ಆದ್ಯತೆ ಮೇರೆಗೆ ನೀರಿನ ಸಮಸ್ಯೆ ಬಗೆಹರಿಸಿ
Team Udayavani, Apr 14, 2021, 12:01 PM IST
ತುಮಕೂರು: ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಜಿಲ್ಲೆಯಲ್ಲಿ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಓವರ್‌ಹೆಡ್ ಟ್ಯಾಂಕ್‌ಗಳ ಮೂಲಕ ನೀರು ಪೂರೈಕೆಗೆ ಒತ್ತು ಕೊಡಬೇಕು. ನರೇಗಾ ಯೋಜನೆಯಡಿ ಸಂಪ್, ನೀರಿನ ತೊಟ್ಟಿಗಳನ್ನು ನಿರ್ಮಿಸಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು. ಒಟ್ಟಾರೆ ಜಿಲ್ಲಾದ್ಯಂತ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದರು.
ಕ್ರಮ ಕೈಗೊಳ್ಳಿ: ಜಿಲ್ಲೆಯಲ್ಲಿ ಹೊಸ ಬಡಾವಣೆನಿರ್ಮಾಣ ಮಾಡುವಾಗ ಸಿಎ(ಭೂ-ಬದಲಾವಣೆಯಾದ) ಸೈಟ್‌ನಲ್ಲಿ ಸಮುದಾಯ ಭವನಗಳಿಗೆ ಜಾಗ ಮೀಸಲಿಡುವಂತೆ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡುವ ಮೂಲಕಸಮುದಾಯ ಭವನ ನಿರ್ಮಾಣಕ್ಕೆ ಅಡಚಣೆಯಾಗಿರುವ ಜಾಗದ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಸೂಚನೆ ನೀಡಿದರು.
ವಸತಿ ರಹಿತ ಅಲೆಮಾರಿ ಜನಾಂಗದವರಿಗೆ ವಸತಿಕಟ್ಟಿಕೊಳ್ಳಲು ನಿವೇಶನ ಕಲ್ಪಿಸಬೇಕು. ನಿವೇಶನ ರಹಿತ, ವಸತಿ ರಹಿತ ಫಲಾನುಭವಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಪಂಚಾಯಿತಿವಾರು ತಯಾರಿಸಿ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಬೇಸಿಗೆ ಅವಧಿಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಫಲಾನುಭವಿಗಳ ಪಟ್ಟಿ ತಾಲೂಕುವಾರು ಮತ್ತು ಸ್ಟೇಷನ್(ಸ್ಥಾವರ)ವಾರುಮಾಹಿತಿ ಮತ್ತು ಜಿಲ್ಲೆಯಲ್ಲಿ ಸರಬರಾಜಾಗುತ್ತಿರುವ ವಿದ್ಯುತ್ ಪೂರೈಕೆಯ ಮಾಹಿತಿಯನ್ನು ಕೆಡಿಪಿ ಸಭೆಗೆ ಒದಗಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿ ಪ್ರಗತಿ ಆಗಿಲ್ಲ: ನರೇಗಾ ಯೋಜನೆಯಡಿ ಪಿಆರ್‌ಇಡಿ ವಿಭಾಗದಿಂದ ಕೈಗೊಂಡ ಕಾಮಗಾರಿಗಳು ಪ್ರಗತಿಯಾಗಿಲ್ಲ. ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಮುಗಿಸುವುದರ ಜೊತೆಗೆ ಉಳಿದ ಇತರೆ ಎಲ್ಲಇಲಾಖೆಗಳ ಪ್ರಗತಿ ಕಾರ್ಯಗಳು ನೂರಕ್ಕೆ ನೂರರಷ್ಟು ಅನುಷ್ಠಾನಗೊಳ್ಳಬೇಕು. ಅಧಿಕಾರಿಗಳು ಕಾರ್ಯವ್ಯಾಪ್ತಿಯ ಬಗ್ಗೆ ಕನಿಷ್ಟ ಜ್ಞಾನ ಹೊಂದಿರಬೇಕು. ಕೆಡಿಪಿಸಭೆಗೆ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ನಿರ್ದೇಶಿಸಿದರು.
