ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ
Team Udayavani, Apr 8, 2021, 8:34 AM IST
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ.
ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ.
ಇದನ್ನೂ ಓದಿ:ಸಾರಿಗೆ ಸವ್ವಾ ಸೇರು : ತಿಂಗಳಾದರೂ ಖಾಸಗಿ ಬಸ್ ಓಡಿಸಲು ಸರಕಾರ ಸಿದ್ಧತೆ
ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೂಂದೆಡೆ ನೌಕರರನ್ನು ಮಣಿಸಲು ಒಂದೊಂದೇ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಈ ಪೈಕಿ ಬುಧವಾರ ಸಂಜೆ ಸಾರಿಗೆ ನಿಗಮಗಳ ಉನ್ನತ ಅಧಿಕಾರಿಗಳು ಸಭೆ ನಡೆಸಿ, ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರರನ್ನು ಕೈಬಿಡಲು ಚಿಂತನೆ ನಡೆಸಿದ್ದಾರೆ. ಈ ಸಂಬಂಧ ಕೆಳ ಹಂತದ ಅಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಗಿದೆ. ಬಿಎಂಟಿಸಿಯಲ್ಲೂ ಸೇರಿದಂತೆ ಸಾವಿರಾರು ತರಬೇತಿ ನೌಕರ ರಿದ್ದು, ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ಪರೀಕ್ಷೆಗಳು ಮುಂದೂಡಿಕೆ: ರಾಜ್ಯ ಸಾರಿಗೆ ನೌಕರರ ಮುಷ್ಕರದಿಂದಾಗಿ ಬೆಂಗಳೂರು ವಿವಿ ಮತ್ತು ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿವೆ.
ಕರಾವಳಿಗೆ ತಟ್ಟದ ಬಂದ್ ಬಿಸಿ: ಖಾಸಗಿ ಬಸ್ ಗಳೇ ಹೆಚ್ಚಾಗಿ ಓಡಾಡುವ ಕರಾವಳಿ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ. ಬುಧವಾರ ಹೊರಜಿಲ್ಲೆಗಳಿಗೆ ಹೋಗುವ ಕೆಲ ಪ್ರಯಾಣಿಕರು ಪರದಾಡಿದರೂ, ಖಾಸಗಿ ಬಸ್ ಗಳನ್ನು ಬಳಸಿದ್ದರಿಂದ ದೊಡ್ಡ ಮಟ್ಟದ ತೊಂದರೆ ಸಂಭವಿಸಿಲ್ಲ.
ಇದನ್ನೂ ಓದಿ: ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಪರ್ಯಾಯ ವ್ಯವಸ್ಥೆ : ಲಕ್ಷ್ಮಣ ಸವದಿ
ಚಿಕ್ಕಮಗಳೂರಿನಲ್ಲೂ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಬಸ್- ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಕಂಡುಬಂತು. ಕೆಎಸ್ಆರ್ ಟಿಸಿ ಬಸ್ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರೂ ಬಸ್ ನಿಲ್ದಾಣದತ್ತಾ ಮುಖ ಮಾಡಿಲ್ಲ. ಖಾಸಗಿ ಬಸ್ ಗಳಿದ್ದರೂ ಜನರು ಅಷ್ಟಾಗಿ ಒಲವು ತೋರಿಲ್ಲ. ಹೀಗಾಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ದರ್ಬಾರ್ ನಡೆಯುತ್ತಿದ್ದು, ಟಿಟಿ ವಾಹನ ಮುಂತಾದವುಗಳನ್ನು ಜನರು ಆಶ್ರಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.