ಸಾವಿನಲ್ಲೂ ಒಂದಾದ ದಂಪತಿ
Team Udayavani, Apr 11, 2021, 6:33 PM IST
ಗದಗ: ನಾಲ್ಕು ದಶಕಗಳ ಕಾಲ ಒಬ್ಬರಿಗೊಬ್ಬರು ಎಂಬಂತೆ ಬಾಳಿ ಬದುಕಿದ ದಂಪತಿ ಸಾವಿನಲ್ಲೂ ಒಂದಾಗಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ.
ಇಲ್ಲಿನ ರಾಜೀವಗಾಂಧಿ ನಗರ ನಿವಾಸಿ, ಗದಗ-ಬೆಟಗೇರಿ ನಗರಸಭೆ ನಿವೃತ್ತ ವ್ಯವಸ್ಥಾಪಕ ಅಮೀನಸಾಬ ಮುಲ್ಲಾ(72) ಹಾಗೂ ಅವರ ಪತ್ನಿ ಶಂಶಾದ್ ಬೇಗಂ(62) ಸಾವಿನಲ್ಲೂ ಒಂದಾಗಿದ್ದಾರೆ.
ಶುಗರ್ ಹಾಗೂ ರಕ್ತದೊತ್ತಡ ಏರುಪೇರಾಗಿದ್ದರಿಂದ ಶಂಶಾದ್ ಬೇಗಂ ಅವರನ್ನು ಚಿಕಿತ್ಸೆಗಾಗಿ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಶನಿವಾರ ಬೆಳಗಿನ ಜಾವ 5
ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.ಈ ಸುದ್ದಿ ತಿಳಿಯುತ್ತಿದ್ದಂತೆ ಖನ್ನತೆಗೆ ಒಳಗಾಗಿದ್ದ ಪತಿ ಅಮೀನಸಾಬ ಮುಲ್ಲಾ ಅವರು ಕೇವಲ ಮೂರು ಗಂಟೆಗಳ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರು ಪುತ್ರರು, ಪುತ್ರಿ, ಸೊಸೆಯಂದಿರು,ಅಳಿಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.