ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸಬಾರದು: ಯೋಗೇಶ್ವರ್ ಗೆ ಪ್ರತಾಪ್ ಸಿಂಹ ಟಾಂಗ್
Team Udayavani, Apr 12, 2021, 3:17 PM IST
ಮೈಸೂರು: ಮಂಡ್ಯದಲ್ಲಿ ಡಿಸ್ನಿಲ್ಯಾಂಡ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡುತ್ತೇವೆ ಎನ್ನುತ್ತಿದ್ದಾರೆ. ಇಂಥವೆಲ್ಲ ನಾವೂ ತುಂಬಾ ನೋಡಿದ್ದೇವೆ. ಎರಡು ಸಲ ಪ್ರಚಾರಕ್ಕೆಂದು ಮಾತಾಡುತ್ತಾರೆ. ಎರಡು ವರ್ಷ ಆದಮೇಲೆ ಸಚಿವರು ಬದಲಾಗುತ್ತಾರೆ. ಪ್ರವಾಸೋದ್ಯಮ ಇಲಾಖೆಯವರು ಬಣ್ಣ ಬಣ್ಣದ ಕಾಗೆ ಹಾರಿಸಬಾರದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಲಿ ಟೂರಿಸಂ ಎನ್ನುವ ಪದ ಮಾತ್ರ ಕೇಳಿದ್ದೇವೆ. ಆ ಯೋಜನೆ ರೂಪುರೇಷೆ ಏನು? ನಿಮ್ಮ ಬಳಿ ವಿಷನ್ ಡಾಕ್ಯುಮೆಂಟ್ ಎಲ್ಲಿದೆ? ಯಾವ ಘನಕಾರ್ಯ ಮಾಡುತ್ತೀರೆಂದು ನಮಗೂ ಹೇಳಿ ಎಂದರು.
ಇದನ್ನೂ ಓದಿ:ಲಾಕ್ ಡೌನ್ ಭೀತಿ: ಮುಂಬೈನಿಂದ ಮತ್ತೆ ಸಾವಿರಾರು ಮಂದಿ ಗುಳೆ ಹೊರಟ ವಲಸೆ ಕಾರ್ಮಿಕರು!
ಮೈಸೂರಿನಿಂದ ಕಾರವಾರ, ಬಳ್ಳಾರಿ, ಬೆಂಗಳೂರಿಗೆ ಹೆಲಿಕಾಪ್ಟರ್ ಸೇವೆ ಶುರು ಮಾಡುತ್ತೇವೆ ಅಂತೀರಿ. ಮೈಸೂರಿನಿಂದ ಕಾರವಾರಕ್ಕೆ ಹೋಗಿ ನೋಡುವುದು ಏನಿದೆ? ದಸರಾ ಸಂದರ್ಭದಲ್ಲಿ ಮಾಡುವ ಹೆಲಿರೈಡ್‌ಗೇ ಜನರ ಬರುವುದಿಲ್ಲ. ಯೋಜನೆ ರೂಪಿಸುವ ಮುನ್ನ ಇದೆಲ್ಲವನ್ನೂ ಗಮನಿಸಬೇಕು. ಇಷ್ಟಾಗಿಯೂ ನಿಮಗೆ ಹೆಲಿಕಾಪ್ಟರ್ ಹಾರಿಸಬೇಕು ಎಂದರೆ ಬನ್ನಿ ವಿಮಾನ ನಿಲ್ದಾಣದಲ್ಲಿ ನಾವೇ ಜಾಗ ಕೊಡುತ್ತೇವೆ. ಕೇವಲ 10 ಮೀಟರ್ ದೂರದಲ್ಲಿ ರಾಜವಂಶಸ್ಥರಿಗೆ ಸೇರಿದ ಹೆಲಿಪ್ಯಾಡ್ ಇದೆ. ಅದನ್ನು ಬಾಡಿಗೆ, ಭೋಗ್ಯಕ್ಕೆ ಕೇಳಿದರೆ ಕೊಡಲ್ಲ ಎನ್ನುತ್ತಾರಾ? ಎಂದು ಪ್ರಶ್ನಿಸಿದರು.
ಹೆಲಿ ಟೂರಿಸಂಗೆ ನನ್ನ ವಿರೋಧ ಇದೆ.ಈ ಸಂಬಂಧ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತನಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.