ಹಾವೇರಿ ಜಿಲ್ಲೆಯಲ್ಲಿ ಮತ್ತೆ ಎರಡಂಕಿ ದಾಟಿದ ಕೋವಿಡ್
15 ದಿನದಲ್ಲಿ234 ಪ್ರಕರಣ ಪತ್ತೆ! 200 ಸಕ್ರಿಯ ಪ್ರಕರಣನಿತ್ಯ ಸರಾಸರಿ 20-30 ಕೇಸ್
Team Udayavani, Apr 17, 2021, 7:40 PM IST
ಹಾವೇರಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಸೋಂಕಿನ ಪ್ರಕರಣಗಳ ಪತ್ತೆ ಪ್ರತಿದಿನ ಎರಡಂಕಿಗೆ ಬಂದು ತಲುಪಿದ್ದು, ಆತಂಕ ಹೆಚ್ಚುವಂತೆ ಮಾಡಿದೆ. ನಿತ್ಯ ಸರಾಸರಿ 20-30 ಪ್ರಕರಣ: ಪ್ರತಿನಿತ್ಯ ಸರಾಸರಿ 20-30 ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ಜಿಲ್ಲೆಯಲ್ಲಿ 200 ಸಕ್ರಿಯ ಪ್ರಕರಣಗಳಿದ್ದು, 5 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರು ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿನ ಪ್ರಕರಣಗಳ ಏರಿಕೆ:
ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕ ಉಂಟು ಮಾಡಿದೆ. ಏ.1ರಂದು ಕೇವಲ 3 ಕೋವಿಡ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದವು. ಏ.2ರಂದು 8 ಪ್ರಕರಣ, ಏ.3ರಂದು 4, ಏ.4ರಂದು 7, ಏ.5ರಂದು 5, ಏ.6ರಂದು 5, ಏ.7ರಂದು 12, ಏ.8ರಂದು 15, ಏ.9ರಂದು 13, ಏ.10ರಂದು 16, ಏ.11ರಂದು 22, ಏ.12ರಂದು 36, ಏ.13ರಂದು 17 ಪ್ರಕರಣ, ಏ.14ರಂದು 44, ಏ.15ರಂದು 27 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು 234 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಇದುವರೆಗೆ 33 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಹಾಗಾಗಿ, ಒಟ್ಟು 200 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 199 ಕೋವಿಡ್ ಸೋಂಕಿತರು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಯ ಕೋವಿಡ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರು ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಇದುವರೆಗೆ 197 ಜನರು ಮೃತಪಟ್ಟಿದ್ದಾರೆ.
ಅಗತ್ಯ ಬೆಡ್‌ಗಳ ವ್ಯವಸ್ಥೆ: ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ 6 ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯ ಬೇಡ್, ವೆಂಟಿಲೇಟರ್, ಆಕ್ಸಿಜನ್, ಐಸಿಯು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಇದುವರೆಗೂ ಒಟ್ಟು 307 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳ ಕೋವಿಡ್ ಸೆಂಟರ್‌ಗಳಲ್ಲಿ 49 ವೆಂಟಿಲೇಟರ್ ಸಹಿತ ಐಸಿಯು ಬೇಡ್, 39 ವೆಂಟಿಲೇಟರ್ ರಹಿತ ಐಸಿಯು ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಕೋವಿಡ್ ಸೋಂಕಿತ ಯಾರೊಬ್ಬರಿಗೂ ಜನರಲ್ ಬೆಡ್‌ನಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಎರಡು ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, 3 ಜನ ಸೋಂಕಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೀರೇಶ ಮಡ್ಲೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.