ಶೇ.50ರಷ್ಟು ಬೆಡ್ ನೀಡಲು ಒಪ್ಪದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ತುರ್ತು ನೋಟಿಸ್
Team Udayavani, Apr 21, 2021, 7:23 PM IST
ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದ ಅಡಿ ಚಿಕಿತ್ಸೆ ನೀಡಲು, ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಲು ನಿರಾಕರಿಸಿದ 66 ಆಸ್ಪತ್ರೆಗಳಿಗೆ ಕಾರಣ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದ ಅಡಿ ಬಿಟ್ಟುಕೊಡುವಂತೆ ಈಗಾಗಲೇ ಒಮ್ಮೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಹಾಸಿಗೆ ಬಿಟ್ಟುಕೊಡಲು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ತುರ್ತು ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ಗೆ ಪ್ರತಿಕ್ರಿಯಿಸದೆ ಇದ್ದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ :ಸಾರಿಗೆ ನೌಕರರ ಪ್ರತಿಭಟನೆ: 30 ಮಂದಿ ಪ್ರೊಬೇಷನರಿ ಸಿಬ್ಬಂದಿ ವಜಾ
ಈ ಸಂಬಂಧ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ಗುಪ್ತ ಅವರು, ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡುತ್ತಿರುವುದು ಅವರಿಗೆ ಸಮಸ್ಯೆ ನೀಡಲು ಅಲ್ಲ. ಸಕಾಲದಲ್ಲಿ ಅವರು ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಟ್ಟರೆ ಸೋಂಕಿತರ ಪರದಾಟವನ್ನು ತಪ್ಪಿಸಬಹುದಾಗಿದೆ. ಕೆಲವು ಖಾಸಗಿ ಆಸ್ಪತ್ರೆಗಳು ಗಂಭೀರ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ಹಂತ – ಹಂತವಾಗಿ ಹಾಸಿಗೆಗಳನ್ನು ಬಿಟ್ಟುಕೊಡುವುದಾಗಿ ಹೇಳಿದ್ದವು. ಇದರಂತೆ ಹಾಸಿಗೆಗಳನ್ನು ಕೆಲವರು ಹಾಸಿಗೆ ಬಿಟ್ಟುಕೊಡುತ್ತಿದ್ದಾರೆ. ಆದರೆ, ಇನ್ನೂ ಕೆಲವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ, ಇದೀಗ ತುರ್ತು ನೋಟಿಸ್ ಜಾರಿ ಮಾಡಲಾಗಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡದೆ ಇದ್ದರೆ ಮತ್ತು ಸಕಾಲದಲ್ಲಿ ಶೇ.50ರಷ್ಟು ಹಾಸಿಗೆ ಬಿಟ್ಟುಕೊಡದೆ ಇದ್ದರೆ, ಮುಲಾಜಿಲ್ಲದೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.