ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಮರಳಿದ ಸಾರಿಗೆ ನೌಕರರು
Team Udayavani, Apr 21, 2021, 11:48 AM IST
ಹುಬ್ಬಳ್ಳಿ: ಮುಷ್ಕರ ಕೈಬಿಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಲ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಬಹುತೇಕ ಬಸ್ಸುಗಳು ರಸ್ತೆಗಿಳಿಯುತ್ತಿದ್ದು, 11.00 ಗಂಟೆ ವೇಳೆಗೆ ಸಂಚಾರ 2305 ಬಸ್ಸುಗಳ ಪೈಕಿ 1660 ಬಸ್ಸುಗಳು (ಶೇ.72.02) ರಷ್ಟು ಕಾರ್ಯಾಚರಣೆ ಗೊಳ್ಳುತ್ತಿವೆ.
ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಒತ್ತಾಯಿಸಿ ನಡೆಯುತ್ತಿರುವ ಮುಷ್ಕರ 15 ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಕರ್ತವ್ಯಕ್ಕೆ ಹಾಜಾಗುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಪರಿಣಾಮ ಬೆಳಿಗ್ಗೆ 11 ಗಂಟೆ ವೇಳೆಗೆ ಶೇ.72.02 ರಷ್ಟು ಬಸ್ಸುಗಳ ಕಾರ್ಯಾಚರಣೆಗೊಂಡಿವೆ. ಹೀಗಾಗಿ ಹಳೇ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಸಂಚಾರಕ್ಕೆ ಸ್ಥಳವಿಲ್ಲದಂತಾಗಿದೆ.
ಬೆಳಿಗ್ಗಿನಿಂದಲೂ ಘಟಕಕಗಳತ್ತ ಸಿಬ್ಬಂದಿ ಆಗಮಿಸುತ್ತಿದ್ದು, ಬಂದ ಸಿಬ್ಬಂದಿಗೆಲ್ಲಾ ಮಾರ್ಗ ನಿಯೋಜಿಸಿ ಕಳುಹಿಸಲಾಗುತ್ತಿದೆ. ವಾಯವ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯ ವಿಭಾಗಗಳಾದ ಹುಬ್ಬಳ್ಳಿ ಗ್ರಾ 165 (184) ಧಾರವಾಡ 99 (204) ಬೆಳಗಾವಿ 141 (325), ಚಿಕ್ಕೋಡಿ180 (298), ಬಾಗಲಕೋಟೆ 304 (304), ಗದಗ 251 (257), ಹಾವೇರಿ 192 (281) ಉತ್ತರ ಕನ್ನಡ 185 (237), ಹು-ಧಾ ನಗರ 143 (210) ಬಸ್ಸುಗಳು ಸಂಚಾರ ಮಾಡಿವೆ. ಸಮಯ ಕಳದೆಂತಲ್ಲಾ ಮತ್ತಷ್ಟು ಬಸ್ಸುಗಳ ಸಂಚಾರ ಹೆಚ್ಚಾಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವರ್ಗಾವಣೆ, ಅಮಾನತ್ತು ಹಾಗೂ ವಜಾಗೊಂಡಿರುವ ಸಿಬ್ಬಂದಿ ಸೇರಿದಂತೆ ಕೆಲ ಸಿಬ್ಬಂದಿ ಮಾತ್ರ ಇದೀಗ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದಂತಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಆಗಮಿಸುತ್ತಿದ್ದು, ಇದಕ್ಕೆ ಪೂರಕವಾಗಿ ಹೆಚ್ವಿನ ಸಂಖ್ಯೆ ಬಸ್ಸುಗಳ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.