Covid ಮರಣ ಮೃದಂಗ:24ಗಂಟೆಯಲ್ಲಿ 3.32 ಲಕ್ಷ ಪ್ರಕರಣ ಪತ್ತೆ,ಒಟ್ಟು ಸಾವಿನ ಸಂಖ್ಯೆ 1.87 ಲಕ್ಷ
ಕೋವಿಡ್ ಎರಡನೇ ಅಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616ಕ್ಕೆ ಏರಿಕೆಯಾಗಿದೆ.
Team Udayavani, Apr 23, 2021, 11:48 AM IST
ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಅಟ್ಟಹಾಸ ಮುಂದುವರಿದಿದ್ದು, ಕಳೆದ 24ಗಂಟೆಯಲ್ಲಿ ದಾಖಲೆಯ 3,32,730 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ(ಏ.23) ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,62,63, 695ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 24ಗಂಟೆಯಲ್ಲಿ 2,263 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,86,920ಕ್ಕೆ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ನಿಂದ ಕಳೆದ 24ಗಂಟೆಯಲ್ಲಿ 568 ಮಂದಿ ಹಾಗೂ ದೆಹಲಿಯಲ್ಲಿ 306 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಕೋವಿಡ್ ಎರಡನೇ ಅಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616ಕ್ಕೆ ಏರಿಕೆಯಾಗಿದೆ. ಒಟ್ಟು ಈವರೆಗೆ 1,36, 48, 159 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
India reports 3,32,730 new #COVID19 cases, 2,263 deaths and 1,93,279 discharges in the last 24 hours, as per Union Health Ministry
Total cases: 1,62,63,695
Total recoveries: 1,36,48,159
Death toll: 1,86,920
Active cases: 24,28,616Total vaccination: 13,54,78,420 pic.twitter.com/LKQMB5pUOE
— ANI (@ANI) April 23, 2021
ಕಳೆದ 17 ದಿನಗಳಲ್ಲಿ ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಮೂರು ಪಟ್ಟು ಹೆಚ್ಚಳವಾಗಿದೆ. ರಾಯಿಟರ್ಸ್ ವರದಿ ಪ್ರಕಾರ, ಕಳೆದ ಕೆಲವು ದಿನಗಳಿಂದ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. ಜಗತ್ತಿನಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾಗಿರುವ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.