10ನೇ ತರಗತಿ ಎಕ್ಸಾಂ ಕ್ಯಾನ್ಸಲ್ ಮಾಡಿ: ವಿದ್ಯಾರ್ಥಿಗಳ ಪರ ಪ್ರಿಯಾಮಣಿ ಬ್ಯಾಟಿಂಗ್
Team Udayavani, Apr 22, 2021, 10:58 AM IST
ಕೋವಿಡ್ ಎರಡನೇ ಆತಂಕದಿಂದ ಈ ವರ್ಷವೂ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಏರುಪೇರಾಗುತ್ತಿದೆ. ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದರಿಂದ, ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್‌ಸಿ ಹಾಗೂ ಐಸಿಎಸ್‌ಸಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇನ್ನು ಕರ್ನಾಟಕ ರಾಜ್ಯ ಸರ್ಕಾರ ಕೂಡ ಒಂದರಿಂದ ಒಂಬತ್ತನೇ ತರಗತಿಯವರೆಗೆ ಎಲ್ಲ ಪರೀಕ್ಷೆಗಳನ್ನು ರದ್ದು ಮಾಡಿದೆ.
ಆದರೆ 10ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಇನ್ನೂ ರಾಜ್ಯ ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಕರ್ನಾಟಕ ಮಾತ್ರವಲ್ಲದೆ, ಪಕ್ಕದ ಆಂಧ್ರ ಸರ್ಕಾರ ಕೂಡ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ 10ನೇ ತರಗತಿ ಪರೀಕ್ಷೆ ನಡೆಯುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮುಂದುವರೆದಿರುವಂತೆಯೇ, ನಟಿ ಪ್ರಿಯಾಮಣಿ ಕರ್ನಾಟಕ ಹಾಗೂ ಆಂಧ್ರ ಪ್ರದೇಶದ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ರಚಿತಾ ರಾಮ್ ಈಗ ‘ಶಬರಿ’: ರಗಡ್ ಲುಕ್‌ನಲ್ಲಿ ಡಿಂಪಲ್ ಕ್ವೀನ್
ಈ ಬಗ್ಗೆ ತಮ್ಮ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಬರೆದು ಕೊಂಡಿರುವ ಪ್ರಿಯಾಮಣಿ, “ವಿದ್ಯಾರ್ಥಿಗಳೇ ನಮ್ಮ ಭವಿಷ್ಯ. ವಿದ್ಯಾರ್ಥಿಗಳ ಜೀವ ಎಲ್ಲದಕ್ಕಿಂತ ಮುಖ್ಯವೆ ಹೊರತು ಪರೀಕ್ಷೆ ಅಲ್ಲ. ಪರೀಕ್ಷೆಗಳನ್ನು ತಡ ಮಾಡಬಹುದು. ಆದರೆ, ವಿದ್ಯಾರ್ಥಿಗಳ ಜೀವ ಉಳಿಸುವುದು ತಡ ಮಾಡಲಾಗದು. ಕೊರೊನಾ ಎರಡನೇ ಅಲೆ ದೇಶದ ಎಲ್ಲ ಕಡೆ ಎದ್ದಿರುವ ಈ ಸಮಯದಲ್ಲಿ ದಯವಿಟ್ಟು ಪರೀಕ್ಷೆಗಳನ್ನು ರದ್ದು ಮಾಡಿ. ವಿದ್ಯಾರ್ಥಿಗಳು ಸುರಕ್ಷಿತವಾಗಿರಲಿ’ ಎಂದಿದ್ದಾರೆ.
ಇನ್ನು ವಿದ್ಯಾರ್ಥಿಗಳ ಪರವಾಗಿ ಧ್ವನಿಯೆತ್ತಿರುವ ಪ್ರಿಯಾಮಣಿಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ವಿದ್ಯಾರ್ಥಿಗಳು, ಪೋಷಕರು ಪ್ರಿಯಾಮಣಿ ಮಾತಿಗೆ ಸೈ ಎನ್ನುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.