ಹಾವೇರಿ ಜಿಲ್ಲಾದ್ಯಂತ ಯುಗಾದಿ ಸಂಭ್ರಮ
ಹೊಸ ವರ್ಷದ ಮೊದಲ ದಿನ ಹೊಲಗಳಲ್ಲಿ ಉಳುಮೆ ಮಾಡಿದ ಅನ್ನ ದಾತರು
Team Udayavani, Apr 15, 2021, 7:58 PM IST
ಹಾವೇರಿ: ಕೋವಿಡ್ ಭೀತಿಯ ನಡುವೆಯೂ ಜಿಲ್ಲಾದ್ಯಂತ ಹಿಂದೂಗಳ ಹೊಸ ವರ್ಷ ಚಂದ್ರಮಾನ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸಂಸ್ಕೃತಿಯ ಪ್ರಕಾರ ಯುಗಾದಿ ಹಬ್ಬ ಹೊಸ ವರ್ಷದ ಆಗಮನ. ಹಬ್ಬದ ನಿಮಿತ್ತ ಮನೆಯನ್ನು ಸ್ವತ್ಛಗೊಳಿಸಿ ಮನೆಯ ಮುಂದೆ ರಂಗೋಲಿಯನ್ನಿಟ್ಟು ಮೆರಗುಗೊಳಿಸಿದ್ದರು.
ಹಬ್ಬದ ನಿಮಿತ್ತ ಮನೆಯ ಎದುರಿನ ಬಾಗಿಲು, ದೇವರ ಮನೆಯ ಬಾಗಿಲಿಗೆ ಮಾವಿನ ಎಲೆಗಳ ಹಾರ, ತಳಿರು ತೋರಣ ಹಾಕಿ ಹೂವಿನ ಅಲಂಕಾರ ಮಾಡಲಾಗಿತ್ತು. ಯುಗಾದಿ ದಿನದಂದು ಸಂತೋಷದ ಪ್ರತೀಕವಾಗಿ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾಗಿ ಬೇವನ್ನು ಬೆರೆಸಿ ಪ್ರಸಾದ ಸೇವಿಸಿದರು. ಹೊಸ ವರ್ಷದ ಮೊದಲ ದಿನ ತಮ್ಮ ಹೊಲಗಳಲ್ಲಿ ಉಳುಮೆ ಕಾರ್ಯ ಮಾಡಿದರೆ ವರ್ಷಪೂರ್ತಿ ಉತ್ತಮವಾದ ಮಳೆ ಬೆಳೆ ಬರುತ್ತದೆ ಎಂಬ ನಂಬಿಕೆಯಿಂದ ರೈತರು ಹೊಸ ಬಟ್ಟೆ ಧರಿಸಿ ಗ್ರಾಮದ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಆಶೀರ್ವಾದ ಪಡೆದು ಬಳಿಕ ಹೊಲಗಳಿಗೆ ಹೋಗಿ ಹಣ್ಣು-ಕಾಯಿ ಒಡೆದು, ಪೂಜೆ ಸಲ್ಲಿಸಿ ನೇಗಿಲು ಹೊಡೆದರು.
ರೈತರು ತಮ್ಮ ಸಂಗಾತಿ ಎತ್ತುಗಳನ್ನು ಶೃಂಗರಿಸಿ ಅವುಗಳೊಂದಿಗೆ ಹೊಲಗಳಿಗೆ ತೆರಳಿ ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಮನೆಗಳಲ್ಲಿ ಎಲ್ಲರೂ ಇಡೀ ದೇಹಕ್ಕೆ ಎಣ್ಣೆ ಹಚ್ಚಿಕೊಂಡು, ಬೇವಿನಸೊಪ್ಪು ಹಾಕಿ ಕುದಿಸಿದ ನೀರಿನಲ್ಲಿ ಸ್ನಾನ ಮಾಡಿದ ನಂತರ ಬೇವು-ಬೆಲ್ಲ ಸೇವಿಸಿದರು. ಹೋಳಿಗೆ ಮುಂತಾದ ಮೃಷ್ಟಾನ್ನ ಭೋಜನ ತಯಾರಿಸಿ ಸಾಮೂಹಿಕವಾಗಿ ಮನೆಗಳಲ್ಲಿ ಕುಳಿತು ಸವೆದರು. ಚಂದ್ರ ದರ್ಶನ: ಹೊಸ ಬಟ್ಟೆಗಳನ್ನು ಧರಿಸಿ ಸಂಜೆ ಚಂದ್ರದರ್ಶನ ಮಾಡಿ ಪುನೀತ ಭಾವದಿಂದ ನಮನ ಸಲ್ಲಿಸಿದರು.
