ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್‌ ಅ ಧಿಕಾರಕ್ಕೆ : ಕೊಂಡಯ್ಯ


Team Udayavani, Apr 21, 2021, 6:22 PM IST

21-20

ಬಳ್ಳಾರಿ: ಇಲ್ಲಿನ ಬಳ್ಳಾರಿ ಮಹಾನಗರ ಪಾಲಿಕೆಗೆ ಇದೇ ಏ.27 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್‌ ಮತ್ತೂಮ್ಮೆ ಅಧಿ ಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್‌ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ, ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಬಹುತೇಕ ಯುವಕರು, ವಿದ್ಯಾವಂತರಿಗೆ ಟಿಕೆಟ್‌ ನೀಡಲಾಗಿದ್ದು, ಎಲ್ಲರೂ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಸ್ಪ ರ್ಧಿಸಿರುವ 39 ಅಭ್ಯರ್ಥಿಗಳಲ್ಲಿ 17 ಜನ ಪದವೀಧರರು, ಮೂವರು ಪಿಯುಸಿ, 7 ಜನ ಎಸ್‌ಎಸ್‌ ಎಲ್‌ಸಿ, 12 ಜನರು ಪ್ರೌಢಶಾಲೆ ವ್ಯಾಸಂಗ ಮಾಡಿದವರಾಗಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಜಿಲ್ಲಾ ಖನಿಜ ನಿ ಧಿಯಿಂದ ನಗರದಲ್ಲಿ 120 ರಸ್ತೆಗಳನ್ನು ಡಾಂಬರೀಕರಣ ಮಾಡಲಾಗಿದೆ. ನಗರಕ್ಕೆ ಅಗತ್ಯ ಕುಡಿವ ನೀರಿನ ಸಂಗ್ರಹವಿದೆ. ಆದರೆ, ಸಮರ್ಪಕ ವಿತರಣೆಯಿಲ್ಲ. 24/7 ಯೋಜನೆ ಮಾಡುವ ಪ್ರಯತ್ನ ಇದೆ. ಸ್ವತ್ಛತೆಗೆ ಆದ್ಯತೆ ನೀಡಲಾಗುವುದು. ಬಳ್ಳಾರಿ ಬೆಟ್ಟದ ಮೇಲೆ ತಿಮ್ಮಪ್ಪನ ದೇವಸ್ಥಾನ ನಿರ್ಮಿಸಿ ಪ್ರವಾಸಿ ತಾಣವಾಗಿ ಮಾಡಲು ಕೇಬಲ್‌ ಕಾರ್‌ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ವಿದ್ಯುತ್‌ ಚಿತಾಗಾರ ನಿರ್ಮಿಸಲಾಗುವುದು ಎಂದು ಹೇಳಿದರು.

