ಲಸಿಕೆ ತಯಾರಿಕೆಗೆ ಬೇಕಾದ ಕಚ್ಚಾವಸ್ತುಗಳ ರಫ್ತಿಗೆ ತಡೆ : ಅಮೆರಿಕ ಸಮರ್ಥನೆ
Team Udayavani, Apr 23, 2021, 9:30 PM IST
ವಾಷಿಂಗ್ಟನ್: ಕೊರೊನಾ ಲಸಿಕೆ ತಯಾರಿಕೆಗೆ ಬೇಕಾಗುವ ಕಚ್ಚಾವಸ್ತುಗಳನ್ನು ಅಮೆರಿಕದಿಂದ ಇತರ ದೇಶಗಳಿಗೆ ರಫ್ತು ಮಾಡದಂತೆ ತಡೆಯೊಡ್ಡಿರುವ ತನ್ನ ನಿರ್ಧಾರವನ್ನು ಅಮೆರಿಕ ಸರ್ಕಾರ ಸಮರ್ಥಿಸಿಕೊಂಡಿದೆ.
ಕೊರೊನಾ ಲಸಿಕೆ ವಿಚಾರದಲ್ಲಿ ಅಮೆರಿಕದವರಿಗೆ ಮೊದಲ ಆದ್ಯತೆ ನೀಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ಅಲ್ಲಿನ ಗೃಹ ಸಚಿವಾಲಯದ ವಕ್ತಾರ ನೆಡ್ ಪ್ರೈಸ್ ತಿಳಿಸಿದ್ದಾರೆ.
ಅಮೆರಿಕದ ಈ ನಿರ್ಧಾರದಿಂದಾಗಿ ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಕೊಂಚ ಹಿನ್ನಡೆಯಾಗಿದೆ. ಹಾಗಾಗಿ, ಅಮೆರಿಕ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಭಾರತ, ಬೈಡನ್ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ :ಅಕ್ರಮವಾಗಿ ರೆಮ್ ಡಿಸಿವಿಯರ್ ಇಂಜೆಕ್ಷನ್ ಮಾರಾಟ : ಸ್ಟಾಫ್ ನರ್ಸ್ ಸೇರಿ ಮೂವರ ಬಂಧನ
“ಈ ಮನವಿಯನ್ನು ಪುರಸ್ಕರಿಸಲಾಗುತ್ತದೆಯೇ’ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರೈಸ್, “”ಅಮೆರಿಕದ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ಮುಗಿಸಿದ ನಂತರವಷ್ಟೇ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Electon; ಕಮಲಾ ಹ್ಯಾರಿಸ್‌ಗೆ ಶೇ.61ಭಾರತೀಯರ ಮತ: ಸಮೀಕ್ಷೆ
Japan Elections: ಆಡಳಿತ ಪಕ್ಷಕ್ಕೆ 15 ವರ್ಷ ಬಳಿಕ ಸೋಲು
US: ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಅಧ್ಯಕ್ಷ ಬೈಡನ್!
America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post
Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.