ಐದು ವರ್ಷದ ಹಿಂದೆ ನಡೆದ ಮನೆಗಳ್ಳತನ ಪ್ರಕರಣ ಭೇದಿಸಿದ ಬ್ಯಾಟರಾಯನಪುರ ಪೊಲೀಸರು
Team Udayavani, Apr 17, 2021, 11:30 PM IST
ಬೆಂಗಳೂರು: ಐದು ವರ್ಷಗಳ ಹಿಂದೆ ಉದ್ಯಮಿಯೊಬ್ಬರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬ್ಯಾಟರಾಯನಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರ್.ಕೆ.ಹೆಗ್ಗಡೆ ನಗರದ ನಿವಾಸಿ ಮೊಹಮ್ಮದ್ ಹುಸೇನ್ (32) ಬಂಧಿಸಿ ವಿಚಾರಣೆ ನಡೆಸಿದಾಗ ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದ ಅಚ್ಯುತ್ ಕುಮಾರ್ ಗಣಿ (33), ಅಕ್ಮಲ್ ಬೇಗ್ (32), ಅಮ್ಜದ್ (30) ಕೂಡ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ 660 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
2017 ಸೆ.29ರಂದು ಸಂಜೆ ಬ್ಯಾಟರಾಯನಪುರ ಮುನೇಶ್ವರ ಬ್ಲಾಕ್ ನಿವಾಸಿ ಉದ್ಯಮಿ ಆನಂದ್ ಎಂಬವರು ವಿಜಯದಶಮಿ ಹಬ್ಬದ ಅಂಗವಾಗಿ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ರಾಜರಾಜೇಶ್ವರಿ ನಗರದಲ್ಲಿರುವ ಸಹೋದರಿ ಕವಿತಾ ಮನೆಗೆ ಹೋಗಿದ್ದರು. ಅದನ್ನು ಗಮನಿಸಿದ್ದ ಆರೋಪಿಗಳು ಅವರ ಮನೆಯ ಬಾಲ್ಕನಿಗೆ ಬಂದು ಅಲ್ಲಿದ್ದ ಬಾಗಿಲನ್ನು ಒಡೆದು ಒಳ ಪ್ರವೇಶಿಸಿ ಒಂದನೇ ಅಂತಸ್ತಿನ ಕೋಣೆಯಲ್ಲಿದ್ದ ಕಬೋರ್ಡ್‌ನ್ನು ಕಬ್ಬಿಣದ ರಾಡ್‌ನಿಂದ ಒಡೆದು ಒಳಗಿದ್ದ ಲಾಕರ್ ಕೀ ತೆಗೆದುಕೊಂಡು ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣ ಸೇರಿ 25 ಲಕ್ಷ ರೂ. ಮೌಲ್ಯದ ಒಡವೆಗಳನ್ನು ಹೊತ್ತೂಯ್ದಿದ್ದರು.
ಇದನ್ನೂ ಓದಿ :ಭಾರತದ ಔಷಧ ರಫ್ತಿನಲ್ಲಿ ಶೇ.18ರಷ್ಟು ಪ್ರಗತಿ : 24.44 ಶತ ಕೋಟಿ ಡಾಲರ್ ಮೌಲ್ಯದ ಔಷಧ ರಫ್ತು
ಆನಂದ್ ಸಹೋದರಿ ಮನೆಯು ನಿರ್ಮಾಣ ಹಂತದಲ್ಲಿದ್ದ ಹಿನ್ನೆಲೆಯಲ್ಲಿ ಅವರ ಒಡವೆಗಳನ್ನೂ ಇಲ್ಲೇ ಇಡಲಾಗಿತ್ತು. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ವೃತ್ತಿಪರ ಕಳ್ಳ ಮಹಮ್ಮದ್ ಹುಸೇನ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳೆದ 5 ವರ್ಷಗಳ ಹಿಂದೆ ಆನಂದ್ ಮನೆಯಲ್ಲಿ ನಡೆಸಿದ ಕಳ್ಳತನ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ. ಜತೆಗೆ ಈಗಾಗಲೇ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಇತರ ಆರೋಪಿಗಳ ಬಗ್ಗೆಯೂ ಮಾಹಿತಿ ನೀಡಿದ್ದ. ಈ ಆಧಾರದ ಮೇಲೆ ನಾಲ್ವರನ್ನು ವಿಚಾರಣೆ ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಎಲ್ಲ ಆರೋಪಿಗಳು ಕಳ್ಳತನವನ್ನೇ ವೃತ್ತಿಯನ್ನಾಗಿಸಿದ್ದು, ಆರೋಪಿ ಅಚ್ಯುತ್ ಕುಮಾರ್ ಗಣಿ ವಿರುದ್ಧ ಸರಗಳ್ಳತನ, ಮನೆಗಳ್ಳತನ ಸೇರಿ ಒಟ್ಟು 180 ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.