ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸಾರಿಗೆ ನೌಕರರಲ್ಲಿ ಕೋಟ ಮನವಿ
Team Udayavani, Apr 11, 2021, 4:32 PM IST
ಮಂಗಳೂರು : ಕೋವಿಡ್ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ, ಸರಕಾರದಲ್ಲಿ ವಿಶ್ವಾಸವಿಟ್ಟು, ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆಗಳು ಪರಿಹಾರವಾಗಲಿವೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರ ಐದನೇ ದಿನವು ಮುಂದುವರೆದಿದ್ದರೂ ಸಹ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಕಾರ್ಯಾಚರಣೆಯಾಗುತ್ತಿರುವ ಅನುಸೂಚಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಮಾಹಿತಿ ಒದಗಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಪ್ರತಿ ದಿವಸ ಸುಮಾರು 480 ಅನುಸೂಚಿ ವಾಹನಗಳು ಕಾರ್ಯಾಚರಣೆಯಾಗುತ್ತಿದ್ದು, ಪ್ರಸ್ತುತ ಮುಷ್ಕರದ ಅವಧಿಯಲ್ಲಿ ದಿನಾಂಕ 10.04.2021ರಂದು ಸುಮಾರು 140 ವಾಹನಗಳು ಬೆಂಗಳೂರು, ಮೈಸೂರು, ಧರ್ಮಸ್ಥಳ, ಹುಬ್ಬಳ್ಳಿ, ಕಾಸರಗೋಡು ಹೈದ್ರಾಬಾದ್, ಮಧುರೈ ,ಕೊಯಮತ್ತೂರು, ಮಂತ್ರಾಲಯ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಿಸುತ್ತವೆ.
ಅದೇ ರೀತಿಯಾಗಿ ಈ ಮೇಲಿನ ಮಾರ್ಗಗಳಲ್ಲಿ ದಿನಾಂಕ 11.4.2021 ರಂದು ಸುಮಾರು 200 ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಿಸಲು ಎಲ್ಲಾ ಅಗತ್ಯ ಯೋಜನೆಗಳನ್ನು ಮಂಗಳೂರು ವಿಭಾಗದಿಂದ ಹಮ್ಮಿಕೊಳ್ಳಲಾಗಿರುತ್ತದೆ . ವಿಭಾಗದ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಕರ್ತವ್ಯಕ್ಕೆ ಮರಳುತ್ತಿದ್ದು ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಣೆಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ .
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿಯೂ ಸಹ ವಾಹನಗಳ ಕಾರ್ಯಾಚರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ದಿನಾಂಕ 10.04.2021ರಂದು 47 ವಾಹನಗಳು ಮತ್ತು ದಿನಾಂಕ 11.04.2021 ರಂದು ಸುಮಾರು 75 ವಾಹನಗಳನ್ನು ಬೆಂಗಳೂರು ಮೈಸೂರು ಶಿವಮೊಗ್ಗ ಪುತ್ತೂರು ಮಡಿಕೇರಿ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ .
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗ ಹಾಗೂ ಪುತ್ತೂರು ವಿಭಾಗಗಳ ವತಿಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಅನುಸೂಚಿ ವಾಹನಗಳನ್ನು ನಿಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕರರೆಲ್ಲರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಈ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.