ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್
Team Udayavani, Apr 13, 2021, 8:50 PM IST
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಕವಿಯತ್ರಿ ಚೈತ್ರಾ ಕೊಟ್ಟೂರ್ ಅವರ ದಾಂಪತ್ಯ ಕಲಹ ಇದೀಗ ಮತ್ತೊಮ್ಮೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಇಂದು (ಏಪ್ರಿಲ್ .14) ಪೊಲೀಸ್ ಠಾಣೆಯಲ್ಲಿ ಚೈತ್ರಾ ಅವರು ತಮ್ಮ ಪತಿ ನಾಗಾರ್ಜುನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ದೂರಿನಲ್ಲಿ ಏನಿದೆ ?
ಮದುವೆಯಾದರೂ ತನ್ನೊಂದಿಗೆ ಸಂಸಾರ ನಡೆಸುತ್ತಿಲ್ಲ ಎಂದು ಚೈತ್ರಾ ಆರೋಪಿಸಿದ್ದಾರೆ. ಮದುವೆಯಾಗಿ ವಂಚನೆ ಮಾಡಿರುವ ನಾಗಾರ್ಜುನ್ ತನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಅವರನ್ನ ಕರೆಸಿ ಬುದ್ಧಿವಾದ ಹೇಳಿ ಎಂದು ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬಸವನಗುಡಿ ಮಹಿಳಾ ಪೊಲೀಸರು ಗಂಭೀರ ಸ್ವರೂಪವಲ್ಲದ ಅಪರಾಧ (ಎನ್ಸಿಆರ್) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೆ ಚೈತ್ರಾ ಹಾಗೂ ನಾಗಾರ್ಜುನ್ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಮದುವೆಯಾದ ದಿನವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಮದುವೆ ನನಗೆ ಇಷ್ಟವಿಲ್ಲ, ಬಲವಂತವಾಗಿ ನನ್ನ ಕೈಯಿಂದ ತಾಳಿ ಕಟ್ಟಿಸಲಾಗಿದೆ ಎಂದು ನಾಗಾರ್ಜುನ್ ದೂರು ನೀಡಿದ್ದರು. ನಾಗಾರ್ಜುನ್ ಅವರ ಮನೆಯವರು ಸಹ ಚೈತ್ರಾ ಅವರ ಮನೆಗೆ ಬಂದು ಜಗಳವಾಡಿದ್ದರು.
ಇದರ ನಡುವೆಯೇ ಚೈತ್ರಾ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸೇರಿದ ಘಟನೆ ಕೂಡ ವರದಿಯಾಗಿತ್ತು. ಇದೀಗ ಅವರು ಪತಿಯ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.