ಕೋವಿಡ್ ತಡೆಗೆ ಮುನ್ನೆಚ್ಚರಿಕೆ ಅಗತ್ಯ
Team Udayavani, Apr 18, 2021, 6:54 PM IST
ಹೊಸನಗರ: ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಗ್ರಾಪಂನಲ್ಲಿ ಟಾಸ್ಕ್ಫೋರ್ಸ್ ರಚಿಸುವಂತೆ ಶಾಸಕ ಹರತಾಳು ಹಾಲಪ್ಪ ಸಲಹೆ ನೀಡಿದರು. ತಾಪಂ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತೆ ಕುರಿತ ಗ್ರಾಪಂ ಅಧ್ಯಕ್ಷರು, ಪಿಡಿಒ ಹಾಗೂ ಅಧಿ ಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೋವಿಡ್ ಎರಡನೇ ಅಲೆಯ ರೂಪ ವಿಭಿನ್ನ ಆಗಿದ್ದು, ಸಾವಿನ ಸಂಖ್ಯೆ ಏರುತ್ತಿರುವುದು ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು. ಮಾಸ್ಕ್ ಧಾರಣೆ, ಅಂತರ ಕಾಪಾಡುವುದು ಸೇರಿದಂತೆ ಸಭೆ, ಧಾರ್ಮಿಕ ಸಮಾರಂಭಗಳಿಗೆ ಹೆಚ್ಚಿನ ಜನರ ನಿರ್ಬಂಧ ಕುರಿತಂತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದರು. ಕೊರೊನಾ ಕಾರಣದಿಂದಾಗಿ ಕುಡಿಯುವ ನೀರಿನ ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿದೆ. ಕೂಲಿ ಕಾರ್ಮಿಕರ ಸಂಖ್ಯೆ ಸಹ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪಿಡಿಒ ಗೈರಿಗೆ ಶಾಸಕರು ಗರಂ: ಕೋವಿಡ್ ಅಂತಹ ಮಹತ್ವದ ಸಭೆಗೆ ತಾಲೂಕಿನ 30 ಗ್ರಾಪಂನಿಂದ ಕೇವಲ 19 ಪಿಡಿಒ ಹಾಜರಾದ ಬಗ್ಗೆ ಶಾಸಕರು ಗರಂ ಆದ ಘಟನೆ ನಡೆಯಿತು. ಹಳ್ಳಿ-ಹಳ್ಳಿಗೆ ಕೋವಿಡ್ ಕುರಿತ ಮಹತ್ವದ ಮಾಹಿತಿ ನೀಡಬೇಕಾದ ಪಿಡಿಒಗಳು ಹಾಜರಾಗಿಲ್ಲ ಎಂಬುದು ಅತ್ಯಂತ ದುಖಃಕರ ಸಂಗತಿ.ಗೈರು ಹಾಜರಾದ ಪಿಡಿಒ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಆದೇಶ ನೀಡಿದರು.
ತಾಲೂಕು ವೈದ್ಯಾಧಿ ಕಾರಿ ಡಾ| ಸುರೇಶ ಮಾಹಿತಿ ನೀಡಿ, ತಾಲೂಕಿನಲ್ಲಿ 30 ಸಾವಿರ ಲಸಿಕೆ ಗುರಿ ಹೊಂದಿದ್ದು, ಈಗಾಗಲೇ 14 ಸಾವಿರ ಜನರಿಗೆ ಸಲಿಕೆ ಹಾಕಲಾಗಿದೆ. ಲಸಿಕೆ ಕೊರತೆ ಇಲ್ಲ ಎಂದರು. ತಾಪಂ ಅಧ್ಯಕ್ಷ ಆಲವಳ್ಳಿ ವೀರೇಶ್, ಜಿಪಂ ಸದಸ್ಯ ಸುರೇಶ ಸ್ವಾಮಿರಾವ್, ಇಒ ಸಿ.ಆರ್.ಪ್ರವೀಣ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.