ಪಶ್ಚಿಮ ಬಂಗಾಳ : ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿ : ಮತದಾರರಿಗೆ ಪ್ರಧಾನಿ ಮನವಿ
Team Udayavani, Apr 10, 2021, 11:52 AM IST
ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಚುನಾವಣೆ ಇಂದು(ಏ.10, ಶನಿವಾರ) ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಒಟ್ಟು ಇಂದು ರಾಜ್ಯದ 44 ವಿಧಾನ ಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಈ ಕುರಿತು ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾವಣೆ ಮಾಡಿ ಎಂದು ಜನರನ್ನು ಕೋರಿದ್ದಾರೆ. ವಿಶೇಷವಾಗಿ ಯುವಕರು ಹಾಗೂ ಮಹಿಳೆಯರು ದಾಖಲೆಯ ಪ್ರಮಾಣದಲ್ಲಿ ಮತದಾನವನ್ನು ಮಾಡುವಂತೆ ವಿನಂತಿಸುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
As the 4th phase of the West Bengal elections begin, urging the people voting today to do so in record numbers. I would especially request the youth and women to vote in large numbers.
— Narendra Modi (@narendramodi) April 10, 2021
ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದಲ್ಲಿ ಇಂದು 44 ವಿಧಾನ ಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಐದು ಜಿಲ್ಲೆಗಳಾದ ಕೂಚ್ ಬೆಹರ್, ಅಲಿಪುರ್ದುರ್, ದಕ್ಷಿಣ 24 ಪರಗಣಗಳು, ಹೌರಾ ಮತ್ತು ಹೂಗ್ಲಿಗಳ 44 ಕ್ಷೇತ್ರಗಳಲ್ಲಿ 373 ಅಭ್ಯರ್ಥಿಗಳ ನಡುವೆ ನಡೆಯುವ ಜಿದ್ದಾ ಜಿದ್ದಿ ಪೈಪೋಟಿಗೆ ಕಾರಣವಾಗಲಿದೆ.
ಓದಿ : ಪಶ್ಚಿಮಬಂಗಾಳದ 44 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ, ಬಿಗಿ ಪೊಲೀಸ್ ಬಂದೋಬಸ್ತ್
44 ಕ್ಷೇತ್ರಗಳಲ್ಲಿ ಒಂಬತ್ತು ಕ್ಷೇತ್ರಗಳು ಹೌರಾದಲ್ಲಿ, ಹತ್ತು ಹೂಗ್ಲಿಯಲ್ಲಿ, ಹನ್ನೊಂದು ದಕ್ಷಿಣ 24 ಪರಗಣಗಳಲ್ಲಿ, ಐದು ಅಲಿಪುರ್ದುರ್ ಮತ್ತು ಒಂಬತ್ತು ಕೂಚ್ ಬೆಹಾರ್ ಜಿಲ್ಲೆಯಲ್ಲಿವೆ.
ಈ ಹಂತದಲ್ಲಿ ಒಟ್ಟು 1,15,81,022 ಮತದಾರರು ಭಾಗವಹಿಸಲಿದ್ದು, ಈ ಪೈಕಿ 2,63,016 ಮಂದಿ ಮೊದಲ ಬಾರಿಗೆ ಮತಚಲಾಯಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇನ್ನು, ರಾಜ್ಯದ 1,76,001 ಮತದಾರರನ್ನು ಹೊಂದಿರುವ ಬ್ಯಾಲಿ ಅತ್ಯಂತ ಚಿಕ್ಕ ಕ್ಷೇತ್ರವಾದರೆ, ಚುಂಚುರಾ 3,13,701 ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರವಾಗಿದೆ. ವಿಧಾನಸಭಾ ಚುನಾವಣೆಯ ಐದನೇ ಹಂತ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದೆ. ಮತ ಎಣಿಕೆಯು ಮೇ 2 ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.