ಮುಷ್ಕರದಲ್ಲೂ 126 ಬಸ್ ಸಂಚಾರ
Team Udayavani, Apr 18, 2021, 6:34 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿರುವ ಮಧ್ಯೆಯೇ ಶನಿವಾರ ವಿವಿಧ ಡಿಪೋಗಳ ಸುಮಾರು 126 ಸರ್ಕಾರಿ ಸಾರಿಗೆ ಬಸ್ ಗಳು ರಸ್ತೆಗಿಳಿದು ಜಿಲ್ಲೆಯಲ್ಲಿ ಸಂಚಾರ ಆರಂಭಿಸಿವೆ. ಸರ್ಕಾರಿ ಸಾರಿಗೆ ಬಸ್ ಗಳ ಸಂಚಾರದಿಂದಾಗಿ ಖಾಸಗಿ ಸಾರಿಗೆ ಬಸ್ ಮಾಲೀಕರು ನಿರಾಶರಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿ ಕಾರಿಗಳ ಜತೆ ಮಾತಿನ ಚಕಮಕಿ ನಡೆಸಿದ ಘಟನೆ ಶನಿವಾರ ನಗರದಲ್ಲಿ ನಡೆದಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 10 ದಿನಗಳಿಂದ ಕೆಲಸ ಸ್ಥಗಿತಗೊಳಿಸಿ ಮುಷ್ಕರದಲ್ಲಿ ನಿರತರಾಗಿದ್ದು, ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ದಿನದಿಂದ ದಿನಕ್ಕೆ ಮುಷ್ಕರದ ಕಾವು ಕಡಿಮೆಯಾಗುತ್ತಿದ್ದು, ಶನಿವಾರ ಚಿಕ್ಕಮಗಳೂರು ಡಿಪೋದ 26 ಬಸ್‌ಗಳು ಸೇರಿದಂತೆ ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ವಿಭಾಗದ ಮೂಡಿಗೆರೆ, ಅರಸೀಕೆರೆ, ಬೇಲೂರು, ಸಕಲೇಶಪುರ ಡಿಪೋಗೆ ಸೇರಿದ ಸುಮಾರು 126 ಕೆಎಸ್‌ಆರ್ ಟಿಸಿ ಬಸ್‌ಗಳು ಜಿಲ್ಲೆಯಲ್ಲಿ ಸಂಚಾರ ಆರಂಭಿಸಿವೆ.
ಮುಷ್ಕರ ನಿರತ ನೌಕರರ ಪೈಕಿ ಕೆಲ ನೌಕರರು ಒಬ್ಬೊಬ್ಬರಾಗಿ ಕೆಲಸಕ್ಕೆ ಹಾಜರಾಗುತ್ತಿದ್ದು, ಕಳೆದ 10 ದಿನಗಳಿಂದ ಜಿಲ್ಲಾದ್ಯಂತ ಅಸ್ತವ್ಯಸ್ತಗೊಂಡಿದ್ದ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆ ಸೋಮವಾರ ಯಥಾಸ್ಥಿತಿಗೆ ಮರಳಲಿದೆ ಎಂದು ಸಂಸ್ಥೆಯ ಅಧಿ ಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ಬೆಳಗ್ಗೆ ಎಂದಿನಂತೆ ಖಾಸಗಿ ಸಾರಿಗೆ ಬಸ್‌ಗಳು ಸೇರಿದಂತೆ ಇತರ ಸಾರಿಗೆ ವಾಹನಗಳು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದವು.
ಬೆಂಗಳೂರು ನಗರದಿಂದ ಕೆಲ ಬಸ್‌ಗಳು ಚಿಕ್ಕಮಗಳೂರು ನಗರಕ್ಕೆ ಪ್ರಯಾಣಿಕರನ್ನು ಕರೆತಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಹಿಂದಿರುಗಲು ಸಜ್ಜಾಗಿದ್ದವು. ಆದರೆ ಚಿಕ್ಕಮಗಳೂರು ಡಿಪೋದ ಸುಮಾರು 10 ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ದಾಣಕ್ಕೆ ಆಗಮಿಸಿದವು. ಖಾಸಗಿ ಬಸ್‌ಗಳಲ್ಲಿ ಕುಳಿತಿದ್ದ ಪ್ರಯಾಣಿಕರು ಕೆಳಗಿಳಿದು ಕೆಎಸ್‌ಆರ್‌ಟಿಸಿ ಬಸ್ ಗಳನ್ನೇರಿ ಕುಳಿತರು. ಇದರಿಂದ ಸ್ಥಳದಲ್ಲಿದ್ದ ಖಾಸಗಿ ಸಾರಿಗೆ ಬಸ್‌ಗಳ ಚಾಲಕರು, ನಿರ್ವಾಹಕರು ಕೆಎಸ್ ಆರ್‌ಟಿಸಿ ಅ ಧಿಕಾರಿಗಳ ಬಳಿ ವಾಗ್ವಾದ ನಡೆಸಿದರು. ಕೆಎಸ್‌ಆರ್‌ಟಿಸಿ ಎಚ್.ಟಿ. ವೀರೇಶ್ ಡಿಸಿ ಬಳಿ ಮಾತುಕತೆಗೆ ಮುಂದಾದರು.
ಸರ್ಕಾರಿ ಸಾರಿಗೆ ಬಸ್‌ಗಳ ಮಾರ್ಗದಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳೂ ಸಂಚಾರ ನಡೆಸಬಹುದು. ಖಾಸಗಿಯವರಿಗಾಗಿ ಸರ್ಕಾರಿ ಸಾರಿಗೆ ಬಸ್‌ಗಳ ಸೇವೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಖಾಸಗಿ ಬಸ್ ಮಾಲೀಕರ ಸಂಘದವರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂದಿರುಗಿದರು. ನಂತರ ಸರ್ಕಾರಿ ಬಸ್‌ಗಳು ತಮ್ಮ ಮಾರ್ಗದಲ್ಲಿ ಸಾರಿಗೆ ಸೇವೆ ಆರಂಭಿಸಿದರೆ ಖಾಸಗಿ ಬಸ್‌ಗಳು ಎಂದಿನಂತೆ ಸಾರಿಗೆ ಸೇವೆ ಮುಂದುವರಿಸಿದರು. ಜಿಲ್ಲಾದ್ಯಂತ ಸುಮಾರು 126 ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಆರಂಭಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.