ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ಧಿ : ತಾಂಬೋಳಿ
Team Udayavani, Apr 21, 2021, 7:54 PM IST
ಸಿಂದಗಿ: ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಮುಂಬರುವ ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಖಚಿತ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಮೈಬೂಬ್ ಸಾಬ್ ತಾಂಬೋಳಿ ಹೇಳಿದರು.
ಯಂಕಂಚಿ ಗ್ರಾಮದ ಜಟ್ಟಿಂಗರಾಯ ದೇವಸ್ಥಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಸಿಂದಗಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಮುಂಬರುವ ಉಪ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಿದಲ್ಲಿ ಗೆಲುವು ಖಂಡಿತ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಪ್ರತಿ ಹಳ್ಳಿ ಹಳ್ಳಿಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಮಾಡುತ್ತೇನೆ ಎಂದರು.
ರಮೇಶ ಐಹೊಳೆ, ಸಿದ್ದು ಮೇಲಿನಮನಿ, ಮಲಕಪ್ಪ ಮಾದರ, ಭೀಮಣ್ಣ ದೊಡ್ಡಮನಿ, ರಮೇಶ ಯsಕಂಚಿಕರ, ಜಟ್ಟಪ್ಪ ದೊಡ್ಡಮನಿ ಮಾತನಾಡಿ, ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾಧಾನ್ಯತೆ ನೀಡಿ ತಾಂಬೋಳಿ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದಲ್ಲಿ ಅವರ ಗೆಲುವು ಖಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.