ಪ್ರತಿಯೊಂದು ಹಬ್ಬದಲ್ಲೂ ತುಳುನಾಡಿನ ಸಾರವಿದೆ: ಮಹೇಶ್‌ ಎಸ್‌. ಶೆಟ್ಟಿ

Team Udayavani, Apr 18, 2021, 11:49 AM IST

Each festival has its own essence

ಮುಂಬಯಿ: ಯುಗಾದಿ ಹಬ್ಬ ವನ್ನು ಬಂಟರ ಸಂಘದಲ್ಲಿ ಪ್ರತೀವರ್ಷ ಬಹಳ ಅದ್ದೂರಿಯಿಂದ, ಉತ್ಸಾಹದೊಂದಿಗೆ ಸಂಪ್ರದಾಯ ಬದ್ಧವಾಗಿ ಆಚರಿಸಿಕೊಂಡು ಬಂದಿದ್ದೇವೆ. ಇದೀಗ ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ. ಆದರೂ ಕನ್ನಡ ವೆಲ್ಫೆàರ್‌ ಸೊಸೈಟಿಯ ಎಲ್ಲ ಸದಸ್ಯರು ಸೇರಿ ಹಬ್ಬವನ್ನು ಕೊರೊನಾ ಮಧ್ಯೆಯೂ ಅರ್ಥಪೂರ್ಣವಾಗಿ ಆಚರಿಸಿಕೊಂಡಿರುವುದು ನಿಜವಾಗಿಯೂ ಅಭಿಮಾನದ ಸಂಗತಿ. ಯುಗಾದಿ ಸಹಿತ ನಮ್ಮ ತವರೂರಿನ ಎಲ್ಲ ಹಬ್ಬ ಹರಿದಿನಗಳು ಹಬ್ಬಕ್ಕೆ ಮಾತ್ರ ಸೀಮಿತವಾಗಿಲ್ಲ. ಪ್ರತಿಯೊಂದು ಹಬ್ಬದಲ್ಲೂ ಅದರದ್ದೇ ಆದ ಒಂದು ವಿಶಿಷ್ಟತೆ ಇರುತ್ತದೆ. ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರಗಳು ಅಲ್ಲಿ ಅಡಕವಾಗಿರುತ್ತವೆ. ಈ ಎಲ್ಲ ಆಚಾರ, ವಿಚಾರಗಳನ್ನು ನಮ್ಮ ಮಕ್ಕಳಿಗೆ ತಿಳಿಯಪಡಿಸುವ ಅಗತ್ಯವಿದೆ ಎಂದು ಬಾಬಾ ಗ್ರೂಪ್ಸ್‌ನ ಆಡಳಿತ ನಿರ್ದೇಶಕ ಮಹೇಶ್‌ ಎಸ್‌. ಶೆಟ್ಟಿ ತಿಳಿಸಿದರು.

ಎ. 14ರಂದು ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ವತಿಯಿಂದ ಘಾಟ್‌ಕೋಪರ್‌ ಪೂರ್ವದಲ್ಲಿರುವ ಸಂಘದ ಮಹೇಶ್‌ ಶೆಟ್ಟಿ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ಯುಗಾದಿ ಹಬ್ಬದ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಕಳೆದ ಹಲವಾರು ವರ್ಷಗಳಿಂದ ಕಲೆ, ಸಂಸ್ಕೃತಿ, ನಾಡಿನ ಸಂಪ್ರದಾಯ, ಆಚಾರ, ವಿಚಾರಗಳನ್ನು ಉಳಿಸಿ- ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಶುಭ ಹಾರೈಸಿದರು.

ಅತಿಥಿಯಾಗಿ ಆಗಮಿಸಿದ ಜಯಲಕ್ಷ್ಮೀ ಶೆಟ್ಟಿ ಮಾತನಾಡಿ, ನಾವು ಚಿಕ್ಕವರಿದ್ದಾಗ ಊರಿನಲ್ಲಿ ಯುಗಾದಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿ ದ್ದೆವು. ಇದೀಗ ಬಹಳ ವರ್ಷಗಳ ಬಳಿಕ ಕನ್ನಡ ವೆಲ್ಫೆàರ್‌ ಸೊಸೈಟಿಯಲ್ಲಿ ಯುಗಾದಿಯನ್ನು ಆಚರಿಸುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ. ಇಂದಿನ ಕಾರ್ಯಕ್ರಮವು ತವರೂರಿನ ನೆನಪನ್ನು ಮತ್ತೆ ಮರುಕಳಿಸುವಂತೆ ಮಾಡಿದೆ. ಕಾರ್ಯ ಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿದ ಎಲ್ಲರಿಗೂ ಅಭಾರಿಯಾಗಿದ್ದೇನೆ ಎಂದು ಕೋವಿಡ್‌ ಭಯದಿಂದ ಶೀಘ್ರ ಮುಕ್ತ ರಾಗೋಣ ಎಂದು ಶುಭ ಹಾರೈಸಿದರು.

