ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಪ್ರಶಂಸಾ ಪತ್ರ
Team Udayavani, Apr 19, 2021, 2:34 PM IST
ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ,ಬಿಎಂಟಿಸಿ ನೌಕರರ ಮುಷ್ಕರ 13ನೇದಿನಕ್ಕೆ ಕಾಲಿಟ್ಟಿದ್ದು, ಇದರ ನಡುವೆಯೂಸಾರಿಗೆ ಬಸ್ ಸಂಚಾರ ದಿನ ಕಳೆದಂತೆಹೆಚ್ಚುತ್ತಿದೆ. ಕರ್ತವ್ಯಕ್ಕೆ ಹಾಜರಾಗುವಸಿಬ್ಬಂದಿಯ ಸಂಖ್ಯೆ ಏರಿಕೆ ಕಾಣುತ್ತಿದೆ.ದೊಡ್ಡಬಳ್ಳಾಪುರ ವಿಭಾಗದಲ್ಲಿಭಾನುವಾರ 33ಕ್ಕೂ ಹೆಚ್ಚು ಬಸ್‌ಗಳುಸಾರ್ವಜನಿಕರಿಗೆ ಸೇವೆ ಒದಗಿಸಿವೆ.
ಭಾನುವಾರ ದೊಡ್ಡಬಳ್ಳಾಪುರದಿಂದಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ನೆಲಮಂಗಲ,ದಾಬಸ್ ಪೇಟೆ, ಗೌರಿಬಿದನೂರುವ್ಯಾಪ್ತಿಗೆ ಬಸ್‌ಗಳು ಸಂಚರಿಸಿದವು.ಆರನೇ ವೇತನ ಆಯೋಗಕ್ಕೆಪಟ್ಟುಹಿಡಿರುವ ಸಾರಿಗೆ ನೌಕರರ ಮುಷ್ಕರ12 ದಿನ ಪೂರೈಸಿದೆ. ಉಪ ವಿಭಾಗದ 358ನೌಕರರಲ್ಲಿ ಶೇ.35ಕ್ಕೂ ಹೆಚ್ಚು ಸಿಬ್ಬಂದಿಕರ್ತವ್ಯಕ್ಕೆ ಹಾಜರಾಗಿದ್ದರು.
ಸೋಮವಾರಇನ್ನಷ್ಟು ಸಿಬ್ಬಂದಿ ಕೆಲಸಕ್ಕೆ ಬರಲಿದ್ದು,ಸಾರಿಗೆ ಬಸ್ ಸಂಚಾರದಲ್ಲಿ ಸುಧಾರಣೆಕಾಣುವ ಸಾಧ್ಯತೆ ಇದೆ ಎಂದುಹೇಳಲಾಗುತ್ತಿದೆ.ಸ್ವಯಂ ಪ್ರೇರಿತರಾಗಿ ಕರ್ತವ್ಯಕ್ಕೆ ಹಾಜರಾದ ಚಾಲಕರು ಮತ್ತು ನಿರ್ವಾಹಕರಿಗೆಭಾನುವಾರ ಬೆಳಗ್ಗೆ ವ್ಯವಸ್ಥಾಪಕ ಆನಂದ್‌ಹಾಗೂ ಸಹಾಯಕ ಆಡಳಿತಾಧಿಕಾರಿಶಿವನಾರಾಯಣ್ ಪ್ರಶಂಸೆ ಪತ್ರ ಹಾಗೂಸಿಹಿ ನೀಡಿ ಆಹ್ವಾನಿಸಿದರು.ನಂತರ ಇವರನ್ನು ಹಲವುಮಾರ್ಗಗಳಿಗೆ ನಿಯೋಜಿಸಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳುನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರಿಂದಪ್ರಯಾಣಿಕರಲ್ಲಿ ಭರವಸೆ ಮೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.