ನಗರದಲ್ಲಿ ಆಕ್ಸಿಜನ್‌, ಸಿಲಿಂಡರ್‌ಗಳ ಕೊರತೆ


Team Udayavani, Apr 24, 2021, 11:19 AM IST

ನಗರದಲ್ಲಿ ಆಕ್ಸಿಜನ್‌, ಸಿಲಿಂಡರ್‌ಗಳ ಕೊರತೆ

ಬೆಂಗಳೂರು: ನಗರದಲ್ಲಿ ಆಕ್ಸಿಜನ್‌ ಸಮಸ್ಯೆ ಜತೆಗೆ ಸಿಲಿಂಡರ್‌ಗಳ ಕೊರತೆಯೂ ಸೃಷ್ಟಿಯಾಗಿದ್ದು, ಸೋಂಕಿನ ತೀವ್ರತೆ ಹೆಚ್ಚಿರುವವರಿಗೆ ಅಕ್ಷರಶಃ ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ 10 ಸಾವಿರ ಜನರಿಗೆ ಸೋಂಕು ದೃಢಪಟ್ಟರೂ, ಇವರಲ್ಲಿ 1,500 ಜನರಿಗೆ ಹಾಸಿಗೆ ಅವಶ್ಯವಿದೆ. ನಗರದಲ್ಲಿ ಈಗಾಗಲೇ 10 ಸಾವಿರಕ್ಕಿಂತ ಹೆಚ್ಚು ಜನರಿಗೆ ನಿತ್ಯ ಕೋವಿಡ್ ದೃಢಪಡುತ್ತಿದೆ. ಅಂದಾಜು 250ಕ್ಕೂ ಹೆಚ್ಚು ಜನ ಐಸಿಯು (ತುರ್ತು ಚಿಕಿತ್ಸಾ ಘಟಕದಲ್ಲಿ) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಐಸಿಯು ಸೇರ್ಪಡೆ ಆಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ವೇಳೆ ಆಕ್ಸಿಜನ್‌ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವುದು ಆತಂಕ ಮೂಡಿಸಿದೆ ಎನ್ನುತ್ತಾರೆ ವೈದ್ಯರು.

ಪರಿಸ್ಥಿತಿ ಕೈಮೀರಿದೆ: ಸರ್ಕಾರ ಕೋವಿಡ್ ಸೋಂಕಿತರ ತುರ್ತು ಚಿಕಿತ್ಸೆಗೆ ಅವಶ್ಯವಿರುವ ಅರ್ಧದಷ್ಟು ಆಕ್ಸಿಜನ್‌ ಅನ್ನೂ ಪೂರೈಸುತ್ತಿಲ್ಲ. ನಿತ್ಯ ಅಂದಾಜು 300 ಟನ್‌ ಆಕ್ಸಿಜನ್‌ನ ಅವಶ್ಯಕತೆ ಇದೆ. ಆದರೆ, ಸರ್ಕಾರ ನಮಗೆ ಕೇವಲ 150 ಟನ್‌ ಆಕ್ಸಿಜನ್‌ ಮಾತ್ರ ಪೂರೈಕೆ ಮಾಡುತ್ತಿದೆ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್‌ ಹೋಮ್‌ ಅಸೋಸಿಯೇಷನ್‌ (ಫಾನಾ) ಅಧ್ಯಕ್ಷ ಡಾ. ಎಚ್‌.ಎಂ ಪ್ರಸನ್ನ ತಿಳಿಸಿದರು.

ಈ ಸಂಬಂಧ ಪ್ರತಿಕ್ರಿಯಿಸಿ, ಸರ್ಕಾರ ಇಂತಹ ಕಠಿಣ ಸಂದರ್ಭದಲ್ಲಿ ಕೈಚೆಲ್ಲಿದೆ. ನಿತ್ಯ 4 ಲಿಕ್ವಿಡ್‌ ಸಿಲೆಂಡರ್‌ನ ಅವಶ್ಯಕತೆ ಇದೆ. ಆದರೆ, 24 ಗಂಟೆಗೆ ಕೇವಲ 2 ಲಿಕ್ವಿಡ್‌ ಸಿಲೆಂಡರ್‌ ಅನ್ನು ಮಾತ್ರ ಸರ್ಕಾರ ನೀಡುತ್ತಿದೆ. ಅಲ್ಲದೆ, ಪ್ರಧಾನ ಮಂತ್ರಿಗಳ ಸಭೆಯಲ್ಲಿ ಕರ್ನಾಟಕದ ಸ್ಥಿತಿಯ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಸಮಸ್ಯೆ ಆಗಲಿದೆ ಎಂದರು.

