2020-21ರ ಆರ್ಥಿಕ ವರ್ಷದಲ್ಲಿ ನಿವ್ವಳ ಪರೋಕ್ಷ ತೆರಿಗೆಯಲ್ಲಿ ಶೇ. 12.3 ರಷ್ಟು ಏರಿಕೆ
Team Udayavani, Apr 14, 2021, 1:10 PM IST
ನವ ದೆಹಲಿ : 2020-21ರ ಆರ್ಥಿಕ ವರ್ಷದಲ್ಲಿ ನಿವ್ವಳ ಪರೋಕ್ಷ ತೆರಿಗೆ ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
ಶೇಕಡಾ 12.3ರಷ್ಟು ಹೆಚ್ಚಳವಾಗುವುದರ ಮೂಲಕ 10.71 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಈ ಮೂಲಕ ಪರಿಷ್ಕೃತ ಅಂದಾಜುಗಳಲ್ಲಿ ನಿಗದಿಪಡಿಸಿದ್ದ ಗುರಿಯನ್ನೂ ಕೂಡ ಮೀರಿದೆ ಎಂದು ಸಚಿವಾಲಯ ತಿಳಿಸಿದೆ.
ಓದಿ : ಒಂದೇ ದಿನದಲ್ಲಿ ದಾಖಲೆಯ ಕೋವಿಡ್ ಸೋಂಕಿತರು: ದೇಶದಲ್ಲಿ 1,84,372 ಜನರಿಗೆ ಸೋಂಕು ದೃಢ
ಇನ್ನು, ಆರ್ಥಿಕ ವರ್ಷ 2020-21ರಲ್ಲಿ ಜಿ ಎಸ್ ಟಿ ನಿವ್ವಳ ತೆರಿಗೆ ಸಂಗ್ರಹವು 5.48 ಲಕ್ಷ ಕೋಟಿ ರೂಪಾಯಿಗಳಷ್ಟಿದೆ. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಕೆ ಮಾಡಿದರೆ ಒಟ್ಟು ತೆರಿಗೆ ಸಂಗ್ರಹದಲ್ಲಿ ಒಟ್ಟು ಶೇಕಡಾ 8 ರಷ್ಟು ಇಳಿಕೆಯಾಗಿರುವುದನ್ನು ಗಮನಿಸಬಹುದಾಗಿದೆ.
2019-20ರಲ್ಲಿ 5.99 ಲಕ್ಷ ಕೋಟಿ ತೆರಿಗೆ ಆದಾಯ ಸಂಗ್ರಹವಾಗಿತ್ತು. ಇನ್ನು ಕಸ್ಟಮ್ ಆದಾಯವು 2020-21ರಲ್ಲಿ 1.32 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ(1.09 ಲಕ್ಷ ಕೋಟಿ) ಶೇಕಡಾ 21ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ವರದಿ ತಿಳಿಸಿದೆ.
ಪರೋಕ್ಷ ತೆರಿಗೆಯು ಜಿ ಎಸ್ ಟಿ, ಕಸ್ಟಮ್ಸ್ ಮತ್ತು ಅಬಕಾರಿ ಸುಂಕವನ್ನು ಒಳಗೊಂಡಿದ್ದು, 2019-20ರಲ್ಲಿ 9.54 ಲಕ್ಷ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿತ್ತು. 2020-21ರ ಪರಿಷ್ಕೃತ ಅಂದಾಜಿನಲ್ಲಿ 9.89 ಲಕ್ಷ ಕೋಟಿಗೆ ರೂಪಾಯಿಗೆ ಗುರಿ ನಿಗದಿಪಡಿಸಲಾಗಿದೆ. ಆದರೆ ಈ ಗುರಿಯನ್ನೂ ಮೀರಿ ತೆರಿಗೆ ಸಂಗ್ರಹಗೊಂಡಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಕೇಂದ್ರ ಅಬಕಾರಿ ಮತ್ತು ಸೇವಾ ತೆರಿಗೆ ಶೇಕಡಾ 59.2ರಷ್ಟು ಏರಿಕೆಯಾಗಿದ್ದು, 2.45 ಲಕ್ಷ ಕೋಟಿಯಿಂದ 3.91 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ.
ಓದಿ : ವಿಶ್ವದಾದ್ಯಂತ ಮಾರುಕಟ್ಟೆಗಳಲ್ಲಿ ಸಸ್ತನಿಗಳ ಮಾರಾಟ ನಿಷೇಧಕ್ಕೆ WHO ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.