ರಾಜ್ಯದಲ್ಲಿ ಈ ವರೆಗೆ 1 ಕೋಟಿ ಮಂದಿಗೆ ಲಸಿಕೆ
Team Udayavani, Apr 12, 2021, 10:56 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಈವರೆಗೆ 1 ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಜ. 16ರಿಂದ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಮುಂಚೂಣಿ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು ಮತ್ತು 45 ವರ್ಷ ಪ್ರಾಯ ಮೆಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
ರವಿವಾರಕ್ಕೆ ರಾಜ್ಯದಲ್ಲಿ 1,00,38,421 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಪ್ರದೀಪ್ ವ್ಯಾಸ್ ಅವರು ತಿಳಿಸಿದ್ದಾರೆ.
ನಾಗಪುರದಲ್ಲಿ 7 ಸಾವಿರ ಮಂದಿಗೆ ಕೋವಿಡ್ :
ನಾಗಪುರ: ಜಿಲ್ಲೆಯಲ್ಲಿ ರವಿವಾರ 7,201 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೊಂಕಿತರ ಸಂಖ್ಯೆ 2,78,556ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕಿನಿಂದ 63 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5,769ಕ್ಕೆ ಏರಿಕೆಯಾಗಿದೆ. ಸಾವುಗಳ ಪೈಕಿ 3,604 ಮಂದಿ ನಾಗಪುರ ನಗರಕ್ಕೆ ಸೇರಿದವ ರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರವಿವಾರ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ 3,240 ಮಂದಿ ಸೋಂಕಿತರು ಗುಣಮುಖ ರಾಗಿ ಬಿಡುಗಡೆ ಹೊಂದಿದ್ದು, ಈ ವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,17,313ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ರವಿವಾರ 26,007 ಮಂದಿಯ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈ ವರೆಗೆ ಪರೀಕ್ಷೆಗೆ ಒಳಗಾದವರ ಸಂಖ್ಯೆ 1,87,244ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧೀಕಾರಿಗಳು ತಿಳಿಸಿದ್ದಾರೆ.
ಕೋವಿಡ್: ಥಾಣೆಯಲ್ಲಿ 5,754 ಕೇಸುಗಳು ದೃಢ :
ಥಾಣೆ: ಜಿಲ್ಲೆಯಲ್ಲಿ ಮತ್ತೆ 5,754 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 3,73,364ಕ್ಕೆ ಏರಿಕೆಯಾಗಿದೆ. 24 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 6,688ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಶೇ. 1.79 ಆಗಿದೆ. 3,13,113 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 53,563 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನೆರೆಯ ಪಾಲ್ಘರ್ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸೋಂಕಿನ ಸಂಖ್ಯೆ 57,742ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,255ಕ್ಕೆ ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.