ಬೇಲೂರು-ಹಾಸನ ರೈಲು ಮಾರ್ಗಕ್ಕೆ ಸರ್ವೇ


Team Udayavani, Apr 17, 2021, 7:18 PM IST

,ಮನಬ್ರ್ಗ್ರ

ಚಿಕ್ಕಮಗಳೂರು : ಬೇಲೂರು-ಹಾಸನ ರೈಲುಮಾರ್ಗ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾಧೀನಕ್ಕೆ ಸರ್ವೇ ಕಾರ್ಯ ನಡೆದಿದ್ದು, ಸರ್ಕಾರಿ ಜಾಗವನ್ನು ಗುರುತಿಸುವಂತೆ ಮೂಲ ಸೌಕರ್ಯ, ಬಂದರು, ಒಳನಾಡು, ಜಲಸಾರಿಗೆ, ಹಜ್‌ ಮತ್ತು ವಕ್ಫ್  ಸಚಿವ ಆನಂದ್‌ಸಿಂಗ್‌ ಅಧಿಕಾರಿಗಳಿಗೆ ತಿಳಿಸಿದರು.

ಶುಕ್ರವಾರ ನಗರದ ಜಿಪಂ ಅಬ್ದುಲ್‌ ನಜೀರ್‌ಸಾಬ್‌ ಸಭಾಂಗಣದಲ್ಲಿ ಚಿಕ್ಕಮಗಳೂರು- ಬೇಲೂರು- ಹಾಸನ ರೈಲುಮಾರ್ಗ ನಿರ್ಮಾಣದ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಿಕ್ಕಮಗಳೂರಿನಿಂದ ಹಾಸನ ರೈಲುಮಾರ್ಗ ನಿರ್ಮಾಣಕ್ಕೆ 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾಯೋಜನೆ ತಯಾರಿಸಲಾಗಿದೆ. ಭೂಸ್ವಾ ಧೀನ ಸೇರಿದಂತೆ ಮೊದಲ ಹಂತದಲ್ಲಿ 465 ಕೋಟಿ ರೂ. ಮಂಜೂರಾಗಿದೆ ಎಂದ ಅವರು, ಹಣ ಮಂಜೂರಾಗಿ ಎರಡು ವರ್ಷ ಕಳೆದರೂ ಕೂಡ ಕಾಮಗಾರಿ ಪ್ರಾರಂಭವಾಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಚಿಕ್ಕಮಗಳೂರಿನಿಂದ ಬೇಲೂರಿಗೆ 22ಕಿ. ಮೀ. ಮತ್ತು ಬೇಲೂರಿನಿಂದ ಹಾಸನಕ್ಕೆ 38 ಕಿ.ಮೀ. ಸೇರಿದಂತೆ ಒಟ್ಟು 60 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣಕ್ಕೆ ಭೂಸ್ವಾ ಧೀನ ವಾಗಿದ್ದು, ಇದರಲ್ಲಿ ಸರ್ಕಾರಿ ಜಾಗವನ್ನು ಗುರುತಿಸುವಂತೆ ತಿಳಿಸಿದ ಸಚಿವರು, ಭೂಸ್ವಾ  ಧೀನಪಡಿಸಿಕೊಂಡಿರುವ ಫಲಾನುಭವಿಗಳಿಗೆ ಪರಿಹಾರ ನೀಡಲಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಚಿಕ್ಕಮಗಳೂರು ಉಪವಿಭಾಗಾಧಿ ಕಾರಿ ಡಾ| ಎಚ್‌.ಎಲ್‌. ನಾಗರಾಜ್‌ ಸಭೆಗೆ ಮಾಹಿತಿ ನೀಡಿ, ರೈಲ್ವೆ ಮಾರ್ಗ ನಿರ್ಮಾಣಕ್ಕೆ ಈಗಾಗಲೇ 150 ಎಕರೆ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ಸಿ.ಟಿ. ರವಿ ಮಾತನಾಡಿ, ರೈಲ್ವೆ ಮಾರ್ಗ ಹಳಿಗಳ ಮಾರ್ಗದಲ್ಲಿ ಗ್ರಾಮಗಳು ಒಳಪಟ್ಟಿದ್ದರೆ ಅಂತಹ ಜಾಗವನ್ನು ಗುರುತಿಸಿ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ಧಿಕಾರಿಗಳು ಸಭೆ ಸೇರಿ ರೈಲ್ವೆ ಮಾರ್ಗ ನಿರ್ಮಾಣದ ಬಗ್ಗೆ ಚರ್ಚಿಸಿ ಕಾಮಗಾರಿ ಪ್ರಾರಂಭಕ್ಕೆ ಗಮನ ಹರಿಸಬೇಕೆಂದರು. ಸಭೆಯಲ್ಲಿ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉಪಾಧ್ಯಕ್ಷ ಬಿ.ಜೆ. ಸೋಮಶೇಖರಪ್ಪ, ಜಿಲ್ಲಾ  ಧಿಕಾರಿ ಕೆ.ಎನ್‌. ರಮೇಶ್‌, ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಎಸ್‌.ಪೂವಿತ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌. ಅಕ್ಷಯ್‌, ಅಪರ ಜಿಲ್ಲಾ ಧಿಕಾರಿ ಬಿ.ಆರ್‌. ರೂಪ ಮತ್ತಿತರರು ಇದ್ದರು

 

 

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.