ರಾಮನವಮಿ ಉತ್ಸವ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಐದು ರಾಜ್ಯಗಳ 9 ಕಲಾವಿದರಿಂದ ಚಿತ್ರಕಲಾ ಶಿಬಿರ

Team Udayavani, Apr 15, 2021, 7:40 PM IST

ರಾಮನವಮಿ ಉತ್ಸವ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಐದು ರಾಜ್ಯಗಳ 9 ಕಲಾವಿದರಿಂದ ಚಿತ್ರಕಲಾ ಶಿಬಿರ

ಉಡುಪಿ: ಮಹಾಭಾರತ, ರಾಮಾಯಣ ಗ್ರಂಥಗಳಲ್ಲಿ ಬರುವ ವಿವಿಧ ಕಥಾನಕಗಳ ರಾಷ್ಟ್ರ ಮಟ್ಟದ ಸಾಂಪ್ರದಾಯಿಕ ಚಿತ್ರ ಕಲೆಗಳ ಶಿಬಿರ ಶ್ರೀಕೃಷ್ಣಮಠದಲ್ಲಿ ರಾಜಾಂಗಣದಲ್ಲಿ ಆರಂಭಗೊಂಡಿದೆ. ಬಿಹಾರ, ಕೇರಳ, ಕರ್ನಾಟಕ, ಒಡಿಶಾ, ತಮಿಳುನಾಡಿನ ಒಂಭತ್ತು ಕಲಾವಿದರು ಪಾಲ್ಗೊಂಡಿದ್ದಾರೆ.

ರಾಮನವಮಿ ಉತ್ಸವ ಪ್ರಯುಕ್ತ ಆಯೋಜನೆಗೊಂಡ ಶಿಬಿರವು ಎ. 15ರಿಂದ ಎ. 21ರ ವರೆಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ನಡೆಯಲಿದೆ.

ಶಿವಪುರದ ಶಿಕ್ಷಕ, ಗದಗ ಮೂಲದ ಕಮಲ್‌ ಅಹಮ್ಮದ್‌ ಬಸೋಲಿ ಶೈಲಿಯಿಂದ ಪ್ರೇರಿತವಾದ ಚಿತ್ರಕಲೆಯನ್ನು ರಚಿಸಿದರೆ, ಮಂಗಳೂರು ಮಹಾಲಸಾ ಕಲಾ ಕಾಲೇಜಿನ ಶಿಕ್ಷಕ ಹಾಸನ ಮೂಲದ ಮೋಹನಕುಮಾರ್‌ ತಂಜಾವೂರು ಶೈಲಿಯ ಚಿತ್ರಗಳನ್ನು ರಚಿಸುತ್ತಿದ್ದಾರೆ. ಇವರದು 25 ವರ್ಷಗಳ ಕಲಾಜೀವನವಾಗಿದೆ. ಒಡಿಶಾದ ಗೋಪಾಲ ಮಹಾರಾಣ, ಓಂಪ್ರಕಾಶ್‌ ಮಹಾರಾಣ ಪಟ್ಟೆಚಿತ್ರ, ತಾಳೆಗರಿಯಲ್ಲಿ ಚಿತ್ರಗಳನ್ನು ಬರೆಯುತ್ತಿದ್ದಾರೆ.

ಇದನ್ನೂ ಓದಿ :ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಬಿಹಾರ ದರ್ಭಾಂಗದವರಾದ ದರ್ಶನಕುಮಾರ್‌, ಕಲಶಿಯಾದೇವಿಯವರು ಮಧುಬನಿ (ಮಿಥಿಲಾ) ಮತ್ತು ಟ್ಯಾಟು ಚಿತ್ರಗಳನ್ನು ರಚಿಸುತ್ತಿದ್ದಾರೆ. ಗೌರಿಬಿದನೂರಿನ ಶ್ರೀನಿವಾಸ ರೆಡ್ಡಿಯವರು ಮೈಸೂರು ಸಾಂಪ್ರದಾಯಿಕ ಶೈಲಿಯ ಕಲಾವಿದರು. ಇವರು ಪ್ರಸಿದ್ಧ ಚಿತ್ರಕಲಾವಿದ ಬಿಕೆಎಸ್‌ ವರ್ಮಾರ ಶಿಷ್ಯ. 2014ರಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು.

ಬೆಂಗಳೂರಿನ ಗುಂಡೂರಾವ್‌ ತಂಜಾವೂರು ಶೈಲಿಯ ಚಿತ್ರಗಳನ್ನು ರಚಿಸುತ್ತಿದ್ದಾರೆ. ಕೇರಳದ ವಡಗರ ಮೂಲದ ಸುಮೇಶ ಕೆ. ಷಣ್ಮುಖನ್‌ ಅವರು ಕೇರಳ ಸಾಂಪ್ರದಾಯಿಕ ಶೈಲಿಯ ಚಿತ್ರಗಳನ್ನು ಕ್ಯಾನ್‌ವಾಸ್‌ನಲ್ಲಿ ಮೂಡಿಸುತ್ತಿದ್ದಾರೆ.

ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಸಾಂಕೇತಿಕವಾಗಿ ಚಿತ್ರ ಶಿಬಿರವನ್ನು ಉದ್ಘಾಟಿಸಿ ಸಾಂಪ್ರದಾಯಿಕ ಚಿತ್ರಕಲೆಗಳನ್ನು ಉಳಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು.

ಶಿಬಿರಕ್ಕೆ ಸಹಕಾರ ನೀಡುತ್ತಿರುವ ಕೆನರಾ ಬ್ಯಾಂಕ್‌ ಡಿಜಿಎಂ ಲೀನಾ ಪಿಂಟೋ, ಎಜಿಎಂ ಎಂ.ವೈ. ಹರೀಶ್‌, ಮಾರ್ಕೆಟಿಂಗ್‌ ಮೆನೇಜರ್‌ಗಳಾದ ದಿನೇಶ ಹೆಗ್ಡೆ, ನೀರಜ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಭಾಸ್ಕರ ಕೋಟ್ಯಾನ್‌, ಬಜರಂಗದಳದ ಪ್ರಾಂತ ಸಂಚಾಲಕ ಸುನೀಲ್‌ ಕೆ.ಆರ್‌. ಮೊದಲಾದವರು ಉಪಸ್ಥಿತರಿದ್ದರು. ಮಠದ ವ್ಯವಸ್ಥಾಪಕ ಗೋವಿಂದರಾಜ್‌ ಸ್ವಾಗತಿಸಿ ಶಿಬಿರ ಸಂಚಾಲಕ ಪುರುಷೋತ್ತಮ ಅಡ್ವೆ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.