ದೆಹಲಿಯಲ್ಲಿ ಲಾಕ್ ಡೌನ್ ಘೋಷಣೆ : ಬಾರ್ ಗೆ ಮುಗಿಬಿದ್ದ ಮದ್ಯಪ್ರಿಯರು
Team Udayavani, Apr 19, 2021, 1:17 PM IST
ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾತ್ರಿ ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೆ ಮದ್ಯಪ್ರಿಯರು ಬಾರ್ ಗಳತ್ತ ದೌಡಾಯಿಸಿರುವ ದೃಶ್ಯಗಳು ಕಂಡು ಬಂದಿವೆ.
ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂಪೂರ್ಣ ಲಾಕ್ ಡೌನ್ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಆತಂಕಕ್ಕೊಳಗಾಗಿರುವ ಕುಡುಕರು ದೆಹಲಿಯ ಖಾನ್ ಮಾರ್ಕೇಟ್‍ನಲ್ಲಿರುವ ಲಿಕ್ಕರ್ ಶಾಪ್ ಎದುರು ಸಾಲುಗಟ್ಟಿ ನಿಂತು ಮದ್ಯ ಖರೀದಿಸಿದ್ದಾರೆ. ಈ ವೇಳೆ ಸಾಮಾಜಿಕ ಅಂತರವನ್ನು ಮರೆತಿದ್ದಾರೆ.
ಇನ್ನು ರಾಜ್ಯ ಸರ್ಕಾರ ಘೋಷಿಸಿರುವ ನೂತನ ನಿಯಮಾವಳಿಗಳ ಪ್ರಕಾರ , ಎಲ್ಲಾ ಖಾಸಗಿ ಕಚೇರಿ, ಕಂಪನಿಗಳು ವರ್ಕ್ ಫ್ರಂ ಹೋಮ್ ಹಾಗೂ ಸರ್ಕಾರಿ ಕಚೇರಿಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಲಭ್ಯವಿರಲಿದೆ. ಲಾಕ್ ಡೌನ್ ನಿಂದ ಕೋವಿಡ್ ತಡೆಯಲು ಸಾಧ್ಯವಿಲ್ಲ, ಆದರೆ ಸಣ್ಣ ಅವಧಿಯ ಲಾಕ್ ಡೌನ್ ನಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದಾಗಿದೆ ಎಂದು ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.
“ಇಡೀ ದೆಹಲಿ ಒಂದು ಕುಟುಂಬವಿದ್ದಂತೆ, ಈ ಸಂದರ್ಭವನ್ನು ನಾವೆಲ್ಲ ಒಟ್ಟಾಗಿ ಎದುರಿಸಬೇಕಾಗಿದೆ. ಈ ಮೊದಲು ನಾವು ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದೇವು. ಈಗ ಮತ್ತೊಮ್ಮೆ ನಾವು ಎದುರಿಸಿ ಗೆಲ್ಲಬೇಕಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಆಹಾರ, ವೈದ್ಯಕೀಯ ಸೇರಿದಂತೆ ತುರ್ತು ಸೇವೆಗಳು ಮುಂದುವರಿಯಲಿದೆ. ಕೇವಲ 50 ಮಂದಿ ಆಹ್ವಾನಿತರೊಂದಿಗೆ ವಿವಾಹ ಕಾರ್ಯಕ್ರಮ ನಡೆಸಬಹುದಾಗಿದೆ. ವಿವರವಾದ ಮಾರ್ಗಸೂಚಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.
Delhi: People gather in large numbers outside a liquor shop in Khan Market; social distancing norms flouted.
Lockdown to be imposed in the national capital from 10pm tonight to 6am next Monday (26th April). pic.twitter.com/Fq1iNGJo1d
— ANI (@ANI) April 19, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.