ವಾರಾಂತ್ಯದ ಕರ್ಫ್ಯೂ: ಮಂಡ್ಯದಲ್ಲಿ ಸ್ವಇಚ್ಛೆಯಿಂದ ಅಂಗಡಿ ಮುಚ್ಚಿದ ವ್ಯಾಪಾರಿಗಳು
Team Udayavani, Apr 24, 2021, 11:54 AM IST
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಾರಂತ್ಯದ ಕರ್ಫ್ಯೂ ಜಾರಿ ಮಾಡಿರುವ ಸರ್ಕಾರದ ಕ್ರಮದ ಕಾರಣದಿಂದ ಸಕ್ಕರೆ ನಾಡಿನಲ್ಲಿ ಸಂಪೂರ್ಣ ಸ್ತಬ್ಧಗೊಂಡಿದೆ.
ಕರ್ಫ್ಯೂ ಪಾಲಿಸಲು ನಗರದ ಜನತೆ ಬೆಂಬಲ ನೀಡುತ್ತಿದ್ದಾರೆ. ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದೆ.
ಇದನ್ನೂ ಓದಿ:ಕೋವಿಡ್ ರಣಕೇಕೆ : ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಜಪಾನ್ ಸರ್ಕಾರ
ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದ ಪೇಟೆಬೀದಿ, ವಿವಿ ರಸ್ತೆ, ನೂರಡಿ ರಸ್ತೆ, ವಿನೋಬಾ ರಸ್ತೆ, ಬೆಂಗಳೂರು-ಮೈಸೂರು ಹೆದ್ದಾರಿಗಳು ಸ್ತಬ್ಧಗೊಂಡಿದೆ.
ಅಗತ್ಯ ವಸ್ತುಗಳ ಸೇವೆಗೆ ಬೆಳಿಗ್ಗೆ 6 ರಿಂದ 10ರವರೆಗೆ ಅವಕಾಶ ನೀಡಲಾಗಿತ್ತು. ನಂತರ ಎಲ್ಲರನ್ನು ಮನೆಗೆ ಕಳುಹಿಸಲು ಪೊಲೀಸರು ಕಾರ್ಯಾಚರಣೆ ಮೂಲಕ ಬಂದ್ ಮಾಡಿಸಿದರು.
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ. ರಸ್ತೆಗಳು ಖಾಲಿ ಖಾಲಿಯಾಗಿದ್ದು, ಜನಸಂಚಾರ ವಾಹನಗಳ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿವೆ.
ಆಸ್ಪತ್ರೆ, ಮೆಡಿಕಲ್, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪೊಲೀಸರು ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದು, ಸುಖಾಸುಮ್ಮನೆ ಓಡಾಡುವ ಜನರು, ವಾಹನಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.