ನಿತ್ಯ ಬಳಕೆಯ ‘ಬೆಳ್ಳುಳ್ಳಿ’ ರುಚಿಗೂ ಸೈ-ಆರೋಗ್ಯಕ್ಕೂ ಸೈ


Team Udayavani, Apr 11, 2021, 8:00 AM IST

್ಗಹಜಗ್ಹಗ್

ಪುರಾತನ ಕಾಲದಿಂದಲೂ ನಮ್ಮ ಭಾರತ ನಾಟಿ ಔಷಧಗಳ ತಯಾರಿಕೆಯಲ್ಲಿ ಹೆಸರು ಗಿಟ್ಟಿಸಿಕೊಂಡಿದೆ. ಮನೆ ಮದ್ದುವಿನಲ್ಲು ಭಾರತಕ್ಕೆ ತನ್ನದೇ ಆದಂತಹ ಸ್ಥಾನವಿದೆ. ಇನ್ನು ನಾವು ಪ್ರತಿದಿನ ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿಯಲ್ಲೂ ಕೂಡ ಹಲವಾರು ಔಷಧಿಯ ಗುಣಗಳಿವೆ. ಹಾಗಾದ್ರೆ ಬೆಳ್ಳುಳ್ಳಿಯಿಂದ ಏನೆಲ್ಲ ಉಪಯೋಗವಿದೆ, ಬೆಳ್ಳುಳ್ಳಿಯ ವಿಶೇಷತೆ ಏನು ಎಂಬುದನ್ನ ತಿಳಿಯೋಣ.

ವೈರಾಣುಗಳ ಶಮನಕ್ಕೆ ಬೆಳ್ಳುಳ್ಳಿ ರಾಮಬಾಣ :  ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಪೋಷಕಾಂಶವು ಜೀವಿರೋಧಿ ವೈರಸ್ ವಿರೋಧಿ, ಬೂಸುನಿವಾರಕ ಮತ್ತು ರೋಗ ನಿರೋಧಕ ಶಕ್ತಿ ಗುಣಗಳನ್ನು ಹೊಂದಿರುವುದರಿಂದ ಹಲವು ರೀತಿಯಲ್ಲಿ ಆರೋಗ್ಯವನ್ನು ರಕ್ಷಿಸುತ್ತದೆ. ಇದರ ಪೂರ್ಣ ಉಪಯೋಗ ಪಡೆಯಲು ಬೆಳ್ಳುಳ್ಳಿಯನ್ನು ಚಿಕ್ಕದಾಗಿ ಹೆಚ್ಚಿ, ಅಥವಾ ಅರೆದು ಕೊಂಚ ಕಾಲ ಬಿಟ್ಟು ಸೇವಿಸುವುದು ಉತ್ತಮ. ಬೆಳ್ಳುಳ್ಳಿಯಲ್ಲಿ ಉತ್ತಮ ಪ್ರಮಾಣದ ಸಿಲಿನಿಯಂ ಕೂಡ ಇದ್ದು, ವೈರಸ್ ಗಳಿಂದ ಎದುರಾಗುವ ಸೋಂಕುಗಳಿಂದ ರಕ್ಷಣೆ ನೀಡಲಿದೆ.

ನಮ್ಮ ಆಹಾರದ ಮೂಲಕ ದಾಳಿಯಿಡುವ ವೈರಸ್ಸುಗಳು, ಬೂಸು, ಯೀಸ್ಟ್ ಮತ್ತು ಕ್ರಿಮಿಗಳಿಂದ ಸೋಂಕು ಆಗದಿರುವಂತೆ ನೋಡಿಕೊಳ್ಳುತ್ತದೆ. ವಿಶೇಷವಾಗಿ ನಮ್ಮ ಕರುಳುಗಳಲ್ಲಿ ಈ ಕ್ರಿಮಿಗಳು ದಾಳಿಯಿಡುವ ಮುನ್ನವೇ ಅವುಗಳೊಂದಿಗೆ ಹೋರಾಡಿ ದೇಹದಿಂದ ವಿಸರ್ಜನೆಯಾಗುವಂತೆ ನೋಡಿಕೊಳ್ಳುತ್ತವೆ. ನಮ್ಮ ಆರೋಗ್ಯವನ್ನು ಕೆಡಿಸುವ ಕೋಲಿ, ಸಾಲ್ಮೊನೆಲ್ಲಾ ಎಂಟರ್‌ಟಿಡಿಸ್ ಮೊದಲಾದ ವೈರಸ್ಸುಗಳಿಗೆ ಬೆಳ್ಳುಳ್ಳಿ ಉತ್ತಮ ಔಷಧಿಯಾಗಿದೆ.

