![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 15, 2021, 1:40 PM IST
ಮಂಡ್ಯ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಕ್ಕೆ ಬಾಲಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಕಲ್ಲಹಳ್ಳಿಯ 17 ವರ್ಷದ ಬಾಲಕ ಅದೇ ಬಡಾವಣೆಯ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದ ಹುಡುಗಿ ಮನೆಯವರು ನಿನ್ನೆ ರಾತ್ರಿ ಬಾಲಕನನ್ನು ಮನೆಗೆ ಕರೆದುಕೊಂಡು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಬಾಲಕನನ್ನು ಮುಂಜಾನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಬಾಲಕ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ : ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಬರುವವರಿಗೆ ಹೋಂಕ್ವಾರಂಟೈನ್, ಕೋವಿಡ್ ಪರೀಕ್ಷೆ ಕಡ್ಡಾಯ
ಯುವತಿಯ ತಂದೆ ಶಿವಲಿಂಗು ವಿರುದ್ಧ ಮೃತ ಬಾಲಕನ ಮನೆಯವರು ಗಂಭೀರ ಆರೋಪ ಮಾಡಿದ್ದು, ಹಲ್ಲೆ ನಡೆಸಿದ ಶಿವಲಿಂಗುವನ್ನು ಬಂಧಿಸಲು ಬಾಲಕಿ ಮನೆ ಎದುರು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ಕಲ್ಲಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿತ್ತು. ಶವದೊಂದಿಗೆ ಪಶ್ಚಿಮ ಪೊಲೀಸ್ ಠಾಣೆ ಎದುರು ಶವ ಇಟ್ಟು ಧರಣಿ ನಡೆಸಲು ಮೃತ ಬಾಲಕನ ಮನೆಯವರು ನಿರ್ಧಾರಿಸಿದ್ದಾರೆ.
ಘಟನೆ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.