ಮಹನೀಯರ ತ್ಯಾಗ ಸದಾಕಾಲ ಸ್ಮರಣೀಯ

ಜೀವದ ಹಂಗು ತೊರೆದು ಹೋರಾಡಿದ ಮಹನೀಯರು ಎಂದೆಂದಿಗೂ ಸ್ಮರಣೀಯರು

Team Udayavani, Apr 15, 2021, 6:37 PM IST

Clean

ಯಾದಗಿರಿ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟಿಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರು ಎಂದೆಂದಿಗೂ ಸ್ಮರಣೀಯರು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಚಟಾಣ ಏರಿಯಾದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಾತ್ಮ ಗಾಂಧೀಜಿ, ಸರ್ದಾರ್‌ ವಲ್ಲಭಬಾಯಿ ಪಟೇಲ್ ,ಜವಾಹರಲಾಲ್‌ ನೆಹರೂ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು ಎಂದು ಸ್ಮರಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ್‌ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವವು ಯುವ ಜನರಿಗೆ ದೇಶದ ಇತಿಹಾಸ ನೆನಪಿಸುವ ಕಾರ್ಯವಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.

ದೇಶ ಕಟ್ಟಲು ಹಿರಿಯರು ಮಾಡಿದ ಶ್ರಮ ಸಾರ್ಥಕವಾಗಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ದೇಶಾಭಿಮಾನ ಹೃದಯಂತರಾಳದಲ್ಲಿ ಮೂಡಬೇಕು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳೊಂದಿಗೆ ಸೇರಿ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಸ್ವಚ್ಚತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್‌, ನಗರಸಭೆಯ ಪೌರಯುಕ್ತ ಬಿ.ಟಿ.ನಾಯಕ, ಯಾದಗಿರಿ ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.