ತೂಕ ಇಳಿಸಲು ಬೆಳ್ಳುಳ್ಳಿ ಉತ್ತಮವಾದ ಪದಾರ್ಥವಾಗಿದೆ : ದೇಹದಲ್ಲಿ ಬೊಜ್ಜು ಆವರಿಸಿಕೊಂಡು, ಅನಾರೋಗ್ಯಕಾರಿ ಆಗಿ ತೂಕ ಬೆಳೆದಿದ್ದರೆ ಆಗ ಅದನ್ನು ಇಳಿಸಲು ಹಸಿ ಬೆಳ್ಳುಳ್ಳಿ ಸೇವಿಸಿ. ಹಸಿ ಬೆಳ್ಳಿಯಲ್ಲಿ ಕೆಟ್ಟ ಮತ್ತು ಅಧಿಕ ಕೊಬ್ಬನ್ನು ಕರಗಿಸುವಂತಹ ಅಂಶಗಳು ಇವೆ. ವಿವಿಧ ರೀತಿಯ ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿಯು ಚಯಾಪಚಯ ಕ್ರಿಯೆ ವೃದ್ಧಿಸುವುದು ಎಂದು ಕಂಡುಕೊಳ್ಳಲಾಗಿದೆ.

ಹೊಟ್ಟೆಯ ಆರೋಗ್ಯವನ್ನು ವೃದ್ಧಿಸಲು : ಬೆಳ್ಳುಳ್ಳಿಯಲ್ಲಿ ಆ್ಯಂಟಿ ಆಕ್ಸಿಡೆಂಟ್, ಪ್ರಿಬಯೋಟಿಕ್ ಮತ್ತು ಪ್ರೋಬಯೋಟಿಕ್ ಅಂಶವು ಸಮೃದ್ಧವಾಗಿದೆ. ಈ ಅಂಶಗಳು ಹೊಟ್ಟೆಯ ಆರೋಗ್ಯವನ್ನು ವೃದ್ಧಿಸಲು ನೆರವಾಗುವುದು. ಬೆಳ್ಳುಳ್ಳಿಯಲ್ಲಿ ಇರುವಂತಹ ಕೆಲವೊಂದು ಖನಿಜಾಂಶಗಳು ಮತ್ತು ವಿಟಮಿನ್ ಗಳು ಯಕೃತ್, ಮೂತ್ರನಾಳ ಮತ್ತು ಕಿಡ್ನಿ ಆರೋಗ್ಯವನ್ನು ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದರೊಂದಿಗೆ ಬೆಳ್ಳುಳ್ಳಿಯಲ್ಲಿ ಇರುವಂತಹ ಒತ್ತಡ ವಿರೋಧಿ ಅಂಶಗಳು ಹೊಟ್ಟೆಯಲ್ಲಿ ಹೆಚ್ಚು ಆಮ್ಲವು ಬಿಡುಗಡೆ ಆಗುವುದನ್ನು ತಡೆಯುವುದು ಮತ್ತು ಜೀರ್ಣಕ್ರಿಯೆ ವ್ಯವಸ್ಥೆಯು ಹೆಚ್ಚು ಪರಿಣಾಮಕಾರಿ ಆಗಿರುವಂತೆ ಮಾಡುವುದು.

