ಕಾಮಗಾರಿ ಪೂರ್ಣವಾದ್ರೆ ಹಸ್ತಾಂತರ ಪತ್ರ: ಜಿಲ್ಲಾಧಿಕಾರಿ

Team Udayavani, Apr 10, 2021, 5:56 PM IST

10-11

ಕೊಪ್ಪಳ: ಸರ್ಕಾರಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಯಾವುದೇ ಇಲಾಖೆಯಿಂದ ಅನುಷ್ಠಾನ ಏಜೆನ್ಸಿಗೆ ಹಸ್ತಾಂತರ ಪ್ರಮಾಣ ಪತ್ರ ನೀಡಬೇಡಿ ಎಂದು ಜಿಲ್ಲಾಧಿಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರು ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳಿಂದ ಅನುಷ್ಠಾನ ಏಜೆನ್ಸಿಗಳಿಗೆ ನೀಡಿರುವ ಕಟ್ಟಡ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಿದ ಹೊರತು ಯಾವುದೇ ಇಲಾಖೆ ಹಸ್ತಾಂತರ ಪ್ರಮಾಣ ಪತ್ರವನ್ನು ನೀಡಬಾರದು. ಒಂದು ವೇಳೆ ಕಾಮಗಾರಿ ಅಪೂರ್ಣವಾಗಿದ್ದಲ್ಲಿ ಅಥವಾ ಸಣ್ಣ ಪುಟ್ಟ ಕೆಲಸಗಳು ಬಾಕಿ ಉಳಿದಲ್ಲಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದರು. ಅನುಷ್ಠಾನ ಏಜೆನ್ಸಿಗಳಿಗೆ ಹಲವು ವರ್ಷಗಳ ಹಿಂದೆಯೇ ಹಂಚಿಕೆ ಮಾಡಿದ, ಆಡಳಿತಾತ್ಮಕ ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡಿದ ನಂತರವೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಕೆಲವು ಕಡೆಗಳಲ್ಲಿ ಕಾಮಗಾರಿ ಆರಂಭಿಸಿಯೇ ಇಲ್ಲ. ಇದಕ್ಕೆ ಸೂಕ್ತ ಕಾರಣಗಳನ್ನು 3 ದಿನಗಳೊಳಗಾಗಿ ಸಲ್ಲಿಸಬೇಕು. ಇಲಾಖೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾದ ನಂತರ ನಿರ್ದಿಷ್ಟ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅನುಷ್ಠಾನ ಏಜೆನ್ಸಿಗೆ ಸೂಕ್ತ ನಿರ್ದೇಶನ ನೀಡಬೇಕು. ನಿವೇಶನ ಗುರುತಿಸುವಿಕೆ ಸೇರಿದಂತೆ ಎಲ್ಲ ಹಂತಗಳಲ್ಲೂ ಇಲಾಖೆಗಳು ಏಜೆನ್ಸಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನಿಗದಿತ ಕಾಲಾವ ಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಕಾಮಗಾರಿ ಪೂರ್ಣವಾಗುವವರೆಗೂ ಪೂರ್ಣ ಅನುದಾನ ಬಿಡುಗಡೆ ಮಾಡದೆ, ಕಾಮಗಾರಿಯ ಹಂತ ಹಂತವಾಗಿ ಹಣ ಬಿಡುಗಡೆಗೊಳಿಸಿ, ಯೋಜನೆಯಂತೆ ಪೂರ್ಣಗೊಂಡ ನಂತರ ಪೂರ್ತಿ ಹಣ ಬಿಡುಗಡೆ ಮಾಡಬೇಕು. ಅದಕ್ಕೂ ಮೊದಲೇ ಪೂರ್ಣ ಹಣ ಬಿಡುಗಡೆ ಮಾಡಿ, ಹಸ್ತಾಂತರ ಪ್ರಮಾಣ ಪತ್ರ ನೀಡಿದಲ್ಲಿ ಸಂಬಂ ಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೆಯೇ ಕೆಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಂಡ ನಂತರವೂ ಇನ್ನೂ ನಿವೇಶನವನ್ನೇ ಗುರುತಿಸಿಲ್ಲ. ಸೂಕ್ತ ನಿವೇಶನದ ಹುಡುಕಾಟದಲ್ಲಿ ಹಾಗೂ ಪತ್ರ ವ್ಯವಹಾರಗಳಲ್ಲಿ ಸಮಯವನ್ನು ವ್ಯರ್ಥ ಮಾಡದೆ ಶೀಘ್ರ ನಿವೇಶನ ಗುರುತಿಸಿ ಅಥವಾ ಕಾಮಗಾರಿ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಿ. ಈ ವರೆಗೂ ಆರಂಭವಾಗದ ಕಾಮಗಾರಿ ಕುರಿತು ವಸ್ತುಸ್ಥಿತಿ ಸಲ್ಲಿಸಿ ಎಂದರು.

ಜಿಲ್ಲೆಯ ಎಲ್ಲ ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿಯ ಜವಾಬ್ದಾರಿ ಜಿಪಂ ಸಿಇಒ ಅವರಾಗಿದ್ದು, ಇವರು ಎಲ್ಲ ಕಟ್ಟಡ ಕಾಮಗಾರಿಗಳ ಕುರಿತು ಭೌತಿಕ, ಆರ್ಥಿಕ ಮಾಹಿತಿಯನ್ನು ಇಲಾಖೆಗಳಿಂದ ಪಡೆದು ಆಗಿಂದಾಗ್ಗೆ ಪರಿಶೀಲಿಸಬೇಕು ಎಂದು ಅವರು ಸಿಪಿಒ ಅವರಿಗೆ ಸೂಚನೆ ನೀಡಿದರು.

ಜಿಪಂ ಸಿಇಒ ರಘುನಂದನ್‌ ಮೂರ್ತಿ ಮಾತನಾಡಿ, ಅನುಷ್ಠಾನ ಏಜನ್ಸಿಗಳಿಂದ ಪೂರ್ಣಗೊಂಡ ಕಟ್ಟಡ ಕಾಮಗಾರಿಗಳನ್ನು ಪರಿಶೀಲಿಸಿ ಸಂಬಂಧಿ ಸಿದ ಇಲಾಖೆಗಳು ತಮ್ಮ ಸುಪರ್ದಿಗೆ ಪಡೆದು, ಆ ಕಟ್ಟಡದಲ್ಲಿ ಕಾರ್ಯಾರಂಭಿಸಬೇಕು. ಉದ್ಘಾಟನೆಯನ್ನು ವಿಳಂಬ ಮಾಡದೆ ಮೇಲ ಧಿಕಾರಿಗಳ ಗಮನಕ್ಕೆ ತಂದು ವಿನೂತನ ಕಟ್ಟಡದಲ್ಲಿ ಕಚೇರಿ ಕೆಲಸಗಳನ್ನು ಆರಂಭಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ಟಿ.ಕೃಷ್ಣಮೂರ್ತಿ, ನಗರಾಭಿವೃದ್ಧಿ ಕೋಶದ ಗಂಗಾಧರ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಡಿ.ಸಿ ದೊಡ್ಡಬಸಪ್ಪ ನೀರಲಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳಾದ ನಿರ್ಮಿತಿ ಕೇಂದ್ರದ ಶಶಿಧರ, ಕೆಆರ್‌ಐಡಿಎಲ್‌ನ ಚಿಂಚೋಳ್ಕರ್‌, ಪಿಆರ್‌ ಇಡಿಯ ಬಡಿಗೇರ್‌, ಪಿಡಬ್ಲೂಡಿಯ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.