ಮೈಸೂರು ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಸದ್ಯಕ್ಕಿಲ್ಲ ಹಾಸಿಗೆ ಕೊರತೆ

ನಗರದಲ್ಲಿ ಸಾವಿರ ಆಕ್ಸಿಜನ್‌ ಬೆಡ್‌ ವ್ಯವಸ್ಥೆ ! ಮಂಡಕಳ್ಳಿಯಲ್ಲಿನ ಕೋವಿಡ್‌ ಕೇರ್‌ ಸೆಂಟರ್‌ ಪುನಾರಂಭ

Team Udayavani, Apr 9, 2021, 8:53 PM IST

dfsd

ಮೈಸೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜೊತೆಗೆ ಸೋಂಕಿತರ ಚಿಕಿತ್ಸೆ ನೀಡಲು ಸಜ್ಜಾಗಿದೆ.

ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಸಕ್ರಿಯ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳ ಕಂಡಿದೆ. ಈ ನಡುವೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಸಜ್ಜಾಗಿದ್ದು, ನಗರದ ಕೆ.ಆರ್‌. ಆಸ್ಪತ್ರೆ, ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆ, ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಮೀಸಲಿಡಲಾಗಿದೆ.

ಕೋವಿಡ್‌ ಕೇರ್‌ ಸೆಂಟರ್‌ ಪುನಾರಂಭ:

ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗದಂತೆ ನಗರದ ಹೊರವಲಯದಲ್ಲಿನ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಕಾಡೆಮಿಕ್‌ ಭವನವನ್ನು ಕೋವಿಡ್‌ ಕೇರ್‌ ಸೆಂಟರ್‌ರನ್ನಾಗಿ ಪರಿವರ್ತಿಸಿದ್ದು, ಈ ಕಟ್ಟಡದಲ್ಲಿ 1200 ಹಾಸಿಗೆ ವ್ಯವಸ್ಥೆ ಮಾಡಬಹುದಾಗಿದೆ. ಜನವರಿ 2ನೇ ವಾರದವರೆಗೂ ಈ ಅಕಾಡೆಮಿಕ್‌ ಭವನವದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಕಾರ್ಯ ನಿರ್ವಹಿಸಿತ್ತು. ಬಳಿಕ ಸೋಂಕಿತರ ಸಂಖ್ಯೆ ಇಳಿಕೆಯಾದ ಕಾರಣ ಮುಚ್ಚಲಾಗಿತ್ತು. ಈಗ ಮತ್ತೆ ಆರಂಭಿಸಲಾಗಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರನ್ನು ಈ ಕೇಂದ್ರಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಸ್ಪತ್ರೆ, ಕೆಆರ್‌ಎಚ್‌ನಲ್ಲೂ ಸಜ್ಜು:

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ 250 ಹಾಸಿಗೆಗಳಲ್ಲಿ 133 ಭರ್ತಿಯಾಗಿದ್ದು, 14 ವೆಂಟಿಲೇಟರ್‌ ಐಸಿಯು ಬೆಡ್‌ ಭರ್ತಿಯಾಗಿದೆ. ಹಾಗೆಯೇ ನಗರದ ಕೆ. ಆರ್‌.ಆಸ್ಪತ್ರೆಯಲ್ಲಿ 200 ಆಕ್ಸಿಜನ್‌ ಬೆಡ್‌, ಕಲ್ಲು ಬಿಲ್ಡಿಂಗ್‌ನಲ್ಲಿ 200 ಆಕ್ಸಿಜನ್‌ ಬೆಡ್‌, ಟ್ರಾಮಾ ಸೆಂಟರ್‌ನಲ್ಲಿ 100 ಆಕ್ಸಿಜನ್‌ ಬೆಡ್‌ ಸೇರಿ 500 ಬೆಡ್‌ ಹಾಗೂ 50 ವೆಂಟಿಲೇಟರ್‌ ಬೆಡ್‌ಗಳನ್ನು ಮೀಸಲಿಡಲಾಗಿದೆ. ಇದರ ಜೊತೆಗೆ ಜೆಎಸ್‌ ಎಸ್‌ ಆಸ್ಪತ್ರೆಯಲ್ಲೂ ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಮೀಸಲಿರಿಸಲಾಗಿದ್ದು, ಸದ್ಯಕ್ಕೆ ನಗರದಲ್ಲಿ 1 ಸಾವಿರ ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದ ಸೋಂಕಿತರಿಗೆ ಸಮಸ್ಯೆಯಾಗದಂತೆ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಈಗಾಗಲೇ ತಲಾ 4ರಂತೆ ವೆಂಟಿಲೇಟರ್‌ ನೀಡಲಾಗಿದ್ದು, 30 ಹಾಸಿಗೆ ಸೌಲಭ್ಯ ಕಲ್ಪಿಸಲಾಗಿದೆ. ಆಯಾ ತಾಲೂಕಿನಲ್ಲಿ ಸೋಂಕಿನ ತೀವ್ರತೆ ಆಧಾರದಲ್ಲಿ ಹಾಸಿಗೆ ಸೌಲಭ್ಯ ಹೆಚ್ಚಿಸಲಾಗುವುದು ಎಂದು ವೈದ್ಯಾಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ.

ಮಹಾನ್‌ನೊಂದಿಗೆ ಒಪ್ಪಂದ:

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಸಲುವಾಗಿ ಜಿಲ್ಲಾಡಳಿತ ಮಹಾನ್‌ (ಖಾಸಗಿ ಆಸ್ಪತ್ರೆಗಳ ಒಕ್ಕೂಟ)ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು. ನಗರದ 65 ವಾರ್ಡ್‌ಗಳಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಲಸಿಕೆ ನೀಡುವ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಸಿಬ್ಬಂದಿ ಕೊರತೆ: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ವೈದ್ಯ, ನರ್ಸ್‌, ಫಾರ್ಮಾಸಿಸ್ಟ್‌, ಪೆಥಾಲಜಿಸ್ಟ್‌, ಡಿ. ಗ್ರೂಪ್‌ ನೌಕರರ ಕೊರತೆ ಇದ್ದು, ಅಗತ್ಯ ಸಿಬ್ಬಂದಿ ಇಲ್ಲದೆ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಕೆಲ ಸರ್ಕಾರಿ ಆಸ್ಪತ್ರೆಗಳಿಗೆ ಸವಾಲಾಗಿದೆ. ಈ ಹಿನ್ನೆಲೆ ಹೊರಗುತ್ತಿಗೆ ಆಧಾರದ ಮೇಲೆ ಅಗತ್ಯ ಸಿಬ್ಬಂದಿ ನೇಮಕಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ.

  • ಸತೀಶ್‌ ದೇಪುರ

ಟಾಪ್ ನ್ಯೂಸ್

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.