ಮನಸ್ಥಿತಿ ಸುಧಾರಣೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಬೆಳ್ಳುಳ್ಳಿ ತುಂಬಾ ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ಸೇವಿಸಿದರೆ ಆಗ ಅದು ನೈಸರ್ಗಿಕವಾಗಿ ಮನಸ್ಥಿತಿ ಸುಧಾರಣೆ ಮಾಡುವುದು. ದೇಹದಲ್ಲಿನ ರಾಸಾಯನಿಕಗಳನ್ನು ಇದು ಸಮತೋಲನದಲ್ಲಿ ಇಡುವುದು ಮತ್ತು ಮೆದುಳಿನ ರಾಸಾಯನಿಕಗಳನ್ನು ಕೂಡ. ಖಿನ್ನತೆಯು ಮೆದುಳಿನ ರಾಸಾಯನಿಕದ ಅಸಮತೋಲನದಿಂದ ಬರುವುದು ಮತ್ತು ಬೆಳ್ಳುಳ್ಳಿಯು ಖಿನ್ನತೆ ವಿರುದ್ಧ ಹೋರಾಡಲು ನೆರವಾಗವುದು.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ : ಮಧುಮೇಹಿಗಳಿಗೆ ಬೆಳ್ಳುಳ್ಳಿಯು ತುಂಬಾ ಪ್ರಯೋಜನಕಾರಿ. ಇದರಲ್ಲಿ ಇರುವಂತಹ ಅಲಿಸಿನ್ ಎನ್ನುವ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಮತ್ತು ತಗ್ಗಿಸುವುದು. ಬೆಳ್ಳುಳ್ಳಿಯನ್ನು ಜಜ್ಜಿಕೊಂಡಾಗ ಅಥವಾ ಕತ್ತರಿಸಿದಾಗ ಅಲಿಸಿನ್ ಹೆಚ್ಚಾಗುವುದು. ಜಜ್ಜಿಕೊಂಡ ಬೆಳ್ಳುಳ್ಳಿಯನ್ನು ದಿನದಲ್ಲಿ ಎರಡು ಸಲ ಸೇವಿಸಿದರೆ, ಆಗ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಇರುವುದು.

ರಕ್ತದೊತ್ತಡದ ಸಮಸ್ಯೆಯನ್ನು ಕಡಿಮೆ : ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಅದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಅಧಿಕ ರಕ್ತದೊತ್ತಡದ ಸಮಸ್ಯೆಯ ಅಪಾಯವಿರುವಂತಹ ಜನರಿಗೆ ವೈದ್ಯರು ಕೂಡ ಬೆಳ್ಳುಳ್ಳಿ ಸೇವನೆ ಮಾಡಲು ಸೂಚಿಸುವರು.

ರಕ್ತನಾಳದ ಆರೋಗ್ಯ : ಬೆಳಗ್ಗೆ ಎದ್ದ ಬಳಿಕ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಅದು ರಕ್ತಕ್ಕೆ ತುಂಬಾ ಒಳ್ಳೆಯದು. ಬೆಳ್ಳುಳ್ಳಿಯಲ್ಲಿ ಇರುವ ನಿರ್ವಿಷಗೊಳಿಸುವ ಅಂಶವು ರಕ್ತನಾಳದಲ್ಲಿ ಇರುವಂತಹ ಕಲ್ಮಶವನ್ನು ತೆಗೆಯುವುದು ಮತ್ತು ರಕ್ತನಾಳದ ಆರೋಗ್ಯವನ್ನು ಸುಧಾರಿಸುವುದು. ಆ್ಯಂಟಿ ಆಕ್ಸಿಡೆಂಟ್, ರೋಗನಿರೋಧಕ ಮತ್ತು ಉರಿಯೂತ ಶಮನಕಾರಿ ಗುಣ ಹೊಂದಿರುವಂತಹ ಬೆಳ್ಳುಳ್ಳಿಯು ರಕ್ತ ಶುದ್ಧೀಕರಿಸಲು ಪ್ರಮುಖ ಪಾತ್ರ ವಹಿಸುವುದು.

ಕ್ಯಾನ್ಸರ್ ನಿವಾರಣೆಯ ಗುಣವೂ ಇದೆ :  ಬೆಳ್ಳುಳ್ಳಿಯಲ್ಲಿ ಉರಿಯೂತ ಶಮನಕಾರಿ, ರೋಗನಿರೋಧಕ ಮತ್ತು ಕ್ಯಾನ್ಸರ್ ವಿರೋಧಿ ಅಂಶಗಳು ಇವೆ. ಖಾಲಿ ಹೊಟ್ಟೆಯಲ್ಲಿ ನೀವು ಬೆಳ್ಳುಳ್ಳಿ ಸೇವಿಸಿದರೆ ಅದರಿಂದ ಕೆಲವೊಂದು ರೀತಿಯ ಕ್ಯಾನ್ಸರ್ ನ್ನು ತಡೆಯಬಹುದು. ಬೆಳ್ಳುಳ್ಳಿಯಲ್ಲಿ ಉನ್ನತ ಮಟ್ಟದ ಆ್ಯಂಟಿಆಕ್ಸಿಡೆಂಟ್ ಗಳು ಇವೆ ಮತ್ತು ಇದು ದೇಹವನ್ನು ನಿರ್ವಿಷಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.