ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ ದಂಧೆ


Team Udayavani, Apr 17, 2021, 12:40 PM IST

Create a duplicate record of land sales

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನಡೆದಿರುವ 164 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷಿಗೆ ಸಂಬಂಧಿಸಿದಂತೆ ನಡೆದಿರುವ ಅಕ್ರಮಗಳ ಕುರಿತು ವಿವಿಧ ಠಾಣೆಗಳಲ್ಲಿ 25 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಬೆಂಗಳೂರುಗ್ರಾಮಾಂತರ ಜಿಲ್ಲಾ ಪೊಲೀಸ್‌ ಅಧೀಕ್ಷಕ ರವಿ ಡಿ.ಚನ್ನಣ್ಣನವರ್‌ ಹೇಳಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಕೈಗಾರಿಕಾ ಪ್ರದೇಶಕ್ಕೆ ಸಮೀಪದ ರಘುನಾಥಪುರ, ಶಿವಪುರ ಗ್ರಾಮಗಳಲ್ಲಿ ಜೀವಂತವಾಗಿರುವ ವ್ಯಕ್ತಿಗಳು ಮೃತ ಪಟ್ಟಿದ್ದಾರೆ ಎಂದು ಮರಣ ಪ್ರಮಾಣ ಪತ್ರ ಪಡೆದು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಜಮೀನುಮಾರಾಟ ಮಾಡಲಾಗಿದೆ. ಸಾಸಲು ಹೋಬಳಿಯ ತೋಡಲ ಬಂಡೆ ಗ್ರಾಮದಲ್ಲಿ ರುದ್ರಪ್ಪ ಎಂಬುವವರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ ಮುತ್ತು ರಾಯಪ್ಪ ಎಂಬುವವರಿಗೆ ಸೇರಿದ್ದ ಜಮೀನನ್ನುತನ್ನದು ಎಂದು ವಂಶವೃಕ್ಷ ಮಾಡಿಸಿಕೊಂಡಿದ್ದಾರೆ. ಗ್ರಾಮದ ಹತ್ತು ಜನ ಸಾಕ್ಷಿಗಳ ನಕಲಿಸಹಿಗಳನ್ನು ಹಾಕುವ ಮೂಲಕ ಅಕ್ರಮವಾಗಿ ತಮ್ಮ ಹೆಸರಿಗೆ ಖಾತೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಒಂದೊಂದು ಜಮೀನು ಪ್ರಕರಣದಲ್ಲೂ ಒಂದೊಂದು ರೀತಿಯ ಅಕ್ರಮಗಳು ನಡೆದಿವೆ ಎಂದು ತಿಳಿಸಿದರು.

ತಾಲೂಕಿನಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಕಲಿ ದಾಖಲೆಗಳ ಸೃಷ್ಟಿ ಮಿತಿ ಮೀರಿದೆ. ಜಮೀನುಗಳಿಗೆ ಅಕ್ರಮ ದಾಖಲೆಗಳನ್ನು ಸೃಷ್ಟಿಸುವಲ್ಲಿ ತಾಲೂಕಿನಲ್ಲಿ ಮೂರು ಗುಂಪುಗಳು ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ನಕಲಿ ದಾಖಲೆ ಹೊಂದಿರುವ ಜಮೀನು ಮಾರಾಟ, ಖರೀದಿಯಲ್ಲಿ ರೌಡಿಶೀಟರ್‌ಗಳು, ಬೆಂಗಳೂರು ಮೂಲದ ರಿಯಲ್ ಎಸ್ಟೇಟ್‌ ಕಂಪನಿಯೊಂದು ಸಕ್ರಿಯವಾಗಿದೆ.ಈ ಬಗ್ಗೆಯು ತನಿಖೆಯಲ್ಲಿ ಬೆಳಕಿಗೆ ಬಂದಿದೆಎಂದರು.

ಆರ್‌ಟಿಸಿ ಪರಿಶೀಲಿಸಿಕೊಳ್ಳಿ: ಊರಿನಲ್ಲಿ ಇರದೇ ನೀಲಗಿರಿ ತೋಪುಗಳನ್ನು ಬೆಳೆಸಿರುವ ಹಾಗೂ ಹೊರ ಊರುಗಳಲ್ಲಿ ಇರುವವರು ಕನಿಷ್ಠ ವರ್ಷಕ್ಕೆ ಒಮ್ಮೆಯಾದರೂ ತಮ್ಮಜಮೀನಿನ ಆರ್‌ಟಿಸಿ ಗಳನ್ನು ಪರಿಶೀಲಿಸಿಕೊಳ್ಳಬೇಕು. ಅಲ್ಲದೆ ಯಾವುದೇ ಜಮೀನಿನ ಖಾತೆ ವರ್ಗಾವಣೆಯ ವಿವಿಧ ಹಂತಗಳನ್ನುತಮ್ಮ ಮೊಬೈಲ್‌ಗ‌ಳಲ್ಲಿಯೇ ಆನ್‌ಲೈನ್‌ಗಳ ಮೂಲಕ ಪರಿಶೀಲನೆ ನಡೆಸಿಕೊಳ್ಳಬಹುದಾಗಿದೆ. ಹೀಗಾಗಿ ಖಾತೆ ಬದಲಾವಣೆ ಕುರಿತಂತೆ ಅನುಮಾನ ಬಂದ ಕೂಡಲೇ ಕಂದಾಯ ಇಲಾಖೆಗೆ ಹಾಗೂ ಪೊಲೀಸರಿಗು ಲಿಖೀತದೂರು ನೀಡಬಹುದಾಗಿದೆ ಎಂದರು.

ಜಮೀನುಗಳಿಗೆ ನಕಲಿ ದಾಖಲೆ ಸೃಷ್ಟಿಯತಂಡವನ್ನು ಬೆಯಲಿಗೆ ತಂದ ಡಿವೈಎಸ್ಪಿಟಿ.ರಂಗಪ್ಪ ಸೇರಿದಂತೆ ಪೊಲೀಸರ ತಂಡಕ್ಕೆಕೇಂದ್ರವಲಯ ಐಜಿಪಿ ಅವರು ನಗದುಬಹುಮಾನ ಘೋಷಣೆ ಮಾಡಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ಅಧೀಕ್ಷಕ ಲಕ್ಷ್ಮೀಗಣೇಶ್‌, ಡಿವೈಎಸ್ಪಿಟಿ.ರಂಗಪ್ಪ, ಸರ್ಕಲ್‌ ಇನ್ಸ್‌ಪೆಕ್ಟರ್‌ಎಂ.ಬಿ.ನವೀನ್‌ಕುಮಾರ್‌, ಇನ್ಸ್‌ಪೆಕ್ಟರ್‌ಸತೀಶ್‌, ಸಬ್‌ ಇನ್ಸೆಪೆಕ್ಟರ್‌ ಮಂಜುನಾಥ್‌,ಗಜೇಂದ್ರ ಇತರರಿದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.