ಸರ್ಕಾರಿ ನೌಕರರ ದಿನ ಸರಳ ಆಚರಣೆ
Team Udayavani, Apr 8, 2021, 6:30 PM IST
ಚಿಕ್ಕಮಗಳೂರು: ಕೋವಿಡ್-19 2ನೇ ಅಲೆ ರಾಜ್ಯದ್ಯಾಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ದಿನಾಚರಣೆಯನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸರಳವಾಗಿ ಆಚರಿಸುವಂತೆ ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್
ತಿಳಿಸಿದರು.
ಬುಧವಾರ ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.21ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯ
ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏ.21ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಕೋವಿಡ್-19 ಮಾರ್ಗಸೂಚಿಗಳಾದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವ ಮೂಲಕ ಕಾರ್ಯಕ್ರಮವನ್ನು ಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಹೇಳಿದರು.
ಸರ್ಕಾರಿ ನೌಕರರ ದಿನಾಚರಣೆಗಳಲ್ಲಿ ಸರ್ಕಾರದ ಯೋಜನೆಗಳನ್ನು ತಿಳಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದ ಅವರು, ಕಾರ್ಯಕ್ರಮವನ್ನು ನಡೆಸಲು ಜವಾಬ್ದಾರಿಯುತವಾದ ಸಮಿತಿಯನ್ನು ರಚಿಸಿ ಉತ್ತಮ ಯೋಜನೆಗಳನ್ನು ರೂಪಿಸಿಕೊಂಡು 500ಜನ ಮೀರದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ 10 ಜನ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಜತೆಗೆ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದರು.
ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದಲ್ಲಿ ಜಾನಪದ, ಭಾವಗೀತೆ, ಚರ್ಚಾ ಸ್ಪರ್ಧೆ, ಪ್ರಬಂಧ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿದ್ದು ವೀಜೆತರಾದವರನ್ನು ಜಿಲ್ಲಾಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಮಾಹಿತಿ ನೀಡಿದರು ತಿಳಿಸಿದರು.
ಅಪರ ಜಿಲ್ಲಾ ಧಿಕಾರಿ ಬಿ.ಆರ್.ರೂಪ, ಉಪವಿಭಾಗಾಧಿ ಕಾರಿ ಡಾ| ಎಚ್.ಎಲ್ .ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ವಿ.ಚೈತ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಧ್ಯಕ್ಷ ಓಂಕಾರಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಪೂರ್ಣೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.