ಕೋವಿಡ್ ನಿಯಂತ್ರಣ: ಸರಕಾರಕ್ಕೆ ಸೂಚನೆ
Team Udayavani, Apr 23, 2021, 7:01 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರಕಾರಕ್ಕೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿರುವ ಹೈಕೋರ್ಟ್, ರೆಮಿಡಿಸಿವಿರ್ ಮತ್ತು ಆಕ್ಸಿಜನ್‌ಗಾಗಿ ಕೋವಿಡ್ ಸೋಂಕಿತರು ಅಲೆಯುವುದನ್ನು ತಪ್ಪಿಸಲು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.
ಔಷಧ ಕಾಳಸಂತೆಯಲ್ಲಿ ಮಾರಾಟವಾಗು ವುದನ್ನು ತಡೆಯಬೇಕು, ಸಾವನ್ನಪ್ಪಿದ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಸೂಚನೆ ನೀಡಿದೆ.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾ| ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಸರಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿತು.
ಆಕ್ಸಿಜನ್ ಲಭ್ಯತೆ ವಿವರಣೆ ಕೊಡಿ :
ಸರಕಾರ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ಪರಿಶೀಲಿಸಿದ ನ್ಯಾಯಪೀಠ ರಾಜ್ಯದಲ್ಲಿ ಆಕ್ಸಿಜನ್ ಲಭ್ಯತೆ ಬಗ್ಗೆ ಸ್ಪಷ್ಟತೆ ಇಲ್ಲ, ಎಷ್ಟು ಉತ್ಪಾದನೆಯಾಗುತ್ತಿದೆ, ಎಷ್ಟು ಬೇಡಿಕೆ ಇದೆ ಹಾಗೂ ಎಷ್ಟು ಪೂರೈಕೆಯಾಗುತ್ತಿದೆ ಎಂಬ ಕುರಿತು ಮುಂದಿನ ವಿಚಾ ರಣೆ ವೇಳೆ ಸ್ಪಷ್ಟವಾಗಿ ವಿವರ ನೀಡಬೇಕು ಎಂದು ಸೂಚಿಸಿತು.
ಶುಕ್ರವಾರವೂ ವಿಚಾರಣೆ :
ಕೋವಿಡ್ ಪರಿಸ್ಥಿತಿಯ ತೀವ್ರತೆಯನ್ನು ಅರಿತಿರುವ ಹೈ ಕೋರ್ಟ್, ಶುಕ್ರವಾರವೂ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಲ್ಲದೆ, ಅಗತ್ಯ ಬಿದ್ದರೆ ಸೋಮವಾರವೂ ವಿಶೇಷ ಕಲಾಪ ನಡೆಸಿ ಸರಕಾರಕ್ಕೆ ನಿರ್ದೇಶನ ನೀಡಲಾಗುವುದು ಎಂದಿತು.
ಸಮಿತಿ ರಚನೆ ಅಗತ್ಯವಿಲ್ಲ: ಸರಕಾರ :
ಕೋವಿಡ್ ನಿಯಂತ್ರಣಕ್ಕೆ ನಾನಾ ವಲಯಗಳ ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಹೈಕೋರ್ಟ್ ಕಳೆದ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದ ಕುರಿತು ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಈ ಹಂತದಲ್ಲಿ ಸಮಿತಿ ರಚನೆ ಅಗತ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಸಮರ್ಪಕ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಜತೆಗೆ ಸಚಿವರ ಸಮಿತಿಗಳು ದಿನದ 24 ಗಂಟೆಗಳೂ ಕಾರ್ಯನಿರ್ವಹಿಸುತ್ತಿವೆ. ಸರಕಾರದ ಶೇ.50ರಷ್ಟು ಸಿಬಂದಿಯನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಪ್ರಮುಖ ನಿರ್ದೇಶನಗಳು :
- ಸೋಂಕಿತರು ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಪರದಾಡುವುದನ್ನು ತಪ್ಪಿಸಬೇಕು. ಸೂಕ್ತ ಮಾಹಿತಿ ನೀಡಲು ಎಲ್ಲ ಆಸ್ಪತ್ರೆಗಳ ಮುಂಭಾಗದಲ್ಲಿ ಹೆಲ್ಪ್ ಡೆಸ್ಕ್ ತೆರೆಯಬೇಕು.
- 24 ಗಂಟೆಗಳಲ್ಲೇ ಆರ್ ಟಿಪಿಸಿಆರ್ ವರದಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು.
- ಸೋಂಕು ಪರೀಕ್ಷಾ ಕೇಂದ್ರಗಳ ಮುಂದೆ ದಟ್ಟಣೆಯನ್ನು ತಗ್ಗಿಸಬೇಕು, ವೃದ್ಧರು ಮತ್ತು ಗರ್ಭಿಣಿಯರಿಗೆ ಪ್ರತ್ಯೇಕ ಸರತಿ ಸಾಲು ರಚಿಸಬೇಕು.
- ಕೊರೊನಾ ಲಕ್ಷಣಗಳಿಲ್ಲದ ಗರ್ಭಿಣಿಯರಿಗೆ ಆಸ್ಪತ್ರೆಗಳಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು.
- ರೆಮಿಡಿಸಿವಿರ್ ಔಷಧ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಪ್ಪಿಸಬೇಕು ಹಾಗೂ ಅವುಗಳ ವ್ಯವಹಾರದಲ್ಲಿ ಪಾರದರ್ಶಕತೆ ಪ್ರದರ್ಶಿಸಬೇಕು.
- ಆಕ್ಸಿಜನ್ ಲಭ್ಯತೆ ಖಾತ್ರಿಗೆ ಕ್ರಮ ಕೈಗೊಳ್ಳಬೇಕು.
- ಚಿತಾಗಾರಗಳ ಮೇಲಿನ ಒತ್ತಡವನ್ನು ತಗ್ಗಿಸಬೇಕು. ಮೃತ ಸೋಂಕಿತರ ಅಂತ್ಯಕ್ರಿಯೆ ಗೌರವಯುತವಾಗಿ ನಡೆಯುವಂತೆ ಮಾಡಬೇಕು.
- ಮುಂದಿನ ದಿನಗಳಲ್ಲಿ ಸೋಂಕು ಇನ್ನೂ ತೀವ್ರವಾಗಿ ಹರಡಲಿದೆ ಎಂದು ತಜ್ಞರ ಸಮಿತಿ ಅಂದಾಜಿಸಿರುವುದರಿಂದ ಸರಕಾರ ಅಗತ್ಯ ಸಿದ್ಧತೆ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.