ಹಗಲಲ್ಲಿ ಹಣ್ಣಿನ ವ್ಯಾಪಾರ, ರಾತ್ರಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ
Team Udayavani, Apr 9, 2021, 7:35 PM IST
ಬೆಂಗಳೂರು: ಹಗಲಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡು, ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ತಂಡ ಸೆರೆ ಹಿಡಿಯುವಲ್ಲಿ ಸಂಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ದಾಸರಹಳ್ಳಿಯ ಶನಿಮಹಾತ್ಮ ದೇವಸ್ಥಾನ ಬಳಿಯ ನಿವಾಸಿ ಮಣಿ ಅಲಿಯಾಸ್ ನಾಗಮಣಿ(42), ಶ್ರೀರಾಂಪುರದ ಗೌತಮ್‌ನಗರದ ನಿವಾಸಿಗಳಾದ ಆರುಮುಗಂ(43) ಹಾಗೂ ಪಾಂಡಿಯನ್(53) ಬಂಧಿತ ಆರೋಪಿಗಳು.
ಬಂಧಿತರಿಂದ ಸುಮಾರು 15.92 ಲಕ್ಷ ರೂ. ಮೌಲ್ಯದ 316 ಗ್ರಾಂ ತೂಕದ ಚಿನ್ನಾಭರಣ, 200 ಗ್ರಾಂನ ಬೆಳ್ಳಿ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಕಬ್ಬಿಣದ ರಾಡು ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರೆಲ್ಲರು ತಮಿಳುನಾಡು ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಸಂಜಯನಗರದ ಡಾಲರ್ಸ್ ಕಾಲೋನಿ ನಿವಾಸಿ ಶ್ವೇತ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ಈಪ್ರಕರಣ ದಾಖಲಿಸಿಕೊಂಡು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಮಾರ್ಚ್ 29ರಂದು ಬೆಳಗ್ಗೆ 2.30ರ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಅಪರಿಚಿತರು, ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಲು ಬಂದಿರುವುದಾಗಿ ತಿಳಿಸಿದ್ದರು.
ಇದನ್ನೂ ಓದಿ :ಯತ್ನಾಳ್ ಪಕ್ಷದಿಂದ ಹೊರ ಹಾಕುವಂತಹ ವ್ಯಕ್ತಿ : ಅರುಣ್ ಸಿಂಗ್
ಪ್ರಕರಣದ ಮುಖ್ಯ ಆರೋಪಿ ಪಾಂಡಿಯನ್ ವಿರುದ್ಧ ಚೆನ್ನೈನ ಮಡಿಪಾಕಂ ಠಾಣೆ, ಅಣ್ಣಾನಗರ, ಪಳವಂದಾಂಗಲ್, ನೀಲಾಕಂ, ಸೈದಾಪೇಟ್, ವಿರುಗಂಬಾಕಂ, ಕಣೂ¤ರ್, ಪಲ್ಲಿಕರಣೈ ಸೇರಿದಂತೆ ವಿವಿಧ ಠಾಣೆಗಳಲ್ಲಿ 79ಕ್ಕೂ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿವೆ.
ಹಗಲಲ್ಲಿ ಹಣ್ಣಿನ ವ್ಯಾಪಾರ
ಆರೋಪಿಗಳ ಗ್ಯಾಂಗ್ ಹಗಲಿನಲ್ಲಿ ಹಗಲಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಪ್ರಕರಣದ ರೂವಾರಿಯಾಗಿದ್ದ ಪಾಂಡಿಯನ್, ಮನೆಯಲ್ಲಿ ಯಾರು ಇಲ್ಲದ ಹಾಗೂ ಮನೆಗೆ ಬೀಗ ಹಾಕಿಕೊಂಡು ಊರಿಗಳಿಗೆ ತೆರಳಿದ್ದ ಮನೆಗಳನ್ನು ಗುರುತಿಸುತ್ತಿದ್ದನು. ಬಳಿಕ ಮಣಿ(ನಾಗಮಣಿ)ಗೆ ಮಾಹಿತಿ ನೀಡುತ್ತಿದ್ದನು. ರಾತ್ರಿ ವೇಳೆ ತಮ್ಮ ಗ್ಯಾಂಗ್ ಕರೆಸಿಕೊಂಡು ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಣಿ 65 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.