ಬಿಬಿಎಂಪಿ ಅಧಿಕಾರಿಗಳ ಸಾರ್ವಜನಿಕ ರಜೆ ರದ್ದು :

ನಗರದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಎಲ್ಲ ಸಾರ್ವಜನಿಕ ರಜೆಗಳನ್ನು ರದ್ದು ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಆದೇಶ ಮಾಡಿದ್ದಾರೆ. ನಗರದಲ್ಲಿ ಸೋಂಕು ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ಸಕ್ರಿಯರಾಗಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಕಾರಣಕ್ಕೂ ಅವರ ಅಧಿಕಾರದ ಕೇಂದ್ರ ಸ್ಥಾನ ಬಿಟ್ಟು ಬೇರೆ ಎಲ್ಲಿಯೂ ಹೋಗದಂತೆ ಹಾಗೂ ಮೊಬೈಲ್‌ ದೂರವಾಣಿ ಸಂಖ್ಯೆಯನ್ನು ಚಾಲ್ತಿಯಲ್ಲಿ ಇರಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ, ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ತೆರೆದ ಪ್ರದೇಶದಲ್ಲಿ ಸೋಂಕು ಹಬ್ಬದು :

ಜನ ಹೆಚ್ಚು ಸೇರುವ ಪ್ರದೇಶದಲ್ಲಿ ಕೋವಿಡ್ ಸೋಂಕು ವೇಗವಾಗಿ ಹಬ್ಬುತ್ತದೆ. ರೆಸ್ಟೋರೆಂಟ್‌, ಬಾರ್‌ಗಳಲ್ಲಿ ಕೇವಲ ಪಾರ್ಸಲ್‌ಗೆ ಅವಕಾಶ ನೀಡಲಾಗಿದೆ. ಉದ್ಯಾನ ಮತ್ತು ಮೈದಾನದಂತಹತೆರೆದ ಪ್ರದೇಶದಲ್ಲಿ ಕೊರೊನಾ ಹಬ್ಬುವುದಿಲ್ಲ. ಹಾಗಾಗಿ, ಆ ಪ್ರದೇಶಗಳಲ್ಲಿ ಹೆಚ್ಚು ಕಟ್ಟುನಿಟ್ಟಿ ನಿರ್ಬಂಧ ಹೇರಿಲ್ಲ ಎಂದು ಮಾಹಿತಿ ನೀಡಿದರು.

ಸಿಲಿಂಡರ್‌ ಕೊರತೆ ಇದೆ: ಮುಖ್ಯ ಆಯುಕ್ತ ಗುಪ್ತ :  ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಲಭ್ಯತೆ ಕಡಿಮೆ ಇದ್ದು, ಸಿಲಿಂಡರ್‌ಗಳ ಕೊರತೆಯೂ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದರು. ನಗರದಲ್ಲಿ ಆಕ್ಸಿಜನ್‌ ಕೊರತೆಯಿಂದರೋಗಿಗಳು ಪರದಾಡುತ್ತಿದ್ದು, ಆಕ್ಸಿಜನ್‌ಪೂರೈಕೆ ಹೆಚ್ಚಿಸುವ ಸಂಬಂಧ ಸರ್ಕಾರನಡೆಸಿದ ಸಭೆ ಬಳಿಕ ಮಾತನಾಡಿದರು. ನಗರದಲ್ಲಿ ಕೋವಿಡ್

ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಜತೆಗೆ ಆಕ್ಸಿಜನ್‌ ಅಭಾವ ಸೃಷ್ಟಿಯಾಗಿದ್ದು, ಇದರ ಬೆನ್ನಲ್ಲೇ ಸಿಲಿಂಡರ್‌ಗಳ ಕೊರತೆಯೂ ಶುರುವಾಗಿದೆ. ಹೀಗಾಗಿ, ಬೇರೆ ರಾಜ್ಯಗಳಿಂದ ಸಿಲಿಂಡರ್‌ ಪಡೆದುಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದರು.

ಹಾಸಿಗೆ ಸಮಸ್ಯೆ ನೀಗಿಸುವ ನಿಟ್ಟಿನಲ್ಲೂ ಆಸ್ಪತ್ರೆಗಳಿಂದ ಹಾಸಿಗೆ ಪಡೆದುಕೊಳ್ಳುವುದರ ಜೊತೆಗೆ ಬೇರೆ ಕ್ರಮಗಳ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು ಹೋಟೆಲ್‌ ಜತೆ ಒಪ್ಪಂದ ಮಾಡಿಕೊಳ್ಳಲು ಇಚ್ಛಿಸಿದರೆ, ಹೋಟೆಲನ್ನು ಕೋವಿಡ್‌ ಆರೈಕೆ ಕೇಂದ್ರ ಅಥವಾ ತಾತ್ಕಾಲಿಕ ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು. ಖಾಸಗಿ ಆಸ್ಪತ್ರೆಗಳಿಂದ ಹಾಸಿಗೆ ಪಡೆಯಲು ಪಾಲಿಕೆ ಮತ್ತು ಪೊಲೀಸರನ್ನು ಒಳಗೊಂಡ ತಂಡ ರಚಿಸಲಾಗಿದ್ದು, ಆಸ್ಪತ್ರೆಗಳಲ್ಲಿ ಪರಿಶೀಲನೆನಡೆಸುತ್ತಿದ್ದಾರೆ. 7500ರಿಂದ 11 ಸಾವಿರಕ್ಕೆ ಹಾಸಿಗೆಗಳ ಸಂಖ್ಯೆ ಹೆಚ್ಚಿಸಬೇಕಿದೆ ಎಂದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರ‌ಲ್ಲಿ ವಂಚನೆ

Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರ‌ಲ್ಲಿ ವಂಚನೆ

Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ

Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ

Bengaluru: ಸಿನಿಮೀಯವಾಗಿ ಬೈಕ್‌ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ

Bengaluru: ಸಿನಿಮೀಯವಾಗಿ ಬೈಕ್‌ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.