ಕೋವಿಡ್ ಹೆಚ್ಚಳ, ಲಾಕ್ ಡೌನ್ ಕಳವಳ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,400 ಸಾವಿರ ಅಂಕ ಕುಸಿತ
ಕೋವಿಡ್ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 1,70,179ಕ್ಕೆ ಹೆಚ್ಚಳವಾಗಿದೆ.
Team Udayavani, Apr 12, 2021, 10:19 AM IST
ಮುಂಬಯಿ:ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವುದು ಮುಂಬಯಿ ಷೇರುಮಾರುಕಟ್ಟೆ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದ್ದು, ಸೋಮವಾರ ಷೇರುಪೇಟೆಯ ಸಂವೇದಿ ಸೂಚ್ಯಂಕ 1,400ಕ್ಕೂ ಅಧಿಕ ಅಂಕಗಳ ಭಾರೀ ಕುಸಿತ ಕಂಡಿದೆ.
ಮುಂಬಯಿ ಷೇರುಪೇಟೆಯ ದಿನದ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 1,400 ಅಂಕ ಕುಸಿತ ಕಂಡಿದ್ದು, 48,397 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ನಿಫ್ಟಿ ಸೂಚ್ಯಂಕ 377 ಅಂಕ ಕುಸಿತ ಕಂಡಿದ್ದು, 14,457ರ ಗಡಿ ತಲುಪಿದೆ.
ಇಂಡಸ್ ಇಂಡ್ ಬ್ಯಾಂಕ್, ಎಸ್ ಬಿಐ, ಟಾಟಾ ಮೋಟಾರ್ಸ್, ಬಜಾಜ್ ಫೈನಾನ್ಸ್, ಅದಾನಿ ಪೋರ್ಟ್ಸ್, ಯುಪಿಎಲ್, ಬಜಾಜ್ ಆಟೋ, ಇಚರ್ ಮೋಟಾರ್ಸ್ಸ್, ಇಂಡಿಯನ್ ಆಯಿಲ್, ಕೋಟಕ್ ಮಹೀಂದ್ರ ಬ್ಯಾಂಕ್, ಹೀರೋ ಮೋಟೊ ಕಾರ್ಪೋರೇಷನ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,68,912 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ ಆರು ದಿನಗಳಲ್ಲಿನ ಗರಿಷ್ಠ ಪ್ರಮಾಣದ್ದಾಗಿದೆ. ದೇಶದಲ್ಲಿ ಕೋವಿಡ್ ಸೋಂಕು 1.35 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 1,70,179ಕ್ಕೆ ಹೆಚ್ಚಳವಾಗಿದೆ.
ಮಹಾರಾಷ್ಟ್ರದಲ್ಲಿ ಕಳೆದ 24ಗಂಟೆಯಲ್ಲಿ 63,294 ಕೋವಿಡ್ ಸೋಂಕು ವರದಿಯಾಗಿದ್ದು, 349 ಮಂದಿ ಸಾವನ್ನಪ್ಪಿದ್ದಾರೆ. ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂದ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.