ಮಾಜಿ ಶಾಸಕ ವಸಂತ ಅಸ್ನೋಟಿಕರ್ ಕೊಲೆ ಪ್ರಕರಣ: ಗುಂಡಿಟ್ಟಿದ್ದ ಮೊಹಿತೆಗೆ ಜೀವಾವಧಿ ಶಿಕ್ಷೆ
Team Udayavani, Apr 20, 2021, 7:37 PM IST
ಕಾರವಾರ : ಕಾರವಾರ ಜೊಯಿಡಾ ಕ್ಷೇತ್ರದ ಶಾಸಕರಾಗಿದ್ದ ವಸಂತ ಆಸ್ನೋಟಿಕರ್ ಅವರನ್ನು ಹತ್ಯೆ ಮಾಡಿದ್ದ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68,000/- ರೂ. ದಂಡ ವಿಧಿಸಿ ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮ್ಮ ಮಗಳ ಮದುವೆ ಆರತಕ್ಷತೆಯ ತಯಾರಿಯನ್ನು ನೋಡಿಕೊಂಡು ಮನೆಗೆ ಹೊರಡುವ ಸಲುವಾಗಿ ಕಲ್ಯಾಣ ಮಂಟಪದ ಎದುರಿನ ರಸ್ತೆಯ ಪಕ್ಕದಲ್ಲಿ ಇತರರೊಂದಿಗೆ ನಿಂತುಕೊಂಡಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವಸಂತ ಅನ್ನೋಟಿಕರ್ ಅವರ ಮೇಲೆ ಪಿಸ್ತೂಲಿನಿಂದ ಗುಂಡು ಹಾರಿಸಿದ್ದರು.
ಈ ವೇಳೆ ಹಿಂಬದಿಯ ಸವಾರನಾಗಿದ್ದ ರಾಜನ್ ಅಲಿಯಾಸ್ ಸಂಜಯ್ ಮೋಹಿತ್ ಹಾರಿಸಿದ್ದ ನಾಲ್ಕು ಗುಂಡುಗಳು ಶಾಸಕ ವಸಂತ ಅಸ್ನೋಟಿಕರ್ ಅವರ ದೇಹಕ್ಕೆ ಹೊಕ್ಕು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದರು.
ಆರೋಪಿ ಸಂಜಯ್ ಮೋಹಿತನೊಂದಿಗೆ ಭಾಗಿಯಾಗಿದ್ದ ಓಂ ಪ್ರಕಾಶ್ ಅಲಿಯಾಸ್ ಪಕ್ಕಾ ಹಾಗೂ ಅಂತೋನಿಯು ದೋಷಾರೋಪಣೆ ಪಟ್ಟಿ ಸಲ್ಲಿಸುವ ಪೂರ್ವದಲ್ಲಿ ಮುಂಬೈ ಪೊಲೀಸರಿಂದ ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದರು. ವಸಂತ ಅಸ್ನೋಟಿಕರ್ ಕೊಲೆಗೆ ಸಂಜಯ್ ಮೊಹಿತೆ ಜೊತೆ ಸಂಚು ನೆಡೆಸಿದ ಆರೋಪ ಹೊತ್ತಿದ್ದ ಈ ಪ್ರಕರಣದ ಮುಖ್ಯ ಆರೋಪಿ ದಿಲೀಪ್ ನಾಯ್ಕ, ಪ್ರಕರಣದ ವಿಚಾರಣೆಯ ಹಂತದಲ್ಲಿ ಮೃತಪಟ್ಟಿದ್ದಾನೆ. ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದ 2 ಮತ್ತು ಮೂರನೇ ಆರೋಪಿಯನ್ನು ನ್ಯಾಯಾಲಯ ಬಿಡುಗಡೆಗೊಳಿಸಿದೆ.
ವಸಂತ ಅಸ್ನೋಟಿಕರ್ ಈ ಕೊಲೆ ಪ್ರಕರಣ ಕಾರವಾರ ನಗರ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣ ಕಾರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಿಂದ ಶಿರಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಈ ಪ್ರಕರದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಾಂತವೀರ ಶಿವಪ್ಪ ಈ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳ ವಾದಿಸಿದ್ದರು. ಬೆಂಗಳೂರು ಸಿಒಡಿ ಡಿಎಸ್ ಪಿ ಬಿ.ಎಸ್.ಎಸ್ ರಾವ್ ಅವರು ಪ್ರಾಥಮಿಕ ಹಂತದಲ್ಲಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ಇನ್ನೋರ್ವ ಡಿ.ಎಸ್.ಪಿಗಳಾದ ರಫೀಕ ಮುಲ್ಲಾ ಹಾಗೂ ಲವಕುಮಾರ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು