ಪಾಲಿಕೆ ಅಖಾಡದಲ್ಲಿ 186 ಹುರಿಯಾಳುಗಳು


Team Udayavani, Apr 21, 2021, 6:18 PM IST

21-19

ಬಳ್ಳಾರಿ: ದಿನೇದಿನೆ ರಂಗೇರುತ್ತಿರುವ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 39 ವಾರ್ಡ್‌ಗಳಿಗೆ ಅಂತಿಮವಾಗಿ 65 ಪಕ್ಷೇತರರು ಸೇರಿ ಒಟ್ಟು 186 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. 19 ನಾಮಪತ್ರ ತಿರಸ್ಕೃತ, 39 ಜನರು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದು, ಬಹುತೇಕ ವಾರ್ಡ್‌ಗಳಲ್ಲಿ ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಫೈಟ್‌ ನಡೆಯಲಿದ್ದು, ಸ್ವತಂತ್ರ, ಬಂಡಾಯ ಅಭ್ಯರ್ಥಿಗಳಿರುವ ವಾಡ್‌ ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್‌ಗಳಿಗೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಎಎಪಿ, ಎನ್‌ಸಿಪಿ ಸೇರಿ ವಿವಿಧ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 244 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ವಿವಿಧ ಕಾರಣಗಳಿಂದ 19 ಜನರ ನಾಮಪತ್ರಗಳು ತಿರಸ್ಕೃತಗೊಂಡಿದ್ದವು. ಕಣದಲ್ಲಿ 225 ಜನರು ಉಳಿದಿದ್ದರಾದರೂ, ಕಾಂಗ್ರೆಸ್‌ -ಬಿಜೆಪಿ ಪಕ್ಷಗಳಿಂದ ಟಿಕೇಟ್‌ ಸಿಗದೇ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಹಲವರು ಸೇರಿ ಒಟ್ಟು 39 ಅಭ್ಯರ್ಥಿಗಳು ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ 186 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದೆ. ಚುನಾವಣೆಯಲ್ಲಿ 39 ವಾರ್ಡ್‌ಗಳಿಗೂ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 5 ವಾಡ್‌ ìಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಜನಹಿತ ಪಕ್ಷ 5, ಎನ್‌ಸಿಪಿ 9, ಕೆಜೆಪಿ 2, ಶಿವಸೇನೆ 2, ಕರ್ನಾಟಕ ರಾಷ್ಟ್ರ ಸಮಿತಿ 2, ಆಮ್‌ ಆದ್ಮಿ ಪಾರ್ಟಿ 6, ಸಮಾಜ ವಾದಿ ಪಕ್ಷ 4, ಕೆಆರ್‌ಎಸ್‌ 4, ಎಐಎಂಐಎಂ 4 ವಾರ್ಡ್‌ಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 39 ವಾಡ್‌ ìಗಳ ಪೈಕಿ ಬಹುತೇಕ ವಾರ್ಡ್‌ಗಳಲ್ಲಿ ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಕೆಲವೊಂದು ವಾರ್ಡ್‌ಗಳಲ್ಲಿ ಟಿಕೆಟ್‌ ವಂಚಿತ ಬಂಡಾಯ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳಿಗೆ ಮುಳುವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಹೆಚ್ಚಿದ ಬಂಡಾಯ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕಿಂತ ಕಾಂಗ್ರೆಸ್‌ ಪಕ್ಷದಲ್ಲೇ ಬಂಡಾಯದ ಬಿಸಿ ಹೆಚ್ಚಾಗಿ ಕೇಳಿಬರುತ್ತಿದೆ. 3ನೇ ವಾರ್ಡ್‌ನ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಎಂ.ಪ್ರಭಂಜನ್‌ ಕುಮಾರ್‌, ಅಲಿವೇಲು ಸುರೇಶ್‌, 9ನೇ ವಾರ್ಡ್‌ನ ಕಣೇಕಲ್‌ ಮಾಬುಸಾಬ್‌, 35ನೇ ವಾರ್ಡ್‌ನ ಮಿಂಚು ಶ್ರೀನಿವಾಸ್‌, 17ನೇ ವಾರ್ಡ್‌ನ ಹೊನ್ನಪ್ಪ, 21ನೇ ವಾಡ್‌ ನ ದಿವಾಕರಗೌಡ, 12ನೇ ವಾರ್ಡ್‌ನ ಜಿಲ್ಲೆ ಹನುಮಂತಪ್ಪ ಅವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಅದೇ ರೀತಿ ಕೆಲವೊಂದು ವಾರ್ಡ್‌ಗಳಲ್ಲೂ ಬಿಜೆಪಿಯಿಂದಲೂ ಬಂಡಾಯ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಈ ವಾರ್ಡ್‌ಗಳಲ್ಲಿ ತ್ರಿಕೋಣ ಸ್ಪರ್ಧೆಗಳು ಏರ್ಪಡುವ ಸಾಧ್ಯತೆಯಿದೆ.

3, 35ನೇ ವಾರ್ಡ್‌ಗಳಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳಿಗೆ ಪಕ್ಷೇತರ ಅಭ್ಯರ್ಥಿಗಳಾದ ಎಂ. ಪ್ರಭಂಜನ್‌ ಕುಮಾರ್‌, ಮಿಂಚು ಶ್ರೀನಿವಾಸ್‌ ಅವರು ಹೆಚ್ಚು ಪೈಪೋಟಿ ನೀಡುವ ಸಾಧ್ಯತೆಯಿದ್ದು, ಅದೃಷ್ಟ ಖುಲಾಯಿಸಿ ಅಲ್ಪ ಮತಗಳ ಅಂತರದಿಂದ ಗೆದ್ದರೂ ಅಚ್ಚರಿಪಡುವಂತಿಲ್ಲ. ಇನ್ನುಳಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಕಣಕ್ಕಿಳಿದಿರುವ ಅಭ್ಯರ್ಥಿಗಳು ತಾವು ಸಹ ಗೆಲ್ಲಲೇಬೇಕೆಂಬ ಹಂಬಲ ಮತ್ತು ತಮಗೆಷ್ಟು ಜನಬೆಂಬಲವಿದೆ. ಎಷ್ಟು ಮತಗಳು ಲಭಿಸಲಿವೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲದಿಂದ ಕಣದಲ್ಲಿ ಉಳಿದಿದ್ದಾರೆ. ಇವರ ಕುತೂಹಲವೆಷ್ಟು ಎಂಬುದನ್ನು ಮತದಾರರು ಫಲಿತಾಂಶದಲ್ಲಿ ತಿಳಿಸಲಿದ್ದಾರೆ.

ಈಗಾಗಲೇ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಅವರ ಮುಖಂಡರು ನಾಯಕರು ಕಳೆದ ಹಲವು ದಿನಗಳಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇದೀಗ ಪಕ್ಷೇತರ ಅಭ್ಯರ್ಥಿಗಳಿಗೆ ಸೋಮವಾರ ಸಂಜೆ ಚಿಹ್ನೆಗಳನ್ನು ನೀಡಿದ್ದು, ಅವರೆಲ್ಲರೂ ಕೂಡಲೇ ತಮ್ಮ ಚಿಹ್ನೆಯುಳ್ಳ ಕರಪತ್ರಗಳನ್ನು ಮುದ್ರಿಸಿ ಇಂದಿನಿಂದಲೇ ಮನೆಮನೆಗೆ ತೆರಳಿ ಪ್ರಚಾರ ಕೈಗೊಳ್ಳುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಿದೆ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.