ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ
Team Udayavani, Apr 18, 2021, 7:28 PM IST
ಚನ್ನೈ : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ಏಪ್ರಿಲ್ 20 ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹೇರಿ ಆದೇಶ ಹೊರಡಿಸಿದೆ.
ಭಾನುವಾರ ಸಂಜೆ ಸರ್ಕಾರ ಹೊರಡಿಸಿರುವ ನೂತನ ನಿಯಮಾವಳಿ ಪ್ರಕಾರ ಏಪ್ರಿಲ್ 20 ರಿಂದ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 4 ಗಂಟೆಯವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಾಗಲಿದೆ. ಈ ಅವಧಿಯಲ್ಲಿ ಕೇವಲ ಮೂಲಭೂತ ಸೌಲಭ್ಯಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದೆ.
ರಾತ್ರಿ ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಚಾರ ವ್ಯವಸ್ಥೆಯ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ ಹೊರ ರಾಜ್ಯಗಳ ವಾಹನ ಸಂಚಾರವನ್ನೂ ಬಂದ್ ಮಾಡಲಾಗಿದೆ.
ತುರ್ತು ಆರೋಗ್ಯ ಕೇಂದ್ರ, ರೈಲು ಹಾಗೂ ವಿಮಾನ ನಿಲ್ದಾಣಗಳಿಂದ ಟ್ಯಾಕ್ಸಿ ಹಾಗೂ ಆಟೋ ರಿಕ್ಷಾ ಸೇವೆಗೆ ಯಾವುದೇ ನಿರ್ಬಂಧ ಹೇರಿಲ್ಲ. ಹಾಲು ಹಾಗೂ ದಿನಪತ್ರಿಕೆಗಳ ವಿತರಣೆಗೆ ಅನುಮತಿ ನೀಡಲಾಗಿದೆ.
ಬಿಹಾರಿನಲ್ಲೂ ನೈಟ್ ಕರ್ಫ್ಯೂ :
ಇತ್ತ ಬಿಹಾರ್ ನಲ್ಲಿಯೂ ನೈಟ್ ಕರ್ಫ್ಯೂ ಹೇರಿ ಆದೇಶ ಹೊರಡಿಸಲಾಗಿದೆ. ಭಾನುವಾರ ನೂತನ ನಿಯಮಗಳನ್ನುಪ್ರಕಟಿಸಿರುವ ಮುಖ್ಯಮಂತ್ರಿ ನಿತಿಶ್ ಕುಮಾರ್, ಸದ್ಯ ಇರುವ ನೈಟ್ ಕರ್ಫ್ಯೂವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಾಗೂ ಮಾಲ್, ಪಾರ್ಕ್, ಚಿತ್ರಮಂದಿರಗಳು ಹಾಗೂ ಶಾಲಾ ಕಾಲೇಜುಗಳು ಮೇ 15 ರ ವರೆಗೆ ಬಾಗಿಲು ಮುಚ್ಚಲಿವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.