ಸಂಘದ ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ನಂದಳಿಕೆ ಅವರು ಯುಗಾದಿ ಹಬ್ಬದ ವಿಶೇಷತೆ, ಊರಿನಲ್ಲಿ ಹಿರಿಯರು ಆಚರಿಸುತ್ತಿದ್ದ ಪರಿ, ಹಬ್ಬದ ಮಹತ್ವ, ಉದ್ದೇಶಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಮಾತನಾಡಿ, ಯುಗಾದಿ ಹಬ್ಬವು ವಸಂತ ಋತುವಿನಲ್ಲಿ ಬರುವ ಬಹಳ ವಿಶೇಷ ಹಬ್ಬವಾಗಿದೆ. ಮನಸ್ಸಿಗೆ ಬಹಳಷ್ಟು ಮುದ ನೀಡುವ ಹಬ್ಬ ಇದಾಗಿದೆ. ಈ ಸಂದರ್ಭದಲ್ಲಿ ಮರಗಿಡಗಳು ಹೂ ಬಿಟ್ಟು, ಹಚ್ಚಹಸುರಾಗಿ ಕಂಗೊಳಿಸುವುದನ್ನು ನೋಡುವುದೇ ಸಂಭ್ರಮ. ನಮ್ಮ ಹಿರಿಯರು ಬಹಳ ಸಂಪ್ರ ದಾಯಬದ್ಧವಾಗಿ ಯುಗಾದಿ ಹಬ್ಬವನ್ನು ಆಚರಿಸುವುದನ್ನು ಕಾಣಬಹುದು. ಬೇವು- ಬೆಲ್ಲವನ್ನು ನೀಡಿ, ನಾವೆಲ್ಲರೂ ಕಷ್ಟ, ಸುಖಗಳನ್ನು ಸಮಾನವಾಗಿ ಹಂಚಿಕೊಳ್ಳುವ ಉತ್ತಮ ಸಂದೇಶ ಈ ಯುಗಾದಿ ಹಬ್ಬದ ಆಚರಣೆಯಲ್ಲಿ ಅಡಗಿದೆ. ಕೊರೊನಾ ಮಹಾಮಾರಿಯ ಕಠಿನ ವಾತಾವರಣದ ಮಧ್ಯೆಯೂ ಈ ನಮ್ಮ ಸಂಘದ ಸದಸ್ಯರೆಲ್ಲರೂ ಸೇರಿ ಯುಗಾದಿ ಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎನ್ನಲು ಸಂತೋಷವಾಗುತ್ತಿದೆ. ಈ ಕಾರ್ಯ ಕ್ರಮವನ್ನು ಆಯೋಜಿಸುವಲ್ಲಿ ಮಹೇಶ್‌ ಶೆಟ್ಟಿ ಅವರ ಸಹಕಾರ ಅವಿಸ್ಮರಣೀಯ. ಇಂತಹ ದಾನಿಗಳ ಪ್ರೋತ್ಸಾಹದಿಂದ ನಮ್ಮ ಸಂಸ್ಥೆಯ ಎಲ್ಲ ಕಾರ್ಯಕ್ರಮಗಳನ್ನು ಉತ್ಸಾಹದಿಂದ ಆಚರಿಸಲು ಸಾಧ್ಯವಾಗುತ್ತಿದೆ. ಅವರ ಸಹಕಾರ ನಿರಂತರವಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಹರಿಣಿ ಎಂ. ಶೆಟ್ಟಿ, ಸುಚಿತಾ ಶೆಟ್ಟಿ, ಸುಜಾಲಾ ಎ. ಶೆಟ್ಟಿ, ಪ್ರಮೀಳಾ ಆರ್‌. ಶೆಟ್ಟಿ, ಶಾಲಿನಿ ಶೆಟ್ಟಿ ಮೊದಲಾದವರು ಯುಗಾದಿ ಹಬ್ಬದ ಮಹತ್ವದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕೋಶಾಧಿಕಾರಿ ತಿಮ್ಮ ದೇವಾಡಿಗ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್‌. ಶೆಟ್ಟಿ, ಕೃಷ್ಣ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಶಂಕರ ಶೆಟ್ಟಿ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ನಂದಳಿಕೆ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.