ಜಿಪಂ ಸಿಇಒ ವಿದ್ಯಾಕುಮಾರಿ ಮಾತನಾಡಿ, ಸಚಿವರು ನೀಡಿರುವ ಎಲ್ಲಾ ನಿರ್ದೇಶನಗಳನ್ನು ಪಾಲಿಸಬೇಕು. ಕೆಡಿಪಿ ಸಭೆಗೆ ಸಚಿವರ ನಿರ್ದೇಶನದಂತೆ ಸಮರ್ಪಕಮಾಹಿತಿ ಒದಗಿಸಬೇಕು ಎಂದರು. ಜಿಲ್ಲಾ ಪಂಚಾಯಿತಿಉಪ ಕಾರ್ಯದರ್ಶಿ ಟಿ.ಕೆ. ರಮೇಶ್ ಸೇರಿದಂತೆ ಮತ್ತಿತರ ಇಲಾಖಾವಾರು ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಅಭಿವೃದ್ಧಿ ಕಾಮಗಾರಿಗೆ ಒತ್ತು :
ಚಿಕ್ಕನಾಯಕನಹಳ್ಳಿ ಸೇರಿದಂತೆ ಜಿಲ್ಲೆಯ ಯಾವ ತಾಲೂಕಿನಲ್ಲಿಯೂ ಗ್ರಾಮ ವಿಕಾಸ ಯೋಜನೆ ಪ್ರಗತಿ ಕಂಡಿಲ್ಲ. ಹಾಗಾಗಿ ಯೋಜನೆಗೆ ಮೀಸಲಾಗಿರುವ ಪೂರ್ಣ ಪ್ರಮಾಣದ ಅನುದಾನ ಬಳಸಿ ಶೇ.100ರಷ್ಟು ಗುರಿ ಸಾಧಿಸಬೇಕು. ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ತಾಲೂಕುವಾರು ಜಿಲ್ಲಾಭಿವೃದ್ಧಿಗೆಪೂರಕವಾದ ಮ್ಯಾಪಿಂಗ್ ರೂಪು-ರೇಷೆ ತಯಾರಿಸಬೇಕು. ಇದರಿಂದ ಆದ್ಯತೆ ಮೇರೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಒತ್ತು ಕೊಡಲು ಸುಲಭ ಸಾಧ್ಯವಾಗುತ್ತದೆ. ಮುಂದಿನ ಕೆಡಿಪಿ ಸಭೆಯೊಳಗೆ ಮ್ಯಾಪಿಂಗ್ ತಯಾರಿಸುವಂತೆಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.
ಫಲಾನುಭವಿಗಳಿಗೆ ನೋಟಿಸ್ ನೀಡಿ :
ಗ್ರಾಮೀಣ ವಸತಿ ಯೋಜನೆಗಳಡಿ 2010-11ನೇ ಸಾಲಿನಿಂದ ಬಾಕಿ ಉಳಿದಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. 2011-15ನೇ ಸಾಲಿನಲ್ಲಿ ವಸತಿ ಸೌಲಭ್ಯಕ್ಕೆ ಆಯ್ಕೆಯಾದ ಫಲಾನುಭವಿಗಳ ಪೈಕಿ ಈವರೆಗೂ ವಸತಿಯನ್ನು ನಿರ್ಮಿಸಿಕೊಳ್ಳದವರ ಫಲಾನುಭವಿಗಳಿಗೆ ನೋಟಿಸ್ ನೀಡಬೇಕು. ಅಲ್ಲದೆ, ಪೂರ್ಣವಾಗಿ ವಸತಿ ನಿರ್ಮಾಣ ಪ್ರಕ್ರಿಯೆ ಆರಂಭಿಸದ ಫಲಾನುಭವಿಗಳ ಮಂಜೂರಾತಿಯನ್ನು ರದ್ದುಗೊಳಿಸಿ ಪ್ರಸಕ್ತ ಸಾಲಿನ ಆಯ್ಕೆಯಲ್ಲಿ ಆದ್ಯತೆ ಕೊಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ. ಎಸ್.ಪಾಟೀಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.