ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್
ಕೋವ್ಯಾಕ್ಸಿನ್ ಉತ್ಪಾದಿಸುವ ಬಗ್ಗೆ ತಜ್ಞರು ಅನುಮತಿ ನೀಡಿದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.
Team Udayavani, Apr 16, 2021, 9:58 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಕೋವಿಡ್ ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಬೈಯಲ್ಲಿಯೇ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಉತ್ಪಾದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ. ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆಗೆ ಅವಕಾಶ ನೀಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿಕೊಂಡಿದ್ದರು.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿಯೇ ಕೋವ್ಯಾಕ್ಸಿನ್ ತಯಾರಿಕೆಗೆ ಅನುಮತಿ ನೀಡಬೇಕೆಂಬ ಠಾಕ್ರೆ ಅವರ ಮನವಿ ಮೇರೆಗೆ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ರೇಣು ಸ್ವರೂಪ್ ಅವರು ಅನುಮತಿಯ ಪತ್ರವನ್ನು ಮಹಾರಾಷ್ಟ್ರ ಮುಖ್ಯಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ ಕಳುಹಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಮೂಲದ ಹಾಫ್ ಕಿನ್ ಇನ್ಸ್ ಟಿಟ್ಯೂಟ್ ಕೋವ್ಯಾಕ್ಸಿನ್ ತಯಾರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದಾಗಿ ಸ್ವರೂಪ್ ಮಾಹಿತಿ ನೀಡಿದ್ದಾರೆ. ಹಾಫ್ ಕಿನ್ ಕೋವ್ಯಾಕ್ಸಿನ್ ಉತ್ಪಾದಿಸುವ ಬಗ್ಗೆ ತಜ್ಞರು ಅನುಮತಿ ನೀಡಿದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.
ಮಹಾರಾಷ್ಟ್ರದಲ್ಲಿ ಕೋವ್ಯಾಕ್ಸಿನ್ ಉತ್ಪಾದಿಸಲು ಒಂದು ವರ್ಷಗಳ ಕಾಲ ಅವಧಿಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿಗದಿತ ಸಮಯದೊಳಗೆ ಕೋವ್ಯಾಕ್ಸಿನ್ ಉತ್ಪಾದನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಠಾಕ್ರೆ ಕುಂಟೆ ಅವರಿಗೆ ಸೂಚನೆ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.