ನಾಗ್ಪುರ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ಸಾವು, ಹಲವರಿಗೆ ಗಾಯ
Team Udayavani, Apr 10, 2021, 12:10 AM IST
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಸ್ಪತ್ರೆಯ ಎಸಿ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಆವರಿಸಿಕೊಂಡಿದ್ದು, ಬೆಂಕಿ ಆವರಿಸಿದ ಕೂಡಲೇ ಎಚ್ಚೆತ್ತ ಆಸ್ಪತ್ರೆಯ ಸಿಬಂದಿಗಳು ರೋಗಿಗಳನ್ನು ರಕ್ಷಿಸುವ ಕೆಲಸ ಮಾಡಿದ್ದರಾದರೂ ಅಷ್ಟೋತ್ತಿಗಾಗಲೇ ಬೆಂಕಿಯ ಕೆನ್ನಾಲಿಗೆ ನಾಲ್ವರನ್ನು ಬಲಿ ತೆಗೆದುಕೊಂಡಿದೆ ಅಲ್ಲದೆ ಹಲವರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು.
ಆಸ್ಪತ್ರೆಯಲ್ಲಿ ಒಟ್ಟು 28 ಮಂದಿ ಕೋವಿಡ್ ರೋಗಿಗಳಿದ್ದು ನಾಲ್ವರು ಸಾವನ್ನಪ್ಪಿದ್ದರೆ, ಉಳಿದವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದ ನಾಲ್ವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
Saddened by the hospital fire in Nagpur. My thoughts are with the families of those who lost their lives. Praying that the injured recover at the earliest.
— Narendra Modi (@narendramodi) April 9, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.