ಮುಷ್ಕರದಲ್ಲಿ ಭಾಗಿಯಾದರೆ ಸಂಬಳ ಕಟ್ : ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ!
Team Udayavani, Apr 11, 2021, 5:20 PM IST
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಸಾರಿಗೆ ನೌಕರರು ಎಷ್ಟೇ ಪ್ರತಿಭಟನೆ, ಮುಷ್ಕರವನ್ನು ಮಾಡಿದರೂ ಕೂಡ ಸರ್ಕಾರ ಮಾತ್ರ ವೇತನ ಹೆಚ್ಚಳ ಮಾಡುವುವಿಲ್ಲ ಎಂದು ಪಟ್ಟು ಹಿಡಿದಿದೆ. ಈ ಕಾರಣಕ್ಕೆ ನಾಳೆ ತಟ್ಟೆ ಮತ್ತು ಲೋಟ ಬಡಿದುಕೊಂಡು ನೌಕರರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಬಗ್ಗೆ ಸಭೆ ನಡೆದಿದ್ದು, ಸಾರಿಗೆ ನೌಕರರು ಮತ್ತು ಕುಟುಂಬದವರು ಡಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಯೋಚನೆ ಮಾಡಿದ್ದಾರೆ.
ಈ ಬೆನ್ನಲ್ಲೇ ರಾಯಚೂರಿನಲ್ಲಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಯಾರು ಮುಷ್ಕರದಲ್ಲಿ ಭಾಗಿಯಾಗುತ್ತಾರೋ ಆ ನೌಕರರ ಸಂಬಳವನ್ನು ಕಟ್ ಮಾಡಲಾಗುತ್ತದೆ. ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗಿಯಾದರೆ ಸಂಬಳವನ್ನು ಕೊಡುವುದಿಲ್ಲ ಎಂದು ಯಡಿಯೂರಪ್ಪ ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.
ಇತ್ತ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ. ಈ ಕಾರಣಕ್ಕೆ ನಾಳೆಯಿಂದ ರಸ್ತೆಗಿಳಿದು ಪ್ರತಿಭಟನೆ ಮಾಡುವುದಾಗಿಯೂ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.