ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ
Team Udayavani, Apr 17, 2021, 6:20 AM IST
ಹೊಸದಿಲ್ಲಿ: ಚೆಕ್ ಅಮಾನ್ಯ ಪ್ರಕರಣ ಗಳನ್ನು ಕ್ಷಿಪ್ರವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಕಾನೂನಿಗೆ ತಿದ್ದುಪಡಿ ತರಬೇಕಾಗಿದೆ. ಈ ಬಗ್ಗೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ದೇಶದಲ್ಲಿರುವ ಹೈಕೋರ್ಟ್‌ಗಳು ಕೂಡ ಕೆಳಹಂತದ ನ್ಯಾಯಾಲಯಗಳಿಗೆ ಚೆಕ್ ಅಮಾನ್ಯ ಪ್ರಕರಣಗಳ ವಿಲೇವಾರಿಗೆ ನಿರ್ದೇಶನಗಳನ್ನು ಹೊರಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್. ಎ.ಬೋಬ್ದೆ ನೇತೃತ್ವದ ನ್ಯಾಯಪೀಠ ತಿಳಿಸಿದೆ.
ಪ್ರಕರಣದಲ್ಲಿ ಸಾಕ್ಷಿದಾರನನ್ನು ಖುದ್ದಾಗಿ ವಿಚಾರಣೆಗೆ ಒಳಪಡಿಸಬೇಕಾ ಗಿಲ್ಲ. ಅದಕ್ಕೆ ಸಂಬಂಧಿಸಿದ ಅಂಶಗಳನ್ನು ನ್ಯಾಯಾಲಯಕ್ಕೆ ಅಫಿಡವಿಟ್ ಮೂಲಕ ಸಲ್ಲಿಸಲೂ ಅವಕಾಶ ಕಲ್ಪಿಸಿಕೊಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಅದಕ್ಕೆ ಸಂಬಂಧಿಸಿದ ಕಾನೂನು, ನೆಗೋಶಿ ಯೇಬಲ್ ಇನ್‌ಸೂóಮೆಂಟ್ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.
ಚೆಕ್ ಅಮಾನ್ಯ ಪ್ರಕರಣಗಳಲ್ಲಿ ಕೆಳ ಹಂತದ ಕೋರ್ಟ್‌ಗಳಿಗೆ ಸಾಕ್ಷಿದಾರರಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗ ಬೇಕು ಎಂದು ಸೂಚನೆ ನೀಡಲು ಅಧಿ ಕಾರ ವಿಲ್ಲ ಎಂದು ಹಿಂದಿನ ಸಂದರ್ಭದಲ್ಲಿ ನೀಡಿದ್ದ ತೀರ್ಪನ್ನು ನ್ಯಾಯಪೀಠ ಪುನರು ಚ್ಚಿಸಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾ. 10ರಂದು ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್.ಸಿ. ಚವಾಣ್ ನೇತೃತ್ವದಲ್ಲಿ ಸಮಿತಿ ರಚಿಸಿ, ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.