2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ ತಾತ್ಕಾಲಿಕವಾಗಿ ಮುಂದೂಡಿಕೆ
Team Udayavani, Apr 21, 2021, 1:55 PM IST
ಬೆಂಗಳೂರು : ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗವು ಮುಂದೂಡಿಕೆ ಪ್ರಕಟಣೆ ಹೊರಡಿಸಿದೆ.
ಈ ಹಿಂದೆ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಏಪ್ರಿಲ್ 22 ರಿಂದ 30 ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿ ಲೋಕಸೇವಾ ಆಯೋಗವು ಪ್ರಕಟಣೆ ಹೊರಡಿಸಿದೆ.
ಈ ಹಿಂದೆ ಕೂಡ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿತ್ತು. ದಿನಾಂಕ 17-04-2021 ರಂದು ಕರ್ನಾಟಕ ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳು ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ಮತದಾನವನ್ನು ನಿಗದಿಪಡಿಸಿರುವುದರಿಂದ ಪರೀಕ್ಷೆ ಮುಂದೂಡಲಾಗಿತ್ತು. ದಿನಾಂಕ 16-04-2021 ಮತ್ತು 17-04-2021 ರಂದು ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.