ಚಂದ್ರ ದರ್ಶನವಾಗುತ್ತಲೇ ಮಹಿಳೆಯರು ಮನೆಯ ಅಂಗಳದಲ್ಲಿ ದೀಪ ಹಚ್ಚಿ ಚಂದ್ರನಿಗೆ ಪೂಜೆ ಸಲ್ಲಿಸಿ, ಹಣ್ಣು, ಕಾಯಿ ಹಾಗೂ ನೈವೇದ್ಯ ಸಲ್ಲಿಸಿದರು. ಬಳಿಕ ಕಿರಿಯರು ಹಿರಿಯರ ಕಾಲಿಗೆ ಬಿದ್ದು ಬಾಳು ಸಿಹಿಯಾಗಿರಲಿ ಎಂದು ಬೇವು-ಬೆಲ್ಲ ಹಂಚಿ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನಗಳಿಗೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದರು. ರಸ್ತೆಯಲ್ಲಿ ಎದುರಾದ ಗೆಳೆಯರಿಗೆ ಶುಭಾಶಯ ವಿನಿಮಯ ಮಾಡಿಕೊಳ್ಳುವುದು, ಹಿರಿಯರಿಗೆ ನಮಸ್ಕರಿಸುವುದು ಸಾಮಾನ್ಯವಾಗಿ ಕಂಡುಬಂದಿತು.
ಒಟ್ಟಾರೆ, ಜಿಲ್ಲಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ತೀವ್ರ ಬಿಸಿಲಿನ ತಾಪದ ನಡುವೆಯೂ ಅತ್ಯಂತ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಲಾಯಿತು. ಪುರಸಿ¨
ಪುರಸಿದ್ದೇಶ್ವರ ರಥೋತ್ಸವ: ಪ್ರಸಕ್ತ ವರ್ಷ ಕೋವಿಡ್-19ರ ಹಿನ್ನೆಲೆಯಲ್ಲಿ ನಗರದ ಪುರಸಿದ್ದೇಶ್ವರ ಜಾತ್ರಾ ಮಹೋತ್ಸವ ಮಂಗಳವಾರ ಸರಳವಾಗಿ ಜರುಗಿತು. ಸಂಜೆ ನಡೆದ ರಥೋತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡು ಧನ್ಯತಾ ಭಾವ ಮೆರೆದರು. ವಿವಿಧ ಹೂವಿನ ಮಾಲೆ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ರಥದಲ್ಲಿ ಪುರಸಿದ್ದೇಶ್ವರ ದೇವರ ಮೂರ್ತಿ ಪ್ರತಿಷ್ಠಾಪಿಸಿ ವಿವಿಧ ಜಯಘೋಷಗಳೊಂದಿಗೆ ರಥೋತ್ಸವ ಎಳೆಯಲಾಯಿತು. ಪುರಸಿದ್ದೇಶ್ವರ ದೇವಸ್ಥಾನದ ಬಳಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ, ಶಿವಬಸಪ್ಪ ಜಾಬಿನ್, ಪ್ರಭು ಹಿಟ್ನಳ್ಳಿ, ಮಲ್ಲಿಕಾರ್ಜುನ್ ಸಾತೇನಹಳ್ಳಿ, ಶಿವಲಿಂಗಪ್ಪ ಕಲ್ಯಾಣಿ, ಗಿರೀಶ ಗುಮ್ಮಕಾರ, ಗುರಣ್ಣ ಸೀಮಿಕೇರಿ, ವಿರುಪಾಕ್ಷಪ್ಪ ಹತ್ತಿಮತ್ತೂರ, ಶಂಭಣ್ಣ ಖೌದಿ, ಅಶೋಕ ಕಂಡೆವಾಲ್ ಸೇರಿದಂತೆ ಭಕ್ತಾದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.