ಸಚಿವರಿಗೆ ಕೇಂದ್ರ ತರಾಟೆ

ಮುಂಬಯಿ/ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕಿನ ಸಮಸ್ಯೆಯ ನಡುವೆಯೇ ಕೇಂದ್ರ ಮತ್ತು ಕೆಲವು ರಾಜ್ಯಗಳ ನಡುವೆ “ಲಸಿಕೆ ಜಗಳ’ ಶುರುವಾಗಿದೆ. “ಲಸಿಕೆ ಕೊರತೆ ಯಾಗಿದೆ. ಹೆಚ್ಚುವರಿ ಡೋಸ್‌ ನೀಡಿ’ ಎಂದು ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳು ಮನವಿ ಮಾಡಿಕೊಂಡಿವೆ. ಎರಡು ರಾಜ್ಯಗಳ ಧೋರಣೆ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷ ವರ್ಧನ್‌ ಕಟುವಾಗಿ ಆಕ್ಷೇಪ ಮಾಡಿದ್ದಾರೆ.

ಲಸಿಕೆ ನೀಡಿಕೆಯಲ್ಲಿ ಮತ್ತು ಕೊರೊನಾ ನಿಯಂತ್ರಣ  ದಲ್ಲಿ ಕೆಲವು ರಾಜ್ಯಗಳು ನಿಗದಿತ ಗುರಿ ಸಾಧಿಸಿಲ್ಲ. ಈ ವೈಫ‌ಲ್ಯ ಮುಚ್ಚಿಕೊಳ್ಳಲು ಲಸಿಕೆಯ ಕೊರತೆ ಉಂಟಾಗಿದೆ ಎಂದು ಪುಕಾರು ಹುಟ್ಟಿಸಲಾಗುತ್ತಿದೆ. ಲಸಿಕೆ ಕೊರತೆ ಉಂಟಾಗಿದೆ ಎಂಬ ಅಂಶವೇ ಅಧಾರ ರಹಿತ ಎಂದು ಸಚಿವ ಹರ್ಷವರ್ಧನ್‌ ಬುಧವಾರ ತಿಳಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ಸರಿಯಾದ ರೀತಿಯಲ್ಲಿ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿಲ್ಲ. ಹೀಗಾಗಿಯೇ ಅಲ್ಲಿನ ಆರೋಗ್ಯ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವರು ಆರೋಪಿಸಿದ್ದಾರೆ. ಇಂಥ ಹೇಳಿಕೆ ಮೂಲಕ ರಾಜ್ಯವನ್ನು ಮತ್ತಷ್ಟು ಅಪಾಯದ ಸ್ಥಿತಿಯತ್ತ ಕೊಂಡೊಯ್ಯಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಗ್ಯ ಕಾರ್ಯಕರ್ತರಿಗೇ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲಾಗಿಲ್ಲ ಎಂದಿದ್ದಾರೆ.

ಕರ್ನಾಟಕದಲ್ಲಿ ಸುಧಾರಣೆ ಬೇಕು: ಕರ್ನಾಟಕ, ರಾಜಸ್ಥಾನ ಮತ್ತು ಗುಜರಾತ್‌ಗಳಲ್ಲಿ ಕೊರೊನಾ ಪತ್ತೆ ಮಾಡುವ ಪರೀಕ್ಷೆಗಳ ಗುಣಮಟ್ಟ ಮತ್ತಷ್ಟು ಬಲಗೊಳ್ಳಬೇಕು. ಪಂಜಾಬ್‌ನಲ್ಲಿಯೂ ಕೂಡ ಸೋಂಕಿನಿಂದ ಸಾವಿನ ಪ್ರಮಾಣ ಸುಧಾರಣೆಯಾಗ ಬೇಕಾಗಿದೆ ಎಂದು ಹೇಳಿದ್ದಾರೆ ಹರ್ಷವರ್ಧನ್‌.

ಅಗತ್ಯ ಇರುವವರಿಗೆ ಮೊದಲು: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಹೇಳಿಕೆ ನೀಡಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಸಲಹೆಗೂ ಕೇಂದ್ರ ಸಚಿವರು ಆಕ್ಷೇಪಿಸಿದ್ದಾರೆ. ಅಗತ್ಯ ಇರುವ ಗುಂಪುಗಳಿಗೆ ಮೊದಲು ಲಸಿಕೆ ನೀಡುವುದೇ ಕೇಂದ್ರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಸಾವಿನ ಪ್ರಮಾಣ ತಗ್ಗಿಸುವುದೇ ಲಸಿಕೆ ನೀಡಿಕೆ ಉದ್ದೇಶ ಎಂದಿದ್ದಾರೆ ಹರ್ಷವರ್ಧನ್‌.

ಮಹಾರಾಷ್ಟ್ರ ಸಚಿವರು ಹೇಳಿದ್ದೇನು?: ಮಹಾರಾಷ್ಟ್ರದಲ್ಲಿ 14 ಲಕ್ಷ ಡೋಸ್‌ಗಳು ಮಾತ್ರ ಉಳಿದಿವೆ. ಅವುಗಳನ್ನು ಇನ್ನು ಮೂರು ದಿನಗಳಿಗೆ ಮಾತ್ರ ಬಳಕೆ ಮಾಡಬಹುದು ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದರು. ಹೀಗಾಗಿ ರಾಜ್ಯದಲ್ಲಿನ ಲಸಿಕಾ ಕೇಂದ್ರಗಳನ್ನು ಮುಚ್ಚುವ ಅನಿವಾರ್ಯ ಸ್ಥಿತಿ ಉಂಟಾಗಿದೆ. ಕೇಂದ್ರಕ್ಕೆ ಲಸಿಕೆ ಗಾಗಿ ಬರುವ ಜನರನ್ನು ವಾಪಸ್‌ ಕಳುಹಿಸಬೇಕಾಗಿದೆ ಎಂದು ಹೇಳಿಕೆ ನೀಡಿದ್ದರು. ಬೃಹನ್ಮುಂಬಯಿ ಪಾಲಿಕೆ ಮೇಯರ್‌ ಕೂಡ ಲಸಿಕೆ ಕೊರತೆ ಬಗ್ಗೆ ಮಾತನಾಡಿದ್ದರು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.