ಟಿಕೆಟ್‌ ಮಾರಾಟ ಆರೋಪ: ಪಾಲಿಕೆಯ 5ನೇ ವಾರ್ಡ್‌ ಟಿಕೆಟ್‌ನ್ನು ಮಾರಾಟ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅಲ್ಲಂ ವೀರಭದ್ರಪ್ಪ, 5ನೇ ವಾರ್ಡ್‌ನ ಅಭ್ಯರ್ಥಿ ಬಡವನಾಗಿದ್ದಾನೆ. ಅವನ ಗೆಲುವಿಗೆ ಸ್ಥಳೀಯ ನಿವಾಸಿಗಳೇ ಹಣ ಖರ್ಚು ಮಾಡುವುದಾಗಿ ಮುಂದೆ ಬಂದಿದ್ದ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಅಷ್ಟೇ ಹೊರತು, ಇದರಲ್ಲಿ ಯಾವುದೇ ಹಣ ಪಡೆದಿಲ್ಲ. ಪಟ್ಟಿಯಲ್ಲಿ ಡಿ.ನಾರಾಯಣಪ್ಪರ ಹೆಸರಿದ್ದರೆ ಅದನ್ನು ಕೆಪಿಸಿಸಿಯವರನ್ನು ಕೇಳಬೇಕು ಎಂದು ಸ್ಪಷ್ಟಪಡಿಸಿದರು. ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಮಾತನಾಡಿ, ಕೋವಿಡ್‌ ಸೋಂಕಿನ ಕ್ಲಿಷ್ಟ ಪರಿಸ್ಥಿತಿಯಲ್ಲಿ ಚುನಾವಣೆ ಬಂದಿದೆ. ಅಬ್ಬರಕ್ಕಿಂತ ಬದ್ಧತೆ ಮತ್ತು ವಿಚಾರಧಾರೆ ಮೇಲೆ ಚುನಾವಣೆ ನಡೆಯಬೇಕಿದೆ. 5 ಜನರಿಗಿಂತ ಹೆಚ್ಚು ಸೇರಿ ಪ್ರಚಾರ ಮಾಡಬಾರದು. ಮೆರವಣಿಗೆ ಮಾಡಬಾರದು. ಸಾರ್ವಜನಿಕ ಸಭೆ ನಡೆಸಬಾರದು ಎಂದು ಆಯೋಗ ಹೇಳಿದೆ. ಇದರಿಂದ ಜೀವನ ಮುಖ್ಯ. ಪಕ್ಷದ ಎಲ್ಲ ಕಾರ್ಯಕರ್ತರು ಮಾಸ್ಕ್ ಧರಿಸಿ ಮನೆ ಮನೆ ಪ್ರಚಾರಕ್ಕೆ ಒತ್ತು ನೀಡಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಕಾಂಗ್ರೆಸ್‌ ಮತ್ತೆ ಅಧಿ  ಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡ ನಿರಂಜನ್‌ ನಾಯ್ಡು, ಮಾಜಿ ಶಾಸಕ ಅನಿಲ್‌ ಲಾಡ್‌, ಜಿಲ್ಲಾಧ್ಯಕ್ಷ ಮಹ್ಮದ್‌ ಜಿ.ಎಸ್‌.ರಫಿಕ್‌, ಪಾಲಿಕೆ ಚುನಾವಣಾ ಸಂಯೋಜಕ ಜೆ.ಎಸ್‌. ಆಂಜನೇಯಲು, ವಿಲ್ಸನ್‌ ಸೇರಿ ಹಲವರು ಇದ್ದರು. ಜನಪ್ರತಿನಿಧಿ ಗಳಿಲ್ಲ ಅವಕಾಶ: ಕೇಂದ್ರ ಸರ್ಕಾರ ಮೈನ್ಸ್‌ ಆ್ಯಂಡ್‌ ಮಿನರಲ್ಸ್‌ ಅಮೆಂಡ0ಟ್‌ ಬಿಲ್‌ ಗೆ ತಿದ್ದುಪಡಿ ತಂದಿದ್ದು, ಅದರಲ್ಲಿ ಸ್ಥಳೀಯ ಜನಪ್ರತಿನಿ ಧಿಗಳಿಗೆ ಅವಕಾಶವಿಲ್ಲ. ಡಿಎಂಎಫ್‌ ಅನುದಾನವನ್ನು ಕೇಂದ್ರ ಸರ್ಕಾರವೇ ನಿಭಾಯಿಸಲಿದೆ. ಜನಪ್ರತಿನಿಧಿ ಗಳನ್ನು ಹೊರಗಿಟ್ಟು, ಬಳ್ಳಾರಿಯಲ್ಲಿನ ಸಮಸ್ಯೆಗಳ ಬಗ್ಗೆ ದೆಹಲಿಯಿಂದ ಹೇಗೆ ಪರಿಹರಿಸಲಾಗುತ್ತದೆ. ಈ ಕುರಿತು ವಿರೋಧ ವ್ಯಕ್ತಪಡಿಸಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.